ಪ್ರೀಯ ರೈತರೇ ಸರ್ಕಾರವು ರೈತರಿಗೆ ನೆರವಾಗುವ ಹಾಗೂ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆ, ಬಳಕೆ ಹೆಚ್ಚಾಗಬೇಕು ಎಂಬ ದೃಷ್ಟಿಯಿಂದ ರೈತರಿಗೆ ಸರ್ಕಾರವು ಒಂದು ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ರೈತರು ಸಿರಿ ಧಾನ್ಯ ಬೆಳೆದು ಅಂದರೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂಬ ಹೆಸರಿನಲ್ಲಿ ಮುನ್ನಡೆದಿದೆ. ಅದೇ ರೀತಿ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಎಷ್ಟು ಪ್ರೋತ್ಸಾಹ ಹಣ ನೀಡುತ್ತಿದೆ ಹಾಗೂ ಈ ಪ್ರೋತ್ಸಾಹ ಹಣ ಪಡೆಯಲು ನಿಯಮಗಳು ಏನು ಎಂದು ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಸಿರಿಧಾನ್ಯ ಬೆಳೆ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಸುಮಾರು 800 ರಿಂದ 1000 ಹೆಕ್ಟೇರ್ ಪ್ರದೇಶದಲ್ಲಿ ಈಗ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಕೃಷಿ ಇಲಾಖೆಯ ರೈತಸಿರಿ ಯೋಜನೆ ಮೂಲಕ, ಸಿರಿಧಾನ್ಯ ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ್ ತಿಳಿಸಿದರು. ಇಂದು ಕೃಷಿ ಇಲಾಖೆಯಿಂದ ಸಿರಿಧಾನ್ಯ ಬಳಕೆಯ ಕುರಿತು ಜಾಗೃತಿ ಮೂಡಿಸಲು ಸಿರಿಧಾನ್ಯಗಳ ಜಾಗೃತಿ ವಾಕ್‍ಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಿರಿ ಧಾನ್ಯಗಳು ಅಂದ್ರೆ ರಾಗಿ ಸೇರಿ, ಹಾರಕ, ನವಣೆ, ಸಾಮೆ, ಬರಗು, ಕೊರಲೆ ಊದಲು, ಸಜ್ಜೆ & ಜೋಳದ ಸಮೂಹ. ಇವು ಸುಮಾರು 5 ಸಾವಿರ ವರ್ಷ ಬೇಸಾಯದ ಇತಿಹಾಸ ಹೊಂದಿವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ್ ಹೇಳಿದರು. ಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆ ಆಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶದಲ್ಲಿ, ಶುಷ್ಕ, ಒಣ ಸ್ಥಿತಿಯಲ್ಲಿ ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲೂ ಸಹ ಬೆಳೆಯ ಬಹುದಾಗಿದೆ ಅಂತ ಡಾ.ಕಿರಣಕುಮಾರ್ ಅವರು ಮಾಹಿತಿ ನೀಡಿದರು. ಈ ವೇಳೆ ಸಿರಿಧಾನ್ಯ ಬೆಳೆಯುವ ರೈತರಿಗೆ ಇರುವ ಲಾಭ ಹಾಗೂ ಸರ್ಕಾರದ ಬೆಂಬಲ ಬೆಲೆ ಬಗ್ಗೆಯು ಅವರು ತಿಳಿಸಿದರು. ಬರದಲ್ಲೂ ಉತ್ತಮ ಸಿರಿಧಾನ್ಯ ಬೆಳೆ ಬೆಳೆದ ರೈತ ಸಹೋದರರು 800 ರಿಂದ 1,000 ಹೆಕ್ಟೇರ್ ಸಿರಿಧಾನ್ಯ ರಾಜ್ಯ ಸರ್ಕಾರ ನಿರ್ಧರಿಸಿದೆ.
ಇವುಗಳಲ್ಲಿ ರೈತ ಸಿರಿ ಪ್ರಮುಖ ಯೋಜನೆ. ಯೋಜನೆ ಅಡಿ ಜಿಲ್ಲೆಯಲ್ಲಿ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಈ ಬೆಳೆ ಬೆಳೆದ ರೈತರಿಗೆ ಪ್ರತಿ ಹೆಕ್ಟೆರ್‌ಗೂ 10,000 ರೂಪಾಯಿ ನೇರ ನಗದು ವರ್ಗಾವಣೆ ಅಂದ್ರೆ, ಡಿಬಿಟಿ ಮೂಲಕ ಪ್ರೋತ್ಸಾಹ ಧನ ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತವಾಗುವಂತೆ ನೀಡಲಾಗುತ್ತಿದೆ ಎಂದರು