ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು
ಪಿಂಚಣಿ ಸೌಲಭ್ಯ:
ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.1,೦೦೦/-
ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.1,೦೦೦/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,೦೦,೦೦೦/-ದವರೆಗೆ ಅನುಗ್ರಹ ರಾಶಿ ಸಹಾಯಧನ.
ಟ್ರೈನಿಂಗ್-ಕಮ್-ಟೂಲ್‌ಕಿಟ್ ಸೌಲಭ್ಯ (ಶ್ರಮ ಸಾಮರ್ಥ್ಯ) : ರೂ. 2೦,೦೦೦/-ವರೆಗೆ
ವಸತಿ ಸೌಲಭ್ಯ (ಕಾರ್ಮಿಕ ಗೃಹ ಭಾಗ್ಯ): ರೂ.2,೦೦,೦೦೦/-ದವರೆಗೆ ಮುಂಗಡ ಸೌಲಭ್ಯ
ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್): ಮಹಿಳಾ ಫಲಾನುಭವಿಯ ಮೊದಲ ಎರಡು ಮಕ್ಕಳಿಗೆ ಹೆಣ್ಣು ಮಗುವಿನ ಜನನಕ್ಕೆ ರೂ. 3೦,೦೦೦/- ಮತ್ತು ಗಂಡು ಮಗುವಿನ ಜನನಕ್ಕೆ ರೂ.2೦,೦೦೦/-
ಅಂತ್ಯಕ್ರಿಯೆ ವೆಚ್ಚ : ರೂ.4,೦೦೦/- ಹಾಗೂ ಅನುಗ್ರಹ ರಾಶಿ ರೂ.5೦,೦೦೦/- ಸಹಾಯಧನ
ಶೈಕ್ಷಣಿಕ ಸಹಾಯಧನ (ಕಲಿಕೆ ಭಾಗ್ಯ): ಫಲಾನುಭವಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ:
i) 1, 2 ಹಾಗೂ 3ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ರೂ. 2,೦೦೦/-
ii) 4, 5 ಹಾಗೂ 6ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ರೂ. 3,೦೦೦/-
iii) 7 ಹಾಗೂ 8ನೇ ತರಗತಿ ಉತ್ತೀರ್ಣರಾದವರಿಗೆ ರೂ. 4,೦೦೦/-
iv) 9, 10 ನೇ ತರಗತಿ ಹಾಗೂ ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6,೦೦೦/-
v) ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ರೂ. 8,೦೦೦/-
vi) ಐಟಿಐ ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ ರೂ. 7,೦೦೦
vii)ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ ರೂ. 1೦,೦೦೦/-
viii)ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ. 2೦,೦೦೦/- ಹಾಗೂ ಪ್ರತಿ ವರ್ಷ ರೂ.1೦,೦೦೦/-ಗಳಂತೆ (ಎರಡು ವರ್ಷಗಳಿಗೆ)
ix)ಇಂಜಿನಿಯರಿಂಗ್ ಕೋರ್ಸ್ ಗೆ ಸೇರ್ಪಡೆಗೆ ರೂ.25,೦೦೦/- ಹಾಗೂ ಪ್ರತಿ ವರ್ಷ ತೇರ್ಗಡೆಗೆ ರೂ.2೦,೦೦೦/-
x)ವೈದ್ಯಕೀಯ ಕೋರ್ಸ್ ಗೆ ಸೇರ್ಪಡೆಗೆ ರೂ.3೦,೦೦೦/- ಹಾಗೂ ಪ್ರತಿ ವರ್ಷ ತೇರ್ಗಡೆಗೆ ರೂ.25,೦೦೦
xi)ಪಿಹೆಚ್‌ಡಿ ಕೋರ್ಸ್ಗೆ ಪ್ರತಿ ವರ್ಷಕ್ಕೆ ರೂ.2೦,೦೦೦/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿಹೆಚ್‌ಡಿ ಪ್ರಬಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.2೦,೦೦೦/-
ಪ್ರತಿಭಾವಂತ ಮಕ್ಕಳಿಗಾಗಿ:
* ಎಸ್.ಎಸ್‌ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5,೦೦೦
* ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ. 75 ಅಂಕ ಪಡೆದವರಿಗೆ ರೂ.7,೦೦೦/-
* ಪದವಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಶೇ. 75 ಅಂಕ ಪಡೆದವರಿಗೆ ರೂ.1೦,೦೦೦/-
* ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ ನಲ್ಲಿ ಶೇ. 75 ಅಂಕ ಪಡೆದವರಿಗೆ ರೂ.15,೦೦೦/-
ವೈದ್ಯಕೀಯ ಸಹಾಯಧನ (ಕಾರ್ಮಿಕ ಆರೋಗ್ಯ ಭಾಗ್ಯ): ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ ರೂ.3೦೦/- ರಿಂದ ರೂ.1೦,೦೦೦/-ವರೆಗೆ
ಅಪಘಾತ ಪರಿಹಾರ: ಮರಣ ಹೊಂದಿದ್ದಲ್ಲಿ ರೂ.5,೦೦,೦೦೦/-, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ರೂ.2,೦೦,೦೦೦/- ಮತ್ತು ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ರೂ.1,೦೦,೦೦೦/-
ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ (ಕಾರ್ಮಿಕ ಚಿಕಿತ್ಸಾ ಭಾಗ್ಯ): ಹೃದ್ರೊಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತçಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಮೂಳೆ ಶಸ್ತ್ರಚಿಕಿತ್ಸೆ,, ಗರ್ಭಕೋಶ ಶಸ್ತ್ರಚಿಕಿತ್ಸೆ,, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇ.ಎನ್.ಟಿ. ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ, ಮೂಳೆ ಮುರಿತ/ಡಿಸ್‌ಲೊಕೇಶನ್ ಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆಗಳಿಗೆ ರೂ.2,೦೦,೦೦೦/-ವರೆಗೆ
ಮದುವೆ ಸಹಾಯಧನ (ಗೃಹ ಲಕ್ಷ್ಮೀ ಬಾಂಡ್): ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ರೂ.5೦,೦೦೦/-
LPG ಸಂಪರ್ಕ ಸೌಲಭ್ಯ (ಕಾರ್ಮಿಕ ಅನಿಲ ಭಾಗ್ಯ): ಅನಿಲ ಸಂಪರ್ಕದೊಂದಿಗೆ ಎರಡು ಬರ್ನರ್ ಸ್ಟೌವ್
ಬಿಎಂಟಿಸಿ ಬಸ್ ಪಾಸ್ ಸೌಲಭ್ಯ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವಂತಹ / ವಾಸಸ್ಥಳದಿಂದ ಬೆಂಗಳೂರಿಗೆ ಪ್ರಯಾಣಿಸುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ
ಕೆಎಸ್‌ಆರ್‌ಟಿಸಿ ಬಸ್ ಪಾಸ್‌ನ ಸೌಲಭ್ಯ: ರಾಜ್ಯದಾದ್ಯಂತ ವಿದ್ಯಾಭ್ಯಾಸದಲ್ಲಿ ತೊಡಗಿರುವ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ
ತಾಯಿ ಮಗು ಸಹಾಯ ಹಸ್ತ: ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಠಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ ರೂ.6,೦೦೦/-ಗಳ ಸಹಾಯಧನ.