ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಂಗವಾಗಿ ಫೆಬ್ರವರಿ 27 ರಂದು ಎಂಟು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವ ಮೂಲಕ 16,000 ಕೋಟಿ ರೂ.ಗಳ 13 ನೇ ಕಂತನ್ನು ಬಿಡುಗಡೆ ಮಾಡಿದರು. ಅನರ್ಹ ರೈತರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಒಬ್ಬ ರೈತರಿಗೆ 6000 ನೀಡುವ ಜೊತೆಗೆ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಈ ಯೋಜನೆಗೆ ಇನ್ನೂ ನಾಲ್ಕು ಸಾವಿರ ಸೇರಿಸಿ ಒಟ್ಟು 10,000ವನ್ನು ಪಾವತಿ ಮಾಡುತ್ತಿದೆ.
ಪ್ರೀಯ ರೈತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 13ನೇ ಕಂತಿನ ಮೊತ್ತವನ್ನು 27/3/2023 ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಈ ಯೋಜನೆಯಲ್ಲಿ, ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ 6,000 ರೂ.ಗಳನ್ನು ತಲಾ 2,000 ರೂ.ಗಳಂತೆ ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ.
ಪಿಎಂ ಕಿಸಾನ್ ಹಳ್ಳಿವಾರು ಪಟ್ಟಿ ಚೆಕ್ ಮಾಡುವ ವಿಧಾನ:
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ನೀವು ಪರಿಶೀಲಿಸಬಹುದು. ಮೊದಲು http://pmkisan.gov.inನಲ್ಲಿ PM Kisan ವೆಬ್ ಸೈಟ್ ಗೆ ಹೋಗಿ.
ಒಂದು ಬದಿಯಲ್ಲಿ ‘ಫಾರ್ಮರ್ಸ್ ಕಾರ್ನರ್ ಸೆಕ್ಷನ್’ ಮೇಲೆ ಕ್ಲಿಕ್ ಮಾಡಿ ಮತ್ತು ‘ಫಲಾನುಭವಿಗಳ ಪಟ್ಟಿ’ ವಿಭಾಗಕ್ಕೆ ಹೋಗಿ. ನಿಮ್ಮ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ನೀವು ಆಯ್ಕೆ ಮಾಡಬೇಕು.
ಫಲಾನುಭವಿಗಳು ನಂತರ ನಿಮ್ಮ ಸಂಖ್ಯೆ, ಆಧಾರ್ ಸಂಖ್ಯೆ ಅಥವಾ ಖಾತೆ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ನಂತರ ಸಲ್ಲಿಸು ಕ್ಲಿಕ್ ಮಾಡಿ.. ‘ವರದಿ ಪಡೆಯಿರಿ’ ಕ್ಲಿಕ್ ಮಾಡಿ. ಫಲಾನುಭವಿಗಳ ಪಟ್ಟಿ ಈಗ ಪರದೆಯ ಮೇಲೆ ಕಾಣಿಸುತ್ತದೆ.
ವರದಿ ಪಡೆಯಿರಿ’ ಬಟನ್ ಕ್ಲಿಕ್ ಮಾಡಬೇಕು.
ನಂತರ, ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತದೆ.