ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ?

ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ.

ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ. ವೆಚ್ಚವಾಗಲಿದೆ. ಇದರಲ್ಲಿ ಸರ್ಕಾರ ಶೇ.70 ಸಬ್ಸಿಡಿ ರೂಪದಲ್ಲಿ ನೀಡಲಿದ್ದು, ರೈತರು ಶೇ.30 ಭರಿಸಬೇಕಾಗುತ್ತದೆ. ಈ ಯೋಜನೆಯನ್ನು ಇನ್ನಷ್ಟು ಉತ್ತೇಜನಕಾರಿಯಾಗಿಸಿ ರೈತರನ್ನು ಪ್ರೋತ್ಸಾಹಿಸಲು ಮುಂದಾಗಿದ್ದು, ಎಲ್ಲ ಎಸ್ಕಾಂಗಳಲ್ಲಿಗೂ ಗುರಿ ನೀಡಲು ಇಂಧನ ಇಲಾಖೆ ಕ್ರಮ ಕೈಗೊಂಡಿದೆ.

 

ನಾವು ರೈತರಿಗೆ ಸೈಲಭ್ಯ ಕಲ್ಪಿಸುವ ವಿಚಾರದಲ್ಲಿ ಹಿಂದೆ ಸರಿಯಲ್ಲ. ಯಾವುದೇ ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಬಳಕೆ ಸಂಬಂಧ ಮೀಟರ್ ಅಳವಡಿಕೆ ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

 

ಅಂದಹಾಗೇ ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ( Free Electricity Scheme ) ಸ್ಥಗಿತಗೊಳಿಸಿರುವುದನ್ನು ಖಂಡಿಸಿದ್ದರು.

 

  1. ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ ಸುಮಾರು 4400 ಜಾಲಮುಕ್ತ ಸೌರಶಕ್ತಿ ಚಾಲಿತ ಪಂಪ್‌ಸೆಟ್‌ಗಳನ್ನು ಅಳವಡಿಸುವ ಯೋಜನೆಯನ್ನು ಕೆಆರ್‌ಇಡಿಎಲ್ ಮೂಲಕ ರಾಜ್ಯ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ ವಿತರಿಸಲಾಗುವುದು.
Spread positive news

Leave a Reply

Your email address will not be published. Required fields are marked *