ರೇಷ್ಮೆ ಇಲಾಖೆ ವತಿಯಿಂದ ಸಿಗುವ ಯೋಜನೆಗಳು ಮಾಹಿತಿ.
ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ….