ಮೆಕ್ಕೆಜೋಳ ಖರೀದಿ : ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ లు ಅಧ್ಯಕ್ಷರು, ಸದಸ್ಯರು ಉತ್ಪಾದಕರು ಮತ್ತು ಸಿಬ್ಬಂದಿಗಳಿಗೆ ತಿಳಿಯಪಡಿಸುವದೆನೇಂದರೆ, ದಿನಾಂಕ 01.12.2025 ರಿಂದ ಧಾರವಾಡ ಪಶು ಆಹಾರ ಕಾರ್ಖಾನೆಯ ಪಶು ಆಹಾರ ಉತ್ಪಾದನೆ ಘಟಕದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು ಖರೀದಿಸಲು ಸರ್ಕಾರವು ನಿಗದಿಪಡಿಸಿದ ಎಮ್.ಎಸ್.ಪಿ ದರದಂತೆ ರೂ 2400/-(ಮೂಲ ಬೆಲೆ,ಪ್ರತಿ ಕ್ವಿಂಟಾಲ್‌ಗೆ ಎರಡು ಗೋಣಿಚೀಲದ ಮೊತ್ತ, ಸಾಗಾಣಿಕೆ ವೆಚ್ಚ ಸೇರಿದಂತೆ)ಪ್ರತಿ ಕ್ವಿಂಟಾಲ್‌ಗೆ ರೈತರಿಂದ ಖರೀದಿಸಲು ಸರ್ಕಾರದಿಂದ ಆದೇಶವಾಗಿರುತ್ತದೆ.ಆದ್ದರಿಂದ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ರೈತರಿಂದ ಖರೀದಿಸಲು ಈ ಕೆಳಕಂಡ ಷರತ್ತು ಮತ್ತು ನಿಬಂಧನೆಗಳನ್ನು ಅನುಸರಿಸಲು ಕೋರಿದೆ. ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಮುರು ಹಂತವನ್ನಾಗಿ ವಿಂಗಡಿಸಿ ಅನುಷ್ಠಾನಕ್ಕೆ ತರಲಾಗುವದು.
ಮೊದಲನೆಯ ಹಂತ :-
ಸರ್ಕಾರದ ಮಾರ್ಗಸೂಚಿಗಳಂತೆ ಪಶುಆಹಾರ ಘಟಕಗಳ ಪ್ರಾಂಗಣದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಒಕ್ಕೂಟದ ಎಲ್ಲಾ ಉಪಕೇಂದ್ರ ಕಚೇರಿಯ ಉಪಕೇಂದ್ರ ಅಧಿಕಾರಿಗಳು, ವಿಸ್ತರಣಾಧಿಕಾರಿಗಳು ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ NeML ಸಂಸ್ಥೆಯವರು ಅಭಿವೃದ್ಧಿ ಪಡಿಸಿರುವ “e-ಸಂವೃದ್ಧಿ” ಮತ್ತು ಸರ್ಕಾರದ “FRUITS” ತಂತ್ರಾಂಶದ ಮೂಲಕ ರೈತರು ನೊಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ಉಪಕೆಂದ್ರವಾರು ನೋಂದಣಿ ಅಧಿಕಾರಿಗಳ ವಿವರ ಈ ಕೆಳಕಂಡಂತೆ ಇರುತ್ತದೆ.
ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಾಣಿಕೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಡಿಸ್ಟಿಲರಿಗಳು 7ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿದೆ. ಕೆಎಂಎಫ್ 50ಸಾವಿರ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಇದೇ ರೀತಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯ ಇಂಡೆಂಟ್ ನೀಡಿ 5ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಪ್ರಾರಂಭಿಸಲು ಸೂಚನೆ ನೀಡಿದರು. ರಾಜ್ಯದಲ್ಲಿ ಖಾರಿಫ್ ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ.50-60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇನ್ನೂ ಸಾಕಷ್ಟು ಜನ ಇದ್ರು ಸದುಪಯೋಗ ಪಡೆಯುತ್ತಿಲ್ಲ. ಅದೇ ರೀತಿ ಭಾರತದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು (MSME) ಆರ್ಥಿಕತೆಯ ಮುಖ್ಯ ಅಸ್ಥಂಭಗಳಾಗಿವೆ. ಜಿಡಿಪಿಗೆ 30% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿವೆ ಮತ್ತು 11 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತವೆ. ಆದರೆ, ಹೆಚ್ಚಿನ MSME ಗಳಿಗೆ ಔಪಚಾರಿಕ ಸಾಲ ಲಭ್ಯವಿಲ್ಲ.
ಸರಕಾರವು ಈ ಅಗತ್ಯವನ್ನು ಪೂರ್ಣಗೊಳಿಸಲು ಮುದ್ರಾ ಯೋಜನೆ, ಸಿಜಿಟಿಎಂಎಸ್‌ಇ (CGTMSE), ಪಿಎಂಇಜಿಪಿ (PMEGP) ಸೇರಿದಂತೆ ಹಲವು MSME ಸಾಲ ಯೋಜನೆಗಳನ್ನು ಆರಂಭಿಸಿದೆ.
ಈ ಯೋಜನೆಗಳು ಹೊಸ ಮತ್ತು ಸ್ಥಾಪಿತ ಉದ್ಯಮಗಳಿಗೆ ಅಡಮಾನ-ರಹಿತ (collateral-free) ಸಾಲ, ಸಬ್ಸಿಡಿ, ತ್ವರಿತ ಅನುಮೋದನೆ ಮತ್ತು ಉತ್ತಮ ಬಡ್ಡಿದರಗಳ ಮೂಲಕ ಬೆಂಬಲ ನೀಡುತ್ತವೆ. ಡಿಜಿಟಲ್ ವೇದಿಕೆಗಳ ಮೂಲಕ ಕೆಲವೊಂದು ಯೋಜನೆಗಳಲ್ಲಿ 2 ಕೋಟಿ ರೂ.ವರೆಗೂ ನಿಧಿ ಲಭ್ಯವಿದೆ.

