ಕೃಷಿ ಸಿಂಚಾಯಿ ಯೋಜನೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ಸಾಲಿನ ಕೇಂದ್ರ ಪುರಸ್ಕ್ರತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತು ಪಡಿಸಿ) ಹನಿ ನೀರಾವರಿ ಅಳವಡಿಕೆಗಾಗಿ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ.90ರ ಸಹಾಯಧನ ಮತ್ತು ಇತರೆ ರೈತರಿಗೆ ಶೆ. 75ರ ಸಹಾಯಧನವನ್ನು ನೀಡಲಾಗುವುದು. ಹಾಗೂ 2 ಹೆ. ರಿಂದ 5ಹೆ. ಪ್ರದೇಶದವರೆಗೆ ಶೇ. 45ರ ಸಹಾಯಧನವನ್ನು ನೀಡಲಾಗುವುದು.

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ಇಲಾಖಾ ಪಾಲುದಾರಿಕೆ ಕಂಪನಿಯಾದ ರುಚಿ ಸೋಯಾ ಇಂಡ್ಸ್ಸ್ಟ್ರೀಸ್ಸ್ ರವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುಷ್ಟಾನ ಗೊಳಿಸಲಾಗುತ್ತಿದ್ದು ತಾಳೆ ಹೊಸ ಪ್ರದೇಶ ವಿಸ್ತರಣೆಗೆ ರೂ.20 ಸಾವಿರ ಸಹಾಯಧನ ಹಾಗೂ ಮೊದಲ ನಾಲ್ಕು ವರ್ಷದ ಪಾಲನೆಗಾಗಿ 5500 ರಂತೆ ಪ್ರತಿ ಹೇಕ್ಟರ್ಗೆ ನೀಡಲಾಗುವುದು. ಇದರ ಜೊತೆಗೆ ತಾಳೆಯಲ್ಲಿ ಡಿಸೇಲ್ ಪಂಪ್ ಸೆಟ್ ಖರೀದಿಗೆ, ಕಟಾವು ಯಂತ್ರ ಖರೀದಿಗೆ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್ಗೆ ರೂ.5 ಸಾವಿರ ಸಹಾಯಧನವನ್ನು ನೀಡಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿಯಲ್ಲಿ ಪ್ರದೇಶ ವಿಸ್ತರಣೆ, ಕಿತ್ತಳೆ ಮತ್ತು ಕಾಳು ಮೆಣಸು ಪುನಶ್ಚೇತನ ಕಾರ್ಯಕ್ರಮ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಪ್ರಾಥಮಿಕ ಸಂಸ್ಕರಣ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಎಸ್‌ಎಂಎಎಂ ಯಾಂತ್ರೀಕರಣ ಯೋಜನೆಯಡಿ ಇಲಾಖಾ ಮಾರ್ಗಸೂಚಿಯಂತೆ ಅನುಮೋದಿತ ಸಂಸ್ಥೆಯಿಂದ ಖರೀದಿಸಿದ ಮರ ಕತ್ತರಿಸುವ ಯಂತ್ರ, ಪವರ್ ಸ್ಟೇಯರ್, ಕಳೆಕೊಚ್ಚುವ ಯಂತ್ರ, ಏಣಿ, ತಳ್ಳುವ ಗಾಡಿ ಮುಂತಾದ ಯಂತ್ರೋಪಕರಣಗಳಿಗೆ ಶೇ.40/50 ರ ಸಹಾಯಧನ ನೀಡಲಾಗುವುದು.

ಇಚ್ಚಿಸುವ ರೈತರು ನಿಗಧಿತ ಅರ್ಜಿ ನಮೂನೆ, ಆರ್ಟಿಸಿ, ಆಧಾರ್ ಕಾರ್ಡ್ ಹಾಗೂ ಇತ್ಯಾದಿ ದಾಖಲಾತಿಗಳೊಂದಿಗೆ ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಸೆಪ್ಟೆಂಬರ್, 05 ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ ಹಾಗೂ ಸಹಾಯಧನವನ್ನು ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತರು, ಮಹಿಳೆಯರು, ಅಂಗವಿಕಲರಿಗೆ ಆದ್ಯತೆಯನ್ನು ನೀಡಲಾಗುವುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Spread positive news

Leave a Reply

Your email address will not be published. Required fields are marked *