ಗೃಹಲಕ್ಷ್ಮಿ ಹಣ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ತಂದಿದ್ದೇವೆ. ರಾಜ್ಯದ ಮಹಿಳೆಯರು ಇದನ್ನು ಸಂಪೂರ್ಣ ಓದಿ ಮಾಹಿತಿ ಪಡೆಯಬೇಕು. ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ ನ್ಯೂಸ್ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿದಂತೆ, ಡಿಸೆಂಬರ್ 16 ರಿಂದಲೇ ಸೆಪ್ಟೆಂಬರ್ ತಿಂಗಳ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ (Payment Processing) ಆರಂಭವಾಗಿದೆ.
ಹಣ ಯಾವಾಗ ಬರುತ್ತದೆ?
ನಮ್ಮ ವೆಬ್‌ಸೈಟ್‌ನ ಓದುಗರೊಬ್ಬರು DBT Karnataka App ಮೂಲಕ ತಮಗೆ ಹಣ ಜಮೆಯಾಗಿರುವ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದು, ಹಣ ಜಮೆಯಾಗುತ್ತಿರುವುದು ದೃಢಪಟ್ಟಿದೆ. ಹಂತ ಹಂತವಾಗಿ ಎಲ್ಲರಿಗೂ ಹಣ ತಲುಪಲಿದ್ದು, ಜನವರಿ 1, 2026ರ ಒಳಗೆ ಬಹುತೇಕರ ಖಾತೆ ಸೇರಲಿದೆ.
ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ –
ಬೆಳಗಾವಿ ಜಿಲ್ಲಾ ವಿಭಜನೆ ಕೂಗು ತಣ್ಣಗಾಯಿತಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್, ಬಹಳ ತೊಂದರೆ ಆಗುತ್ತೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದಿದ್ದಾರೆ.
ಹೀಗೆ ಸದನದಲ್ಲಿ ಗೃಹಲಕ್ಷ್ಮಿ ಹಣದ ಬಗ್ಗೆ ಚರ್ಚೆ ಮಾಡುತ್ತಾ ಹಲವಾರು ನಾಯಕರು ಬೇರೆ ಬೇರೆ ವಿಷಯಗಳ ಬಗ್ಗೆ ಸಹ ವಾದ ವಿವಾದಗಳಿಗೆ ತೆರೆ ಎಳೆದರು. ಅದರಲ್ಲಿ ಮುಖ್ಯವಾಗಿ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಹೊರೆಯಾಗುತ್ತಿದ್ದರು ನಮ್ಮ ಸರ್ಕಾರ ರೈತರ ಪರವಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಕಬ್ಬು, ಮೆಕ್ಕೆಜೋಳದ ಬೆಲೆಗಳ ಬಗ್ಗೆ ಇದ್ದ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ. ಸರ್ಕಾರ ರೈತಪರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ರೈತರು ಗಮನದಲ್ಲಿಟ್ಟುಕೊಳ್ಳಬೇಕು ಎಂದುಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿಯವರು ಹಾಗೂ ಕಂದಾಯ ಸಚಿವರು ಉತ್ತರ ಕರ್ನಾಟಕದ ವಿಚಾರವಾಗಿ ನಡೆದಿರುವ ಚರ್ಚೆಗಳಿಗೆ ಉತ್ತರ ನೀಡುತ್ತಾರೆ. ಈ ಭಾಗದ ನೀರಾವರಿ ಯೋಜನೆಗಳಾದ ಯುಕೆಪಿ, ಮಹದಾಯಿ ವಿಚಾರಗಳ ಬಗ್ಗೆ ಅವಕಾಶ ಸಿಕ್ಕರೆ ಉತ್ತರಿಸುತ್ತೇನೆ ಎಂದರು. ಕೇಂದ್ರ ಸರ್ಕಾರ ಏಕೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡಿಲ್ಲ. ನರೇಗಾ ಅನುದಾನವನ್ನೂ ಇದುವರೆಗೂ ನೀಡಿಲ್ಲ. ಜಲಜೀವನ ಮಿಷನ್ ಹಣವನ್ನೂ ನೀಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನಗಳು, ಜಿಎಸ್ ಟಿ ಪರಿಹಾರ ಸಿಕ್ಕಿಲ್ಲ. ಈಗ ಇವರು ಗೃಹಲಕ್ಷ್ಮಿ ಹಣದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಯವರು ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.
ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಹಿಳೆಯರಿಗೆ 30,000 ರೂ.ನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಿದ್ದಾರೆ.
ಮೊದಲು ನೋಂದಣಿ ಮಾಡಿಕೊಂಡವರಿಗೆ ಸಾಲ ಸೌಲಭ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಕೇವಲ ಆರು ತಿಂಗಳಲ್ಲಿ ಸಾಲ ಸಿಗಲಿದ್ದು, ತಿಂಗಳಿಗೆ 200 ರೂಪಾಯಿಯಂತೆ 6 ತಿಂಗಳು ಹಣ ಕಟ್ಟಿದರೆ ಸದಸ್ಯತ್ವ ಸಿಗುತ್ತದೆ ಎಂದು ತಿಳಿಸಿದ್ದಾರೆ.

