ರಾಜ್ಯದಲ್ಲಿ ನವೆಂಬರ್ 24 25 ರಂದು ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಆಂಧ್ರ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ 25ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉ.ಕನ್ನಡ, ದ.ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.24, 25ರಂದು ಹಾಗೂ ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರದಲ್ಲಿ ನ.25ರಂದು ಯೆಲ್ಲೋ ಅಲರ್ಟ್ ಇರಲಿದೆ .

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಚಾಮರಾಜನಗರದ ಹರದನಹಳ್ಳಿ, ಮಂಡ್ಯ, ಮೈಸೂರಿನ ಹುಣಸೂರು ಹಾಗೂ ತುಮಕೂರಿನ ಕೋನಹಳ್ಳಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಮಳೆ ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಹಾಗೂ ಚಿಕ್ಕಮಗಳೂರು, ಕೊಡಗಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ,ಹಾವೇರಿ, ಗದಗ, ಕೊಪ್ಪಳ, ರಾಯಚೂರಿನಲ್ಲಿ ನ.24ರಿಂದ ನ.25ರವರೆಗೆ ಗುಡುಗುಸಹಿತ ಸಾಧಾರಣ ವರ್ಷಧಾರೆಯಾಗಲಿದೆ. ನೆರೆಯ ತಮಿಳುನಾಡು, ಕೇರಳದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಎರಡೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಿಂದ ಒಣಹವೆ ಕಂಡಿರುವ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿಯೂ ತಾಪಮಾನ ತುಸು ಏರಿಕೆಯಾಗಿದೆ. ಗೋಕರ್ಣದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ದ.ಕ.ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಉಡುಪಿಯ ಹೆಬ್ರಿ ಮುನಿಯಾಲು ಸಮೀಪದ ಎಳ್ಳಾರೆ ಶ್ರೀ ಜನಾರ್ದನ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಹೆಂಚು ಭಾರಿ ಗಾಳಿ ಮಳೆಗೆ ಹಾರಿವೆ. ಸಿಡಿಲು ಬಡಿದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಮೂವರು ಗಾಯಗೊಂಡಿದ್ದಾರೆ.

Spread positive news

Leave a Reply

Your email address will not be published. Required fields are marked *