ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಪಡೆಯಲು ಕುಟುಂಬದ ಯಜಮಾನಿ ಮಹಿಳೆ ಎಂಬುದಾಗಿ ರೇಷನ್ ಕಾರ್ಡ್ ನಲ್ಲಿ ( Ration Card ) ಇರಬೇಕಾಗಿರುತ್ತದೆ.
ಈ ಹಿನ್ನಲೆಯಲ್ಲಿ ಈಗ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನರ ಹೆಸರು ಬದಲಾವಣೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು,ರೇಷನ್ ಕಾರ್ಡ್ ಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು,ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು
1.ರೇಷನ್ ಕಾರ್ಡ್ಗೆ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಕುಟುಂಬದ ಯಜಮಾನರ ಬಳಿ ರೇಷನ್ ಕಾರ್ಡ್ ಹಾಗೂ ಅದರ ಜೆರಾಕ್ಸ್ ಪ್ರತಿ
2. ಮಗುವಿನ ಅಥವಾ ಕುಟುಂಬದ ಹೊಸ ಸದಸ್ಯರ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್
3. ಮಗುವಾಗಿದಲ್ಲಿ ಪೋಷಕರ ಆಧಾರ್ ಕಾರ್ಡ್.
4. ಹೊಸ ವಿವಾಹಿತ ಮಹಿಳೆಯಾಗಿದ್ದರೆ ಆಧಾರ್ ಕಾರ್ಡ್, ವಿವಾಹ ಪ್ರಮಾಣಪತ್ರ, ತನ್ನ ಪೋಷಕರ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
ಯಜಮಾನರ ಹೆಸರು ರೇಷನ್ ಕಾರ್ಡ್ನಲ್ಲಿ ಬದಲಾವಣೆ ಮಾಡುವ ವಿಧಾನ
1 ಸಮೀಪದ ಪಡಿತರ ಚೀಟಿ ಸೇವಾಕೇಂದ್ರಗಳಿಗೆ ಭೇಟಿ ನೀಡಿರಿ
2.ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಅರ್ಜಿಯನ್ನು ಭರ್ತಿ ಮಾಡಿ
3.ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಕೂಡಾ ಸಲ್ಲಿಸಿ.
4.ಬಯೋಮೆಟ್ರಿಕ್ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ
5.ಪಡಿತರ ಸೇವಾ ಕೇಂದ್ರದಲ್ಲಿ ಎಲ್ಲ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ.
6.ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿರಿ
7,ಬಳಿಕ ಆಹಾರ ಕಚೇರಿಯಲ್ಲಿ ನಿಮಗೆ ಎಸ್ಎಂಎಸ್ ಬರಲಿದೆ
8,ಎಸ್ಎಂಎಸ್ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರ ಬಳಸಿಕೊಂಡು ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.