ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಒಂದೆರಡು ಕಡೆ, ರಾಯಚೂರು ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕನ್ನಡ ಜಿಲ್ಲೆಯ ಪೂರ್ವಭಾಗ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಬೀದರ್ ಜಿಲ್ಲೆಗಳ ಪಶ್ಚಿಮ ಭಾಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದೇ ರೀತಿ ಹಾವೇರಿ, ವಿಜಯನಗರ, ಉತ್ತರ ಕನ್ನಡ ಜಿಲ್ಲೆಯ ಪೂರ್ವ – ದಕ್ಷಿಣದ ತಾಲೂಕುಗಳು, ವಿಜಯನಗರ, ಬಳ್ಳಾರಿ, ದಾವಣಗೆರೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ಹಲವು ಕಡೆ ಮೋಸ ಮುಸುಕಿದ ವಾತಾವರಣವಿದ್ದು, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ.ಮಳೆ ಬಾರದೇ ಕಂಗಾಲಾಗಿದ್ದ ರಾಜ್ಯದ ಜನತೆಗೆ ಸೆಪ್ಟೆಂಬರ್‌ ತಿಂಗಳಿನಲ್ಲಿ ಕೊಂಚ ನಿರಾಳವಾಗಿತ್ತು. ಸೆಪ್ಟೆಂಬರ್‌ ಆರಂಭದಿಂದಲೇ ಮಳೆರಾಯನ ಆಗಮನವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. 10 ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಅರ್ಭಟ ಜೋರಾಗಿತ್ತು.ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ಅಬ್ಬರ ಇನ್ನೂ ಜಾಸ್ತಿ ಆಗಿದೆ. ಕಳೆದ ರಾತ್ರಿ ಉಡುಪಿಯಲ್ಲಿ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್‌ 15ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಇಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೀದರ್‌, ಚಿಕ್ಕಮಗಳೂರು, ಕಲಬುರ್ಗಿಯಲ್ಲೂ ಜೋರು ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜ್ಯದ ದಕ್ಷಿಣ ಒಣನಾಡು ಹಾಗೂ ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗುವ ಬಗ್ಗೆ ಐಎಂಡಿ ವರದಿ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ (ಸೆಪ್ಟೆಂಬರ್‌ 8) ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ನಾಳೆಯು ಕೂಡ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇಂದು ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿತ್ತು, ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ವರದಿ

ಇಂದು ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆ ಸಾಧ್ಯತೆ ಇದೆ ಎಂದು ಐಎಂಡಿ ವರದಿ ತಿಳಿಸಿತ್ತು. ಇಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಈ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ. ಅಲ್ಲದೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಕೂಡ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಕೂಡ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್

ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

ಮಳೆ ಇಲ್ಲದೇ ಕಾದು ಬೆಂಡಾಗಿದ್ದ ಇಳೆಗೆ ವರುಣನ ಆಗಮನದಿಂದ ಕೊಂಚ ನಿರಾಳವಾಗಿದ್ದೇನೋ ನಿಜ. ಆದರೆ ಬಹುತೇಕ ಕಡೆ ಸೆಪ್ಟೆಂಬರ್‌ನಲ್ಲೇ ಬರದ ಪರಿಸ್ಥಿತಿ ಇದೆ. ಬೆಳೆಗಳಿಗೆ ನೀರಿಲ್ಲದೆ ಒಣಗಿ ಹೋಗಿವೆ. ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಸಾಧ್ಯತೆ ಇದೆ. ಈ ತಿಂಗಳಲ್ಲಿ ಉತ್ತಮ ಮಳೆಯಾದರೇ ರೈತರು ಕೊಂಚ ನಿರಾಳರಾಗುವುದಂತೂ ಖಂಡಿತ.

ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ಪಿಎಂ ಕಿಸಾನ್ 15ನೇ ಕಂತು ಪಡೆಯಲು ಹೊಸ ಅಪ್ಡೇಟ್

Spread positive news

One thought on “ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ

Leave a Reply

Your email address will not be published. Required fields are marked *