ಗೃಹಲಕ್ಷ್ಮಿಯ 19,20 ನೇ ಕಂತಿನ ಹಣ ಬಿಡುಗಡೆ: ಗುಡ್‌ ನ್ಯೂಸ್‌ ಇಲ್ಲಿದೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯು. ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಸಹಾಯಧನವನ್ನು ಒದಗಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಗೃಹ ಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿಯನ್ನು ತೋರಿಸುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯ ಖಾತೆಗೆ ಜಮಾ ಮಾಡಿದ್ದು. ಬಾಕಿ ಉಳಿದಿರುವ ಎರಡು ತಿಂಗಳ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ…

Spread positive news
Read More

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ,…

Spread positive news
Read More

ರೈತರೇ ಎಚ್ಚರ! ಸಿಡಿಲಿನ ಅಬ್ಬರಕ್ಕೆ 82 ಸಾವು

ಇಷ್ಟು ದಿನ ಮಳೆ ಇಲ್ಲದೆ ಬಿಸಿಲಿನ ಶಾಖ ಅನುಭವಿಸುತ್ತಿದ್ದ ರಾಜ್ಯದ ಜನ ನಿನ್ನೆಯಿಂದ ಮಳೆಯನ್ನು ನೋಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಆಗಮನದ ಹಿಂದೆ, ಮುಂದೆ ಅಬ್ಬರಿಸುವ ಸಿಡಿಲು ಬಡಿತದ ಪ್ರಕರಣಗಳು ಸರ್ಕಾರಕ್ಕೆ ಸವಾಲಾಗುತ್ತಿವೆ. ಇತರ ವಿಪತ್ತುಗಳಿಗೆ ಹೋಲಿಸಿದಲ್ಲಿ ಸಿಡಿಲು ಬಡಿತ ಸಂಖ್ಯೆಯಲ್ಲಿ ಕಡಿಮೆ ಇದ್ದರೂ ಪರಿಣಾಮ ಮಾತ್ರ ಭೀಕರವಾಗಿದೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಗೆ 571 ಜೀವಿಗಳು ಬಲಿಯಾಗಿದ್ದು, ಈ ಪೈಕಿ 244 ಜನರು ಸಿಡಿಲಿನಿಂದಲೇ ಜೀವ…

Spread positive news
Read More

ರೈತರಿಗೆ ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ…

Spread positive news
Read More

ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ..? ಬಂತು ಹೊಸ ರೂಲ್ಸ್‌

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ. ರೈತರು ತಮ್ಮ ಕೃಷಿ…

Spread positive news
Read More

ನಿಮಗೆ ಪಿಎಂ ಕಿಸಾನ್ ಹಣ ಸಿಗುತ್ತಿಲ್ಲವೇ..? ಅದಕ್ಕೆ ಕಾರಣಗಳು ಇಲ್ಲಿವೆ!

ಕೇಂದ್ರ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ನೀಡಲಾಗುವ ಯೋಜನೆಗಳಲ್ಲಿ ಒಂದಾಗಿದೆ. ಫಲಾನುಭವಿಗಳು ಈಗ 20 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರು ಪ್ರತಿ ರೈತನಿಗೆ ರೂ.ಗಳ ಆರ್ಥಿಕ ಸಹಾಯವನ್ನು ಪಡೆಯುತ್ತಾರೆಪ್ರತಿ ವರ್ಷ 6000 ರೂ. ಈ ಹಣವನ್ನು ರೈತರಿಗೆ ಮೂರು ಪ್ರತ್ಯೇಕ ಕಂತುಗಳಲ್ಲಿ ಒದಗಿಸಲಾಗುವುದು. ಈ ಯೋಜನೆಯನ್ನು ಪ್ರಧಾನಿ ಮೋದಿ 2019 ರಲ್ಲಿ ಪ್ರಾರಂಭಿಸಿದರು. ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು…

Spread positive news
Read More

ಈ ರಾಜ್ಯದ ರೈತರಿಗೆ ಉಚಿತ ವಿದ್ಯುತ್ ನೀಡಿದ ಸರ್ಕಾರ

ಪ್ರೀಯ ರೈತರೇ ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಕೆಲವು ಯೋಜನೆಗಳು ಮಾತ್ರ ರೈತರಿಗೆ ದೊರೆಯುತ್ತಿದೆ. ಅದೇ ರೀತಿ ಈಗ ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ದೊರಕುವ ಯೋಜನೆಗಳ ಬಗ್ಗೆ ತಿಳಿಯೋಣ. ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ….

Spread positive news
Read More

ಈ ಜಿಲ್ಲೆಗಳಲ್ಲಿ ಏ.18 ರವರೆಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ

ಏಪ್ರಿಲ್ 18 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭರ್ಜರಿ ಮಳೆಯಾಗಲಿದೆ.ಈ ಬಾರಿ 2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರಲ್ಲಿ ವರುಣನ…

Spread positive news
Read More

ಮಳೆಯಿಂದಾಗಿ 12,726 ಹೆಕ್ಟೇರ್ ಬೆಳೆ ನಾಶ! ಬೆಳೆ ಪರಿಹಾರಕ್ಕೆ ಹೀಗೆ ಮಾಡಿ

ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು. 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. ಈ ಬಗ್ಗೆ ಸಿಎಂ ಹಾಗೂ ಮಿನಿಸ್ಟರ್ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇವೆ. ಬೆಳೆ ಹಾನಿ ಬಗ್ಗೆ ಪರೀಶಿಲನೆ ನಡೆಸಿ, ವರದಿ ನೀಡಲು ಹೇಳಿದ್ದೇನೆ. ರೈತರ ಹಾನಿಗೆ…

Spread positive news
Read More

ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ….

Spread positive news
Read More