ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಕೊಡಲು ಪ್ರಾಥಮಿಕ ಸಭೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಮೊದಲ ಕಂತು ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನ.30ರಂದು ಪ್ರಕಟಿಸಿದ್ದರು.
ಜಮೀನಿನ ಮಾಹಿತಿ ಅಪೇಟ್ ಮಾಡಲು ರೈತರಿಗೆ ಅವಕಾಶ ನೀಡಲಾಗಿತ್ತು. ಇದೀಗ ಮೊದಲ ಕಂತು ಜಮಾ ಮಾಡಲು ತಯಾರಿ ಮಾಡಿಕೊಳ್ಳುವಂತೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮೊದಲ ಕಂತಿನ ರೂಪದಲ್ಲಿ ಡಿಬಿಟಿ ಮೂಲಕ ಗರಿಷ್ಠ 2 ಸಾವಿರ ರೂ.ವರೆಗೆ ನೀಡಲಾಗುತ್ತದೆ. ಕೇಂದ್ರ ಪರಿಹಾರ ಬಿಡುಗಡೆ ಮಾಡಿದ ಬಳಿಕ ಮೊದಲ ಕಂತಿನ ಪಾವತಿ ಕಳೆದು ಬಾಕಿ ಜಮಾ ಮಾಡಲಾಗುತ್ತದೆ. ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ., ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಗರಿಷ್ಠ ಎರಡು ಸಾವಿರ ರೂ. ಐದು ಎಕರೆಗೆ ಮಾತ್ರ ಪರಿಹಾರ ನೀಡಲಾಗುತ್ತದೆ.
ರಾಜ್ಯದ ಎಷ್ಟು ತಾಲೂಕು ಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿದ್ದೀರಿ? ಪರಿಹಾರ ಬಿಡುಗಡೆ ಮಾಡಿದ್ದೀರಿ ಎಂಬ ಪ್ರಶ್ನೆಗೆ ರವಿಕುಮಾರ್ ಸಚಿವರು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಒಟ್ಟು 4 ಸಾವಿರ ಕೋಟಿ ರೂ. ಪರಿಹಾರ ಕೊಡುವುದಕ್ಕೆ ಚಿಂತಿಸುತ್ತಿದ್ದೇವೆ. ಬರ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ 18,200 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ ಅಡಿ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ಕೋರಿದ್ದೇವೆ. ಹಣ ಬಿಡುಗಡೆಯಾದರೆ ಅನುಕೂಲವಾಗುತ್ತದೆ ಎಂದರು.
ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಹಳ್ಳಿವಾರು ರೈತರ ಎಫ್.ಐ.ಡಿ ಈಗಾಗಲೇ ಆಗಿದೇ ಇದ್ದವರ ಲಿಸ್ಟ್ ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನೋಟಿಸ್ ಬೋರ್ಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ನೀವು ಸಹ ನಿಮಗೆ ಎಫ್ ಐಡಿ ಆಗದೆ ಇರುವವರ ಲಿಸ್ಟ್ ಸಿಕ್ಕಿದ್ದರೆ ನಿಮ್ಮ ಹೆಸರು ಚೆಕ್ ಮಾಡಿ ಪರಿಶೀಲನೆ ನಡೆಸಿ. ಒಂದು ವೇಳೆ ನಿಮಗೆ ಸಂಬಂದಿಸಿದ ಎಲ್ಲಾ ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು.