ತೊಗರಿ ಬೆಂಬಲ ಬೆಲೆ : ಪ್ರೀಯ ರೈತರೇ ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ದೊಡ್ಡ ಬೆಂಬಲ ಸಿಕ್ಕಿದೆ. ತೊಗರಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಖರೀದಿಸಲು ಸರ್ಕಾರವು ಮುಂದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ.
ಎಷ್ಟು ಟನ್ ಖರೀದಿಸಲು ಸರ್ಕಾರವು ಮುಂದಾಗಿದೆ?
2025-26ರ ಖಾರಿಫ್ ಋತುವಿನಲ್ಲಿ ತೊಗರಿ ಖರೀದಿಗಾಗಿ ಬೆಲೆ ಬೆಂಬಲ ಯೋಜನೆ (PSS) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿ.10ರಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದಾರೆ. ಖರೀದಿ ಪ್ರಾರಂಭದ ದಿನಾಂಕದಿಂದ 90 ದಿನಗಳವರೆಗೆ ರಾಜ್ಯದಲ್ಲಿ PSS ಅಡಿಯಲ್ಲಿ ಒಟ್ಟು 9,67,000 MT ತೊಗರಿ ಖರೀದಿಗೆ ಅನುಮೋದನೆ ನೀಡಿದೆ ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. 2025-26ಕ್ಕೆ ಅಂದಾಜು 12.60 LMT ಉತ್ಪಾದನೆಯೊಂದಿಗೆ ಕರ್ನಾಟಕ ಪ್ರಮುಖ ತೊಗರಿ ಬೆಳೆ ಉತ್ಪಾದಕ ರಾಜ್ಯವಾಗಿದೆ. ಮಾರುಕಟ್ಟೆಯಲ್ಲಿ ಮಾದರಿ ಬೆಲೆ ಕ್ವಿಂಟಾಲ್‌ಗೆ ₹ 5,830 ರಿಂದ 6,700ರ ನಡುವಿದೆ.
ಸರ್ಕಾರದಿಂದ ಎಷ್ಟು ಬೆಂಬಲ ಬೆಲೆ ಸಿಗುತ್ತದೆ?
2025-26ಕ್ಕೆ ತೊಗರಿ ಬೆಳೆಗೆ ಘೋಷಿಸಲಾದ MSP ಕ್ವಿಂಟಾಲ್‌ಗೆ ₹. 8,000 ಆಗಿದೆ. ಆದರೆ ಮಾರುಕಟ್ಟೆ ಬೆಲೆ MSP ದರಕ್ಕಿಂತ ಕಡಿಮೆಯಿದೆ. ಹಾಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗಿ ರೈತರ ನೆರವಿಗೆ ಬರುವಂತೆ ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು. ಪ್ರಸಕ್ತ ಖಾರಿಫ್ ಋತುವಿನಲ್ಲಿ (2025-26) ಆದ್ಯತೆ ಆಧಾರದ ಮೇಲೆ NAFED ಮತ್ತು NCCF ಮೂಲಕ ತೊಗರಿ ಖರೀದಿಗೆ ಅನುಮೋದಿಸುವ ಅವಶ್ಯಕತೆಯಿದೆ. ಇದರಿಂದ ತೊಗರಿ ಮಾರಾಟ ತೊಂದರೆ ತಡೆಗಟ್ಟಿ, ರೈತರಿಗೆ ನ್ಯಾಯಯುತ ಬೆಲೆ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಜೋಶಿ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.
ಈಗಾಗಲೇ ಎಷ್ಟು ವಿಮೆ ಬಿಡುಗಡೆ ಮಾಡಲಾಗಿದೆ?
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.
ಎಷ್ಟು ರೈತರಿಗೆ ಈಗಾಗಲೇ ಹಣ ಸಂದಾಯವಾಗಿದೆ?
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬುಧವಾರ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರೀಯತೆ, ಅಮಾನ್ಯವಾದ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ ರೂ.40.09 ಲಕ್ಷ ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ.
ಬೆಳೆ ಕಟಾವು ಇಳುವರಿ ಪ್ರಯೋಗ ವ್ಯತ್ಯಾಸದ ಹಿನ್ನಲೆಯಲ್ಲಿ 798 ಬೆಳೆ ಹೊಂದಾಣಿಕೆಯಾಗದೇ ಹಾಗೂ ಮಾರ್ಗಸೂಚಿಯನುಸಾರ ಬೆಳೆ ಕಟಾವು ಪ್ರಯೋಗಗಳ ಇಳುವರಿ ಲಭ್ಯವಿಲ್ಲದ ಕಾರಣ 14 ರೈತರಿಗೆ ಪರಿಹಾರ ಪಾವತಿ ಬಾಕಿಯಿದೆ. 2025-26ರ ಮುಂಗಾರು ಹಂಗಾಮಿನಲ್ಲಿ ಮಿಮೆ ಮಾಡಿಸುವ ರೈತರ ಸಂಖ್ಯೆ ಹೆಚ್ಚಾಗಿದ್ದು, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,054 ರೈತರು ನೋಂದಾಯಿಸಿಕೊಂಡಿದ್ದಾರೆ. ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ಒಟ್ಟು 9861 ರೈತರಿಗೆ ರೂ.906.32 ಲಕ್ಷಗಳ ಬೆಳೆ ವಿಮೆ ಪರಿಹಾರ ಲೆಕ್ಕಾಚಾರ ಮಾಡಲಾಗಿದ್ದು, ವಿಮಾ ಸಂಸ್ಥೆಯವರಿಂದ ಪರಿಹಾರ ಇತ್ಯರ್ಥ ಪ್ರಕ್ರಿಯೆಯಲ್ಲಿದೆ.
ಎಷ್ಟು ಜನ ರೈತರಿಗೆ ಹಣ ಬರದೇ ಇರಲು ಕಾರಣವೇನು?
ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರೀಯತೆ, ಅಮಾನ್ಯವಾದ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ ರೂ.40.09 ಲಕ್ಷ ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ. ಅದಕ್ಕೆ ರೈತರು ಸಹ ಸರ್ಕಾರವು ಹೇಗೆ ಮಾರ್ಗದರ್ಶನ ನೀಡುತ್ತದೆ ಆದರ ಅನುಗುಣವಾಗಿ ರೈತರು ಹೆಜ್ಜೆ ಹಾಕಿ ಮುಂದಿನ ಕಂತಿನ ಹಣ ಪಡೆಯಬೇಕು.

