ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.
ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು
ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇಸ್ಟೋರ್ನಿಂದ ಬೆಳೆ ಸಮೀಕ್ಷೆ ಮುಂಗಾರು ಹಂಗಾಮಿನ “ಕ್ರಾಪ್ ಸರ್ವೇ ಖಾರಿಫ್ 2024” (Crop Survey Kharif 2024) ಆಪ್ನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿಕೊಂಡು ಆಪ್ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.ಜಿಲ್ಲೆಯಲ್ಲಿ 3,80,888 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು.
ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆ ವಿಮೆ ಜಮೆ ಆಗಿದೆಯೇ ಅಥವಾ ಇಲ್ಲವೋ ಎಂದು ಹೇಗೆ ತಿಳಿಯುವುದು? ಬನ್ನಿ ಅದರ ಸಂಪೂರ್ಣ ಮಾಹಿತಿ ತಿಳಿಯೋಣ.
ಈಗಾಗಲೇ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆವಿಮೆ ಅರ್ಜಿ ಆಹ್ವಾನ ಕರೆದಿದ್ದು ರೈತರು ಸಹ ಅರ್ಜಿ ಹಾಕಿದ್ದಾರೆ. ಆದರೆ ಈ ಹಣ ಬರಬೇಕಾದರೆ ರೈತರು ಮುಖ್ಯವಾಗಿ ತಮ್ಮ ಮೊಬೈಲ್ ಮೂಲಕ ಬೆಳೆಸಮೀಕ್ಷೆ ಮಾಡಬೇಕು, ರೈತರು ಈ ಬೆಳೆವಿಮೆ ಯೋಜನೆ ಲಾಭ ಪಡೆಯಲು ರೈತರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಅದಕ್ಕೆ ರೈತರು ತಮ್ಮ ಅನುಕೂಲಕ್ಕೆ ತಕ್ಕಂತೆ ಮೊಬೈಲ್ ಮೂಲಕ ಬೆಳೆಸಮೀಕ್ಷೆ ಮಾಡಬೇಕು. ಹಾಗೂ ಬೆಳೆ ಸಮೀಕ್ಷೆ ಆಗಿದೆಯೇ ಇಲ್ಲವೇ ಎಂದು ತಿಳಿಯುವುದು ಮುಖ್ಯ ಪಾತ್ರ ವಹಿಸುತ್ತದೆ. ಬೆಳೆ ಸಮೀಕ್ಷೆ ಹೇಗೆ ಮಾಡಬೇಕು ಎಂದು ಕೆಳಗೆ ಮಾಹಿತಿ ನೀಡಲಾಗಿದೆ.
ರಾಜ್ಯದ ಬರಪೀಡಿತ ತಾಲ್ಲೂಕುಗಳಲ್ಲಿ ಅಧಿಕಾರಿಗಳು ಶೀಘ್ರ ಮತ್ತು ನ್ಯಾಯಬದ್ಧವಾಗಿ ಬೆಳೆ ಸಮೀಕ್ಷೆ ನಡೆಸಿದರೆ ಮಾತ್ರ ರಾಜ್ಯದ ರೈತರಿಗೆ ಬೆಳೆ ನಷ್ಟ ತುಂಬಿಕೊಡಲು ಸಾಧ್ಯ ಆ ನಿಟ್ಟಿನಲ್ಲಿ ಅಧಿಕಾರಿಗಳು ಸೆ.30ರೊಳಗೆ ಬೆಳೆ ಸಮೀಕ್ಷೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕೆಲಸವೂ ಪ್ರಗತಿಯಲ್ಲಿದೆ. ಆದರೆ, ತಹಶೀಲ್ದಾ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ರೈತನ ಬೆಳೆ ಸಮೀಕ್ಷೆ ನಡೆಸಿ ಆನೈನ್ ಮೂಲಕ ದಾಖಲಿಸಬೇಕು. ಆಗಮಾತ್ರ ರೈತರಿಗೆ ನ್ಯಾಯಯುತ ಬೆಳೆ ನಷ್ಟ ಪರಿಹಾರ ನೀಡುವುದು ಸಾಧ್ಯ ಎಂದು ತಿಳಿಸಿದರು. ಜಂಟಿ ಬೆಳೆ ಸಮೀಕ್ಷೆಗೆ ಸಮಯಾವಕಾಶ ನೀಡಲಾಗುವುದು. ಆದರೆ, ಒಮ್ಮೆ ಬೆಳೆ ಸಮೀಕ್ಷೆ ಮುಗಿಸಿದ ನಂತರ ಬಿಟ್ಟುಹೋದ ರೈತರ ಹೆಸರನ್ನು ಮತ್ತೆ ಪರಿಹಾರದ ಪಟ್ಟಿಗೆ ಸೇರಿಸುವುದು ಅಸಾಧ್ಯ. ಹೀಗಾಗಿ ಅಧಿಕಾರಿಗಳು ಈಗಲೇ ಬೆಳೆ ಸಮೀಕ್ಷೆಯನ್ನು ಶೇ.100 ರಷ್ಟು ಮಾಡಿ,ದಕ್ಷತೆಯಿಂದ ಮುಗಿಸಬೇಕು. ಬೆಳೆ ಸಮೀಕ್ಷೆಯಿಂದ ಮಾತ್ರ ರೈತರಿಗೆ ಪರಿಹಾರ ನೀಡಲು ಸಾಧ್ಯ ಎಂದು ಸಚಿವರು ತಾಕೀಕು ಮಾಡಿದರು.
ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ. https://youtu.be/12y0D8uyTMs
ನಾವು 2024 ರ ಆರಂಭಿಕ ಮತ್ತು ತಡವಾದ ಖಾರಿಫ್ ಗಾಗಿ PR ಸಮೀಕ್ಷೆ ಮತ್ತು ಮರು-ಸಮೀಕ್ಷೆ ಏಕ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದೇವೆ.
ಖಾರಿಫ್ 2024 ಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ದಯವಿಟ್ಟು ಕೆಳಗಿನ ಗೂಗಲ್ ಪ್ಲೇ ಸ್ಟೋರ್ ಲಿಂಕ್ ಅನ್ನು ಹುಡುಕಿ.
play.google.com/store/apps/…
ಗಮನಿಸಿ: ತಡವಾಗಿ ಖಾರಿಫ್ ಗ್ರಾಮ ಸಮೀಕ್ಷೆಯನ್ನು ಹಂತ I ಮತ್ತು 2 ಗ್ರಾಮಗಳಿಗೆ ತಾಲೂಕು ಎಡಿಎ ಗುರುತಿಸಿದ ಮಾಸ್ಟರ್ ಡೇಟಾ ಎಂಟ್ರಿ ಆಧರಿಸಿ ಅನುಮತಿಸಲಾಗುತ್ತದೆ.
ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ದಯವಿಟ್ಟು ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಿ.