ಅನಾವೃಷ್ಟಿಯಿಂದ ರೈತರಿಗೆ ಬೆಳೆ ಕಾಪಾಡಲು ಕೃಷಿ ಇಲಾಖೆಯಿಂದ ಸಲಹೆಗಳು
ಈ ಬಾರಿ ನೈಋತ್ಯ ಮುಂಗಾರು ಮಳೆ ರೈತರಿಗೆ ನಿರಾಸೆ ಉಂಟು ಮಾಡಿದೆ. ಜೂನ್ ತಿಂಗಳಿನಲ್ಲಿ ಮಳೆಯಾಗದೇ ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ದಿನಗಳ ಕಾಲ ಮಾತ್ರ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ.ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯು ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಮುಂಗಾರು ಬೆಳೆಗಳ ಬಿತ್ತನೆಯನ್ನು ತಡವಾಗಿ ಜುಲೈ ತಿಂಗಳಿನಲ್ಲಿ ಮಾಡಲಾಗಿದೆ. ತಡವಾಗಿ ಬಿತ್ತನೆಯಾ ಕಾರಣದಿಂದಾಗಿ ಮುಂಗಾರು ಬೆಳೆಗಳಿಗೆ ಮುಂದಿನ ದಿನಗಳಲ್ಲಿ ಹಲವಾರು ಕೀಟ, ರೋಗಗಳು ಕಾಣಿಸಿಕೊಳ್ಳುವ ನಿರೀಕ್ಷೆ ಇದೆ….