ಈ ದಾಖಲೆಗಳು ಇದ್ದರೆ ಮಾತ್ರ ಬರ ಪರಿಹಾರ ಹಣ. ಕೂಡಲೇ ಈ ಕೆಲಸ ಮಾಡಿ

ರೈತರೇ ಬರ ಪರಿಹಾರ ಹಣ ಪಡೆಯಲು ನೀವು ಕೂಡಲೇ ಮಾಡಬೇಕಾದ ಕೆಲಸ ಇಲ್ಲಿದೆ ನೋಡಿ. ನಿಮಗೂ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಎಂದರೆ ಅಂತವರು ಕೂಡಲೇ ಇದನ್ನು ನೋಡಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಕೆಳಗೆ ಹೇಳಿರುವ ಮಾಹಿತಿ ಪ್ರಕಾರ ಕೆಲಸ ಮಾಡಿಕೊಳ್ಳಿ. ನಿಮಗೆ ಏಕೆ ಪರಿಹಾರ ಹಣ ಬರುತ್ತಿಲ್ಲ ಹಾಗೂ ಹಣ ಬರಬೇಕಾದರೆ ನೀವು ಮಾಡುವ ಕೆಲಸ ಏನು ಎಂದು ತಿಳಿಯೋಣ ಬನ್ನಿ.

ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆಯಾಗಿದ್ದು, 48.19 ಲಕ್ಷ ಹೆಕ್ಟೇರ್‌ಬೆಳೆ ನಷ್ಟ ಆಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದಲೇ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ 2 ಸಾವಿರ ರು.ವರೆಗೆ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬರ ಪರಿಹಾರ ಸಂಬಂಧ ಕೋರಿ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ₹4663 ಕೋಟಿಯನ್ನು ಕೇಳಿದ್ದೇವೆ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಇನ್ನೂ ಕೆಲವರಿಗೆ ಪರಿಹಾರ ಹಣ ಬಂದಿಲ್ಲ ಏಕೆ? 

ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಹಳ್ಳಿವಾರು ರೈತರ ಎಫ್.ಐ.ಡಿ ಈಗಾಗಲೇ ಆಗಿದೇ ಇದ್ದವರ ಲಿಸ್ಟ್ ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನೋಟಿಸ್ ಬೋರ್ಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ನೀವು ಸಹ ನಿಮಗೆ ಎಫ್ ಐಡಿ ಆಗದೆ ಇರುವವರ ಲಿಸ್ಟ್ ಸಿಕ್ಕಿದ್ದರೆ ನಿಮ್ಮ ಹೆಸರು ಚೆಕ್ ಮಾಡಿ ಪರಿಶೀಲನೆ ನಡೆಸಿ. ಒಂದು ವೇಳೆ ನಿಮಗೆ ಸಂಬಂದಿಸಿದ ಎಲ್ಲಾ ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು.

ಒಂದು ವೇಳೆ ನಿಮ್ಮ ಹೊಲ 7 ಎಕರೆ ಇದ್ದಲ್ಲಿ ನೀವು ಕೇವಲ ಎರಡು ಎಕರೆ ನೊಂದಣಿ ಮಾಡಿದರೆ ನಿಮಗೆ ಬರ ಪರಿಹಾರವಾಗಿ ಎರಡು ಎಕರೆಗೆ ಸೀಮಿತವಾದ ಹಣ ಅಷ್ಟೇ ಬರುತ್ತದೆ. ಹಾಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೀವು ತಪ್ಪದೆ ನಿಮ್ಮ ಹೊಲದ ಸಂಪೂರ್ಣ ಮಾಹಿತಿಯನ್ನು ನೋಂದಣಿ ಮಾಡಬೇಕು.

ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ??

* ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

* ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

* ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

* ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

* ➡️ 🙏🏻 ನಿಮ್ಮ ಹೊಲದ ಎಷ್ಟು ಸರ್ವೇ ನಂಬರಗಳು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಯಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻

* ➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ (registration status) ಮೇಲೆ ಕ್ಲಿಕ್ ಮಾಡಿದರೆ

ನಿಮ್ಮ ಹೊಲದ ಇಷ್ಟು ಸರ್ವೇ ನಂಬರ್ ಗಳು ಅಲ್ಲಿ ನೋಂದಣಿ ಯಾಗಿವೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ.

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

Spread positive news

Leave a Reply

Your email address will not be published. Required fields are marked *