ಮಹಿಳೆಯರಿಗೆ ಸರ್ಕಾರದಿಂದ ಭೂಮಿ ಖರೀದಿಗೆ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಅದೇ ರೀತಿ ಈ ನಿಗಮವು ಮತ್ತೋಂದು ಉದ್ಯೋಗಕ್ಕೆ ಸಹಾಯಧನ ನೀಡಲು ಮುಂದಾಗಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಭೂರಹಿತ ಮಹಿಳೆಯರಿಗೆ ಕೃಷಿ ಮಾಡಲು ಭೂ ಒಡೆತನ ಯೋಜನೆ ಅಡಿಯಲ್ಲಿ ಸಾಲ ಯೋಜನೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯಡಿಯಲ್ಲಿ ಭೂ ರಹಿತ ಮಹಿಳೆಯರಿಗೆ ಕೃಷಿ ಮಾಡಲು ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು. ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಸಹಾಯಧನ ನೀಡಲಾಗುವುದು. ಹಾಗೂ ಸ್ವಯಂ ಜೀವನ ನಡೆಸಲು ಇದೊಂದು ಒಳ್ಳೆಯ ಬೆಳವಣಿಗೆಗೆ ದಾರಿಯಾಗಿದೆ.

 

ಭೂ ಒಡೆತನ ಯೋಜನೆ –

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು. ಘಟಕ ವೆಚ್ಚ: ರೂ. 25,00 ಲಕ್ಷ / ರೂ. 20,00 ಲಕ್ಷ ಸಾವಿ: ಶೇ. 50 (ಶೇಕಡ 6ರಷ್ಟು ಬಡ್ಡಿದರ). ಇದರಲ್ಲಿ ಮಹಿಳೆಯರು ತಮ್ಮ ಸ್ವಂತ ಉದ್ಯೋಗಕ್ಕೆ ಹಾಗೂ ಮಹಿಳೆಯರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಈ ಯೋಜನೆ ಜಾರಿಗೆ ತರುತ್ತಿದೆ. 20 ರಿಂದ 25 ಲಕ್ಷದವರೆಗೆ ಸಹಾಯಧನ ನೀಡಲು ಮುಂದಾದ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ.

 

ಭೂ ಒಡೆತನ ಯೋಜನೆ ಅಡಿಯಲ್ಲಿ 25ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಈ ನೇರ ಸಾಲ ಸೌಲಭ್ಯವನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ? ಅರ್ಜಿಗಳನ್ನು ಸಲ್ಲಿಸುವುದು ಹೇಗೆ? ಮತ್ತು ಅದಕ್ಕೆ ಬೇಕಾದ ದಾಖಲೆಗಳೇನು?ಇವೆಲ್ಲವುಗಳ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.

ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ನಲ್ಲಿ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಫಲಾಪೇಕ್ಷಿಗಳು ಗ್ರಾಮ ಒನ್ ಅಥವಾ ಬೆಂಗಳೂರು ಒನ್,ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಈಗಾಗಲೇ ಸುವಿಧಾ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಬೇಗನೆ ಈ ಎಲ್ಲ ಯೋಜನೆಗಳ ಸಹಾಯಧನ ಪಡೆದುಕೊಳ್ಳಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29/11/2023

Spread positive news

Leave a Reply

Your email address will not be published. Required fields are marked *