ಬರ ಪರಿಹಾರ ಹಣ ಬರಬೇಕಾದರೆ FID ಬೇಕೇ ಬೇಕು. ಕೂಡಲೇ ಹೀಗೆ ಮಾಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ.

 

ಈಗಾಗಲೇ ರಾಜ್ಯ ಸರ್ಕಾರ (Karnataka Government) ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ ಅದಕ್ಕೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್‌ (FRUITS Karnataka) ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ. ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna ByreGowda) ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ (Fruits Data) ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

 

ಬರ ಪರಿಹಾರಕ್ಕಾಗಿ FID ನಂಬರ್‌ ಬೇಕೇ ಬೇಕು.

ಬರ ಪರಿಹಾರದ ಹಣವನ್ನು ರೈತರು ಪಡೆದುಕೊಳ್ಳಬೇಕು ಎಂದರೆ ಇದಕ್ಕೆ ಎಫ್‌ಐಡಿ ಸಂಖ್ಯೆಯನ್ನು ಹೊಂದಬೇಕಾಗಿರುತ್ತದೆ. ಇಲ್ಲದಿದ್ದರೆ ಸರ್ಕಾರ ನಿಮ್ಮ ಖಾತೆಗೆ ಹಣ ಮಾಡುವುದಿಲ್ಲ. ಇಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ.

 

ಎಫ್‌ಐಡಿ ಮಾಡಿಸದವರು ಈಗ ಏನು ಮಾಡಬೇಕು?

ಇದುವರೆಗೂ ಎಫ್‌ಐಡಿ ಮಾಡಿಸದೇ ಇದ್ದರೆ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಇಲ್ಲವೇ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಎಫ್‌ಐಡಿ ಮಾಡಿಸಬೇಕು.

 

ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

• ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.

“Citizen Registration” ಮೇಲೆ ಕ್ಲಿಕ್ ಮಾಡಿ

• ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

• ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ.

• ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ.

• ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

• ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

Spread positive news

Leave a Reply

Your email address will not be published. Required fields are marked *