ಪ್ರೀಯ ರೈತರೇ ಪ್ರಕೃತಿಯ ವಿಕೋಪದ ಕಾರಣದಿಂದ ರೈತರು ಈಗಾಗಲೇ ಸಾಕಷ್ಟು ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ, ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ. ಯಾವ ಯಾವ ರೈತರಿಗೆ ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಜಮೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಬೆಳೆ ವಿಮೆ ಕಂಪನಿಗಳ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಯಾ ಜಿಲ್ಲೆಯ ವಿಮಾ ಕಂಪನಿಗಳ ಪಟ್ಟಿ ತೆರೆದುಕೊಳ್ಳುತ್ತದೆ. ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ಬೆಳೆವಿಮೆ ಉಚಿತ ಸಹಾಯವಾಣಿ ದೂರವಾಣಿ ಸಂಖ್ಯೆಗೆ 1800 180 1551ಗೆ ಕರೆ ಮಾಡಬೇಕು. ಆಗ ನಿಮಗೆ ನಿಮ್ಮ ಜಿಲ್ಲೆಯ ಬೆಳೆ ವಿಮಾ ಕಂಪನಿಯ ಮೊಬೈಲ್ ನಂಬರ್ ನೀಡುತ್ತಾರೆ. ಆ ನಂಬರಿಗೆ ಕರೆ ಮಾಡಿ ನೀವು ಬೆಳೆ ವಿಮೆ ಕುರಿತಂತೆ ಮಾಹಿತಿ ಪಡೆಯಬಹುದು.ಕಳೆದ ಸಾಲಿನಲ್ಲಿ ನೀವು ಬೆಳೆ ವಿಮೆ ಪಾವತಿಸಿದ್ದರೆ ಹಾಗೂ ಬೆಳೆ ವಿಮೆ ಹಣ ಏಕೆ ಜಮೆಯಾಗಿಲ್ಲ, ಅದಕ್ಕೆ ಕಾರಣವೇನು? ಯಾವಾಗ ಬೆಳೆ ವಿಮೆ ಹಣ ಜಮೆಯಾಗುತ್ತದೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ರೈತರು ಮನೆಯಲ್ಲಿಯೇ ಕುಳಿತು ಪಡೆಯಬಹುದು.
ವಿಮೆ ಮಾಡಿಸಿದ ರೈತರು ಯಾವಾಗ ದೂರು ನೀಡಬೇಕು?
ಅತೀವೃಷ್ಟಿ, ಪ್ರವಾಹ, ನಿರಂತರ ಮಳೆ, ಸಿಡಿಲು ಸೇರಿದಂತೆ ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಹಾಳಾದರೆ 72 ಗಂಟೆಯೊಳಗೆ ಸಂಬಂಧಿಸಿದ ವಿಮಾ ಕಂಪನಿಗೆ ದೂರು ನೀಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ದೂರು ನೀಡಿದ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ.
ಬೆಳೆ ವಿಮೆ ಪರಿಹಾರ ಎಂದರೇನು?
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆಗಳಿಗೆ ವಿಮೆ ಕಟ್ಟಿದ ರೈತರಿಗೆ ಅತೀವೃಷ್ಟಿ, ಅಕಾಲಿಕ ಮಳೆ, ಪ್ರವಾಹ,ಬಿರುಗಾಳಿ, ಗುಡುಗು ಸಿಡಿಲು ಸೇರಿದಂತೆ ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಹಾಳಾದರೆ ಬೆಳೆ ವಿಮೆ ಹಣ ಜಮೆಯಾಗುತ್ತದೆ. ಬೆಳೆ ಹಾಳಾದಾಗ 72 ಗಂಟೆಯೊಳಗೆ ಆಯಾ ಜಿಲ್ಲೆಯ ರೈತರು ತಮ್ಮ ಜಿಲ್ಲೆಯ ವಿಮಾ ಕಂಪನಿಗೆ ದೂರು ನೀಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ದೂರು ನೀಡಿದ ರೈತರ ಜಮೀನಿಗೆ ಬಂದು ಹಾಳಾದ ಬೆಳೆಯನ್ನು ಪರಿಶೀಲಿಸಿ ಮೇಲಧಿಕಾರಿಗಳಿಗೆ ವಿಮಾ ಪರಿಹಾರಕ್ಕೆ ವರದಿ ಸಲ್ಲಿಸುತ್ತಾರೆ. ನಂತರ ರೈತರಿಗೆ ಎಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ ಎಂಬುದನ್ನು ನೋಡಿಕೊಂಡು ರೈತರ ಖಾತೆಗೆ ಬೆಳೆ ವಿಮೆ ಹಣವನ್ನು ಜಮೆ ಮಾಡಲಾಗುತ್ತದೆ.
https://landrecords.karnataka.gov.in/PariharaPayment/ ಇದರ ಮೂಲಕ ನೀವು ಪಡೆಯಬಹುದು.
ರೈತರು ಬೆಳೆ ವಿಮೆ ಮಾಡಿಸುತ್ತಾರೆ ಆದರೆ ಯಾವ ಕಂಪನಿಗೆ ಬೆಳೆ ವಿಮೆ ಹಣ ಪಾವತಿಸುತ್ತಾರೋ ಎಂಬ ಬಗ್ಗೆ ಮಾಹಿತಿ ಇರುವುದಿಲ್ಲ. ಅಂತಹ ರೈತರು http://www.samrakshane.karnataka. gov ಲಿಂಕ್ ಮೇಲೆ ಕ್ಲಿಕ್ ಮಾಡುವುದರಿಂದ ಕರ್ನಾಟಕ ರಾಜ್ಯದಲ್ಲಿ ಯಾವ ಜಿಲ್ಲೆಗೆ ಯಾವ ಬೆಳೆ ವಿಮಾ ಕಂಪನಿ ಇದೆ ಎಂಬ ಪಟ್ಟಿ ಸಿಗುತ್ತದೆ. ಆ ಪಟ್ಟಿಯ ಮೂಲಕ ನೀವು ಯಾವ ಬೆಳೆ ವಿಮಾ ಕಂಪನಿಗೆ ಹಣ ಪಾವತಿಸಿದ್ದೀರಿ ಎಂಬುದು ಗೊತ್ತಾಗುತ್ತದೆ.ಬೆಳೆ ಹಾನಿ ಮಾಹಿತಿ ಪಡೆಯಲು ಜಿಲ್ಲೆಯ ಬೆಳೆ ವಿಮಾ ಸಿಬ್ಬಂದಿ ಮೊಬೈಲ್ ನಂಬರ್ ಬೇಕಾದರೆ 18001801551 ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದಾಗಿದೆ.
ಮುಖ್ಯವಾಗಿ ಹೇಳಬೇಕೆಂದರೆ ನಿನ್ನೆ ನಡೆದ ಸಭೆಯಲ್ಲಿ ಪ್ರಕೃತಿಯಲ್ಲಿನ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾದಾಗ ವಿಮೆ ಪರಿಹಾರವನ್ನು ಕಲ್ಪಿಸಲು ಹಾಗೂ ಒಟ್ಟಾರೆ ಕೃಷಿ ಉತ್ಪಾದನೆಯನ್ನು ಅಂದಾಜಿಸಲು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು. ಅದೇ ರೀತಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಮುಖ ಆಹಾರ ಮತ್ತು ಆಹಾರೇತರ ಬೆಳೆಗಳ ಪ್ರತಿ ಹೆಕ್ಟೇರ್‌ನ ಸರಾಸರಿ ಇಳುವರಿಯನ್ನು ಹಾಗೂ ಉತ್ಪಾದನೆಯನ್ನು ಅಂದಾಜಿಸುವುದು ಕೃಷಿಯಲ್ಲಿ ಬಹಳ ಮುಖ್ಯ ಪಾತ್ರವಹಿಸುತ್ತದೆ.