ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಎಫ್.ಐ.ಡಿ ಈಗಾಗಲೇ ಆಗಿದ್ದಲ್ಲಿ ನಿಮಗೆ ಸಂಬಂದಿಸಿದ ఎలా ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು.
ನಿಮಗೆ ಸಂಬಂಧಿಸಿದ ಎಲ್ಲ ಸರ್ವೇ ನಂಬರಗಳನ್ನು ಎಫ್.ಐ.ಡಿ ಮಾಡಿಸದಿದ್ದಲ್ಲಿ ಸರ್ಕಾರದ ವತಿಯಿಂದ ಬರುವಂತಹ ಯಾವುದೇ ಪರಿಹಾರ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ. ಆದ್ದರಿಂದ ಎಲ್ಲಾ ರೈತರು ನಿಮ್ಮ ಹೆಸರಿನಲ್ಲಿ ಎಲ್ಲಾ ಸ.ನಂ. ಗಳನ್ನು ಎಫ್.ಐ.ಡಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ವ್ಯಾಪ್ತಿಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು, ಕೃಷಿ ಇಲಾಖೆಯ ಹೋಬಳಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.
ಎಫ್.ಐ.ಡಿ ಮಾಡಿಸಿಕೊಳ್ಳಲು ಬೇಕಾದ ದಾಖಲಾತಿಗಳು:-
1. ಆಧಾರ ಕಾರ್ಡ
2. ಬ್ಯಾಂಕ ಪಾಸ್ ಪುಸ್ತಕ
3. ತಮ್ಮ ಹೆಸರಿನಲ್ಲಿ ಇರುವ ಎಲ್ಲ ಜಮೀನುಗಳ ಪಹಣಿ
4. ಮೊಬೈಲ್ ನಂ:-
5. ಅಗತ್ಯ ಬಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿ.
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
• ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.in/OnlineUserLogin.aspx
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.
“Citizen Registration” ಮೇಲೆ ಕ್ಲಿಕ್ ಮಾಡಿ
• ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
• ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ.
• ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ.
• ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
• ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಅದೇ ರೀತಿ ಈ ಎಫ್ ಐಡಿ ಬರ ಪರಿಹಾರ ಹಾಗೂ ಬೆಳೆವಿಮೆ ಹಣ ಪಡೆಯಲು ಸಹ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ (Karnataka Government) ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ ಅದಕ್ಕೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್ (FRUITS Karnataka) ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ.