ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಿದೆ. ಬುಧವಾರದಿಂದ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ. 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 13 ಮತ್ತು 14 ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದ ಮಳೆ ಆರಂಭವಾಗಲಿದೆ. ನಂತರ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ವ್ಯಾಪಿಸಲಿದೆ ಎಂದು ಹೇಳಲಾಗಿದೆ.
ಮೇ 8ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ. ಇದೇ ಹವಾಮಾನ ಮುಂದಿನ ಎರಡು ದಿನ ಮುಂದುವರಿಯಲಿದೆ. ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಬಿಸಿಲು ತೀವ್ರ
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಿಸಿಲಿನ ತೀವ್ರತೆ ಹೆಚ್ಚಿರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಮಳೆ ಪ್ರಮಾಣ: ಸೋಮವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅತಿ ಹೆಚ್ಚು 7 ಸೆಂ.ಮೀ. ಮಳೆ ದಾಖಲಾಗಿದೆ.ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದಲ್ಲಿ 5 ಸೆಂ.ಮೀ., ಚಾಮರಾಜನಗರ, ಮಂಡ್ಯ ಜಿಲ್ಲೆಯ ಹೊನಕೆರೆಯಲ್ಲಿ ತಲಾ 3 ಸೆಂ.ಮೀ., ಕೋಲಾರ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ತುಮಕೂರು ಜಿಲ್ಲೆಯ ಮಿಡಿಗೇಶಿ, ಗುಬ್ಬಿ, ಕೊಡಗು ಜಿಲ್ಲೆಯ ಭಾಗಮಂಡಲಗಳಲ್ಲಿ 2 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದ ಎಂಎಂ ಹಿಲ್ಸ್, ಕೊಳ್ಳೇಗಾಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ತಲಾ 1 ಸೆಂ.ಮೀ. ಮಳೆ ಸುರಿದಿದೆ ಎಂದು ವರದಿಯಾಗಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ವ್ಯಾಪಿಸಲಿದೆ.
ಮುಂದಿನ 48 ಗಂಟೆಯಲ್ಲಿ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯ ಜತೆ ಜತೆಗೆ ಉಷ್ಣ ಅಲೆ ಇರಲಿದೆ. ಮಳೆಯೊಂದಿಗೆ ಮುಂದಿನ ಎರಡು ದಿನ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಏರಿಕೆಯ ಭಾಸವಾಗಲಿದ್ದು, ಸೆಕೆಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ನಂಜನಗೂಡಿನಲ್ಲಿ ಅತಿ ಹೆಚ್ಚು 7 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಕೃಷ್ಣರಾಜಸಾಗರದಲ್ಲಿ 5, ಚಾಮರಾಜನಗರ, ಮಂಡ್ಯದ ಹೊನಕೆರೆಯಲ್ಲಿ ತಲಾ 3 ಸೆಂ.ಮೀ, ತುಮಕೂರಿನ ಮಿಡಿಗೆರೆ, ಕೋಲಾರ, ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಭಾಗಮಂಡಲ, ಗುಬ್ಬಿಯಲ್ಲಿ ತಲಾ 2 ಸೆಂ.ಮೀ, ದೇವನಹಳ್ಳಿ, ಕೊಳ್ಳೇಗಾಲ, ಮಂಡ್ಯದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 44.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.