ಮುಂಗಾರು ಬೆಳೆ ನಷ್ಟ! ಈ ಸಂಖ್ಯೆಗೆ ಕರೆ ಈಗಲೇ ಮಾಡಿ ನೋಂದಾಯಿಸಿ
ಮುಂಗಾರು ಮಳೆಯ ಕೊರತೆ ಮತ್ತು ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರದ ಬಗ್ಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 60 ಸಾವಿರ ಹೇಕ್ಟರ್‌ಗಳಲ್ಲಿ ಭತ್ತ ನಾಟಿಯಾಗಿರುತ್ತದೆ. ಭತ್ತವು ಮುಖ್ಯವಾಗಿ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಹೋಬಳಿ ಭಾಗದಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಮಾಡಿದ 2…