ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ. ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ. ಮೀಸಲಿಡಲಾಗಿದೆ. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕಗಳು ಕೊರತೆ ಅಗದಂತೆ ಮುನ್ನಚ್ಚರಿಕೆ ವಹಿಸಿ, ಅಗತ್ಯ ದಾಸ್ತಾನು ಮಾಡಲಾಗಿದೆ ಎಂದು ಹೇಳಿದರು.
ಮಳೆ ಕೊರತೆಯಿಂದಾಗಿ ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಎಷ್ಟು ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಿಸಲಿದೆ ಎಂದು ತಿಳಿಸಿದ್ದಾರೆ. ರೈತರು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ದೇಶಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ. ಕೃಷಿಭಾಗ್ಯ ಯೋಜನೆ ಮುಂದುವರಿಕೆಗೆ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ರೈತರ ಬೆಳೆವಿಮೆಗಾಗಿ 900 ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ ಬೆಳೆವಿಮೆ ಮಾಡಿಸಿರುವ ಸುಮಾರು 16 ಲಕ್ಷ ರೈತರು ಲಾಭ ಪಡೆಯಲಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ
ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಹಿಂದಿನ ಬಿಜೆಪಿ ಸರ್ಕಾರ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಳಿಸಿತ್ತು. ಈ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು. ಕೃಷಿ ಭಾಗ್ಯ ಮತ್ತು ಕೃಷಿ ಯಂತ್ರಧಾರೆ ಯೋಜನೆಗಳ ಮರು ಜಾರಿ ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.
ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್
ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ. ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು 15 ಲಕ್ಷ ರೂ.ವರೆಗೆ ಕೇವಲ ಶೇ.3 ರಷ್ಟು ಬಡ್ಡಿ ನಿಗದಿಗೊಳಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ
ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ