ಹೊಸ ರೇಷನ್ ಕಾರ್ಡ್‌ʼಗೆ ಅರ್ಜಿಗೆ ಕೆಲವೇ ದಿನ ಬಾಕಿ! ಬಂಪರ್ ಆಫರ್ ಕೊಟ್ಟ ಸರ್ಕಾರ

ಬಿಪಿಎಲ್‌ ರೇಷನ್‌ ಕಾರ್ಡ್‌ ಬಳಕೆದಾರರಿಗೆ ಇಲ್ಲೊಂದು ಗುಡ್‌ನ್ಯೂಸ್‌, ಶಿಕ್ಷಣ ಹಕ್ಕು ಕಾಯ್ದೆಯಡಿ (RTE) ನೀವು ನಿಮ್ಮ ಮಕ್ಕಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ಉಚಿತವಾಗಿ ಸೇರಿಸಬಹುದು. ಆರ್‌ಟಿಇ ವಿದ್ಯಾರ್ಥಿಗಳಿಗೆಂದೇ ಅಲ್ಲಿ ಶೇ. 25ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಈ ಸೀಟುಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಏಪ್ರಿಲ್‌ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಾಲೆಯ 5 ಕಿಮೀ ವ್ಯಾಪ್ತಿಯಲ್ಲಿ ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೊಸ ರೇಷನ್‌ ಕಾರ್ಡ್‌ ನಿರೀಕ್ಷೆಯಲ್ಲಿರುವ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದಿನಿಂದ ಹೊಸ BPL/APL ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್‌ ಆರಂಭವಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.ahara.kannic.in ಮೂಲಕ ಹೊಸ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಜನರು ಅಗತ್ಯವಿರುವ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ತಮ್ಮ ಅರ್ಜಿಯ ಸ್ಥಿತಿಗತಿಯನ್ನೂ ಪರಿಶೀಲಿಸಬಹುದು. ಹೊಸ ಪಡಿತರ ಚೀಟಿಯನ್ನು ಮಾಡಿಸಬಹುದು.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

www.kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ. ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಈ ಕೆಳಗಿನವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು

 1. ಕರ್ನಾಟಕದ ಖಾಯಂ ನಿವಾಸಿ
 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.
 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು
 4. ಕುಟುಂಬದ ಆದಾಯದ ಆಧಾರದ ಮೇಲೆ ಯಾವ ಪಡಿತರ ಚೀಟಿ ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

ನೀವು https://ahara.kar.nic.inನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು

 1. ಮತದಾರರ ಗುರುತಿನ ಚೀಟಿ
 2. ಆಧಾರ್ ಕಾರ್ಡ್
 3. ವಯಸ್ಸಿನ ಪ್ರಮಾಣಪತ್ರ
 4. ಚಾಲನಾ ಪರವಾನಿಗೆ
 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
 6. ಮೊಬೈಲ್ ನಂ
 7. ಸ್ವಯಂ ಘೋಷಿತ ಪ್ರಮಾಣಪತ್ರ

ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.

Spread positive news

Leave a Reply

Your email address will not be published. Required fields are marked *