ಎಫ್ ಐಡಿ ನಂಬರ್ ಸುಲಭವಾಗಿ ಹುಡುಕುವುದು ಹೇಗೆ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. Check your FID status in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ ದಾಖಲೆಯಾಗಿ ನೋಡಿ👇🏻).ಆದರೆ ರೈತರೇ ಬಹುಮುಖ್ಯವಾದ ಮಾಹಿತಿ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿ ಜೋಡಣೆಯಾಗುವುದು ಕಡ್ಡಾಯ. ಒಂದು ವೇಳೆ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿ ಜೋಡಣೆಯಾಗದಿದ್ದರೆ ನಿಮಗೆ ಪರಿಹಾರ ಹಣ ಸಿಗುವುದಿಲ್ಲ ತಿಳಿಯಿರಿ ರೈತರೇ, ನಿಮ್ಮ ಹೊಲದ ಇಷ್ಟು ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿದ್ದೀರಾ ಇಲ್ಲವಾ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ.

 

ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ *ರೈತ ಸಂಪರ್ಕ ಕೇಂದ್ರ ಅಥವಾ ನಿಮ್ಮ ಗ್ರಾಮ ಲೆಕ್ಕಿಗ (ತಲಾಟಿ) ಕಚೇರಿಗೆ ಭೇಟಿ ನೀಡಿ* ನಿಮ್ಮ ಎಲ್ಲಾ ಪಹಣಿ/RTC (ಉತಾರಿ) ನಿಮ್ಮ FID ಗೇ ಲಿಂಕ್ ಆಗಿದಿಯೋ ಇಲ್ಲವೋ ಎಂದ ಖಚಿತ ಪಡಿಸಿಕೊಳ್ಳಿ.🙏🏻

ಹೊಸ fid ರೈತ ನೋಂದಣಿ ಅಥವಾ ನಿಮ್ಮ FID ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು 

1) ಆಧಾರ ಪ್ರತಿ

2) ಬ್ಯಾಂಕ್ ಪಾಸ್ ಬುಕ್ ಪ್ರತಿ

3 ) ಉತಾರ್ / ಖಾತೆ ಉತಾರ್

ಹಾಗೂ ಇತ್ತೀಚಿನ ಭಾವಚಿತ್ರ ಪಾಸ್ ಪೋರ್ಟ್ ಸೈಜ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಗ್ರಾಮ ಲೆಕ್ಕಾಧಿಕಾರಿ (ತಲಾಟಿ) ಕಛೇರಿಗೆ ಭೇಟಿ ನೀಡಲು ಈ ಮೂಲಕ ತಿಳಿಸಲಾಗಿದೆ.

ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna ByreGowda) ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ (Fruits Data) ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

* ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

* ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

* ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

ಅದೇ ರೀತಿ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ರೈತರು ಸಂಬಂಧಿ ಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸ ಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,ಎಂದು ಮನವಿ ಮಾಡಿದರು.

 

Spread positive news

Leave a Reply

Your email address will not be published. Required fields are marked *