ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ನಮ್ಮ ಅಕ್ಕಪಕ್ಕದಲ್ಲಿ ಇರುವ ಜಮೀನಿನ ಮಾಹಿತಿ ಪಡೆಯುವುದು ಎಂಬುದು ನಿಖರವಾಗಿ ತಿಳಿದಿಲ್ಲ, ಅದಕ್ಕೆ ಸರ್ಕಾರವು ಈಗ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಏನೆಂದರೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಹಣಿ(ಉತಾರ್) ಲಿಂಕ್ ಮಾಡುವುದು. ಒಂದು ವೇಳೆ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಕಾರ್ಡ್ ಲಿಂಕ್ ಇಲ್ಲದಿದ್ದರೆ ಯಾವುದೇ ಮಾಹಿತಿ ನಿಖರವಾಗಿ ತಿಳಿಯುವುದಿಲ್ಲ. ಹಾಗೂ ಬರ ಪರಿಹಾರ ಹಣ ಬರುವುದು ಡೌಟು ಎಂದು ಇಲಾಖೆ ತಿಳಿಸಿದೆ.
ಅದೇ ರೀತಿ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸ ಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು.
ಈ ಮೂಲಕ ಎಲ್ಲಾ ರೈತ ಬಾಂದವರಿಗೆ ತಿಳಿಸುವುದೇನೆಂದರೆ, ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು, ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ ಕಾರ್ಡ ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಕಾರಣ ಎಲ್ಲ ರೈತ ಬಾಂದವರು ತಮ್ಮ ಜಮೀನಿನ ಉತಾರ ಮತ್ತು ಆಧಾರ ಕಾರ್ಡ ತೆಗೆದುಕೊಂಡು ನಿಮ್ಮ ಗ್ರಾಮದ ಗ್ರಾಮ ಒನ್ ಕೇಂದ್ರ, ಆನಲೈನ ಕೇಂದ್ರ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ (ತಲಾಟಿ ಆಫೀಸ) ಗೆ ಬೇಟಿ ನೀಡಬೇಕೆಂದು ಈ ಮೂಲಕ ಎಲ್ಲಾ ರೈತ ಬಾಂದವರಿಗೆ ತಿಳಿಸಿದೆ.
ರೈತರು ಬೆಳೆದ ಬೆಳೆಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆಗೊಳಿಸಿ ವಿವಿಧ ಆಹಾರ ಉತ್ಪನ್ನಗಳನ್ನು ತಯಾರಿಸಿ ವ್ಯಾಪಾರಕ್ಕೆ ಉತ್ತೇಜನ ನೀಡಿದರೆ ಆದಾಯ ದ್ವಿಗುಣವಾಗುವಾದರೊಂದಿಗೆ ರೈತರ ಬದುಕು ಹಸನಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ರೈತರಿಗಾಗಿ ಮೀಸಲಿಟ್ಟಿದೆ ಇದರ ಸದುಪಯೋಗ ರೈತರು ಪಡೆದುಕೊಳ್ಳಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಆರ್.ಟಿ.ಸಿ – ಆಧಾರ್ ಲಿಂಕ್ ಮಾಡುವ ಸುಲಭ ವಿಧಾನ
ನಿಮ್ಮ ಜಮೀನಿನ ಪಹಣಿ (RTC) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ಕೆಲವೇ ಕ್ಲಿಕ್ ಗಳಲ್ಲಿ ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು. 👉https://landrecords.karnataka.gov.in/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ NPCI ಸ್ಥಿತಿಯನ್ನು ಹೀಗೆ ಪರಿಶೀಲಿಸಬಹುದು:
* https://fruits.karnataka.gov.in/ ಗೆ ಭೇಟಿ ನೀಡಿ.
* ಸಿಟಿಜನ್ ರಿಜಿಸ್ಟ್ರೇಷನ್(Citizen Registration ” ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿ.
* ಮುಂದುವರಿಯಿರಿ” ಕ್ಲಿಕ್ ಮಾಡಿ.
* ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸವನ್ನು ನಮೂದಿಸಿ.
* OTP ಯನ್ನು ನಮೂದಿಸಿ ಮತ್ತು “ಸಲ್ಲಿಸಿ” ಕ್ಲಿಕ್ ಮಾಡಿ.
* ಪಾಸ್‌ವರ್ಡ್ ರಚಿಸಿ (Create password) ಮತ್ತು ಲಾಗಿನ್ ಮಾಡಿ.
ಇಷ್ಟು ಮಾಡಿದರೆ ನಿಮ್ಮ ಆರ್.ಟಿ.ಸಿ ಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿ ಯಲ್ಲಿರುವ ಹೆಸರು ಒಂದೇ ಆಗಿರಬೇಕು.
ಈ ರೀತಿ ಎಲ್ಲಾ ಜಿಲ್ಲೆಗಳ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಕೂಡಲೇ ಸಂಬಂಧಪಟ್ಟ ಬ್ಯಾಂಕ್ಗಳಿಗೆ ಭೇಟಿ ನೀಡಿ. ಆಧಾರ್ ಲಿಂಕ್ ಮಾಡಿಸಿ. ನಿಮ್ಮ ಆಧಾರ್ ಲಿಂಕ್ ಆದ ನಂತರ, ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ. ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ) https://landrecords.karnataka.gov.in/s ervice4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಕಂದಾಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.