ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ ಇಲ್ಲ. ಮನೆಯಲ್ಲಿ ಕುಳಿತು ಮಾಡಲು ಸರ್ಕಾರವು ಈಗ ಹೊಸ ಅವಕಾಶ ನೀಡಿದೆ.

ಗೃಹಲಕ್ಷ್ಮಿ ಸಮಸ್ಯೆ ಶೀಘ್ರ ಪರಿಹರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವವರ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಇಲಾಖೆಯ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್ ಇಲಾಖೆ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಬೇಕು ಎಂದು ತಾಕೀತು ಮಾಡಿದರು.

100 ಫಲಿತಾಂಶಬೇಕು: ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು. ಆಗಸ್ಟ್‌ನಲ್ಲಿ ಶೇ.88 ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ನಲ್ಲಿ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ನ ಹಣ ಶೇ.100 ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದರು. ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕಿ ಎಂ.ಎಸ್.ಅರ್ಚನಾ, ಅಧಿಕಾರಿಗಳು ಇದ್ದರು.

 

Spread positive news

Leave a Reply

Your email address will not be published. Required fields are marked *