ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಹಲವು ಆಧಾರ್ ಕಾರ್ಡ್ ಹಾಗೂ(link) ಪಹಣಿ(ಉತಾರ್) ಲಿಂಕ್ ಆಗಿದ್ದು ಸರ್ಕಾರವು ಈಗ 2024 ರಲ್ಲಿ ಕಂದಾಯ ಇಲಾಖೆಯು ‘ನನ್ನ ಅಧಾರನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಆರಂಭಿಸಿದ್ದು, ಇವರೆಗೆ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. “ರಾಜ್ಯದಲ್ಲಿ ರೈತರ ಬಗ್ಗೆ ನಿಖರವಾದ ಅಂಕಿ ಅಂಶಗಳಿರಲಿಲ್ಲ. ಹೀಗಾಗಿ, ಸಣ್ಣ ಮತ್ತು ಅತಿ ಸಣ್ಣ ರೈತರು (ಎರಡು ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಎಷ್ಟು ಮಂದಿಯಿದ್ದಾರೆ. ಸರಕಾರದ ಸೌಲಭ್ಯ ಪಡೆಯಲು ಅರ್ಹತೆಯುಳ್ಳ ವರೆಷ್ಟು ಎಂಬ ಕರಾರುವಕ್ಕಾದ ಮಾಹಿತಿ ಸಂಗ್ರಹಿಸಲು ನೆರವಾಗುತ್ತದೆ, ಅದೇ ರೀತಿ ಸದ್ಯದಲ್ಲಿ ತಮ್ಮ ತಮ್ಮ ಜಮೀನನ್ನು ಖರೀದಿ ಮಾಡಿದಾಗ ಅಥವಾ ಜಮೀನು ಇಬ್ಭಾಗ ಆದಾಗ ರೈತರು ಮುಟೇಶನ್ ಪ್ರಕಾರ ರೈತರು ತಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬುದನ್ನು ಈಗ ಹೊಸ ತಂತ್ರಜ್ಞಾನ ಬಳಸಿ ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ರೈತರು ಅಧಿಕಾರಿಗಳ ಬಳಿ ಹೋಗಿ ಕೈಕಟ್ಟಿ ನಿಂತುಕೊಳ್ಳಬೇಕಿಲ್ಲ. ಮನೆಯಲ್ಲಿಯೇ ಕುಳಿತು ತಮ್ಮಲ್ಲಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಜತೆಗೆ ಒಬ್ಬ ರೈತ ಬೇರೆ ಇಮ drd ಸರ್ವೆ ನಂಬರ್ಗಳಲ್ಲಿ ಭೂಮಿ ಹೊಂದಿದ್ದರೆ ಆಧಾರ್ ನೋಡಣೆಯಿಂದ ಎಲ್ಲ ಮಾಹಿತಿಯೂ ಒಂದೇ ಗುಚ್ಚದಲ್ಲಿ ಸಿಗಲಿದೆ,” ಎಂದು ಕಂದಾಯ ಇಲಾಖೆ ಆಯುಕ್ತ ಪಿ. ಸುನೀಲ್‌ಕುಮಾರ್ ತಿಳಿಸಿದ್ದಾರೆ.
ಆಯಾ ಕಂದಾಯ ವೃತ್ತದ ಗ್ರಾಮ ಆಡಳಿತಾಧಿ ಕಾರಿಗಳು ತಮ್ಮ ವ್ಯಾಪ್ತಿಯ ಹಳ್ಳಿಹಳ್ಳಿಗೂ ತೆರಳ ಆಧಾರ್ ಜೋಡಣೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಗ್ರಾಮಾಧಿಕಾರಿಗಳಿಗೆ ವಾರಕ್ಕೆ 250 ರೈತರ ಲಿಂಕ್ ಸರ್ವೇ: ಹೌದು ಈಗಾಗಲೇ ಸರ್ಕಾರವು ಸಹ ಆದೇಶ ಹೊರಡಿಸಿದೆ. ಪ್ರತಿ ಗ್ರಾಮ ಆಡಳಿತಾಧಿಕಾರಿಗೆ ವಾರಕ್ಕೆ 250 ರೈತರ ಮಾಡುವಾಗ ರೈತರ ಖುದ್ದು (live) ಫೋಟೊ ಕೇಳುತ್ತದೆ. ನಿಧನರಾಗಿದ್ದವರ ಮಾಹಿತಿ ಸಂಗ್ರಹಿಸುವುದಿಲ್ಲ ಮತ್ತು ಭೂಮಿ ಉದ್ದೇಶಗಳಿಗೆ ಬಳಕೆಯಾಗುತ್ತಿದ್ದರೆ ಅದನ್ನೂ ಪರಿಗಣಿಸುವುದಿಲ್ಲ, ಕೇವಲ ಭೂಮಿ ಮಾತ್ರ ಸಹನೆಯಲ್ಲಿ ಜಮೀನು ಮ ಪ್ರದೇಶ, ಮಣ್ಣಿನ ಪ್ರಕಾರ, ಭಾ ಬೆಳೆಗಳು ಮುಂತಾದ ಮಾಹಿತಿ ಆಧಾರ್ ಸಂಖ್ಯೆಯೂ ನಮೂನೆ ಇರಬೇಕು. ಹಾಗೂ ಪಹಣಿ (ಉತಾರ) ಜೋಡಣೆಯಿಂದ ಹಕ್ಕು ಪತ್ರ ನಿಖರವಾಗಿದೆ ಎಂದು ತಿಳಿಯಲು ಹಾಗೂ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಲು ಇದೊಂದು ಮಹತ್ವದ ಅವಕಾಶ ಆಗಿದೆ.
ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ನಮ್ಮ ಅಕ್ಕಪಕ್ಕದಲ್ಲಿ ಇರುವ ಜಮೀನಿನ ಮಾಹಿತಿ ಪಡೆಯುವುದು ಎಂಬುದು ನಿಖರವಾಗಿ ತಿಳಿದಿಲ್ಲ, ಅದಕ್ಕೆ ಸರ್ಕಾರವು ಈಗ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಏನೆಂದರೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಹಣಿ(ಉತಾರ್) ಲಿಂಕ್ ಮಾಡುವುದು. ಒಂದು ವೇಳೆ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಕಾರ್ಡ್ ಲಿಂಕ್ ಇಲ್ಲದಿದ್ದರೆ ಯಾವುದೇ ಮಾಹಿತಿ ನಿಖರವಾಗಿ ತಿಳಿಯುವುದಿಲ್ಲ. ಹಾಗೂ ಬರ ಪರಿಹಾರ ಹಣ ಬರುವುದು ಡೌಟು ಎಂದು ಇಲಾಖೆ ತಿಳಿಸಿದೆ.
ಅದೇ ರೀತಿ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸ ಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು.
ಆರ್.ಟಿ.ಸಿ – ಆಧಾರ್ ಲಿಂಕ್ ಮಾಡುವ ಸುಲಭ ವಿಧಾನ
ನಿಮ್ಮ ಜಮೀನಿನ ಪಹಣಿ (RTC) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ಕೆಲವೇ ಕ್ಲಿಕ್ ಗಳಲ್ಲಿ ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು. 👉https://landrecords.karnataka.gov.in/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ NPCI ಸ್ಥಿತಿಯನ್ನು ಹೀಗೆ ಪರಿಶೀಲಿಸಬಹುದು:
* https://fruits.karnataka.gov.in/ ಗೆ ಭೇಟಿ ನೀಡಿ.
* ಸಿಟಿಜನ್ ರಿಜಿಸ್ಟ್ರೇಷನ್(Citizen Registration ” ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿ.
* ಮುಂದುವರಿಯಿರಿ” ಕ್ಲಿಕ್ ಮಾಡಿ.
* ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸವನ್ನು ನಮೂದಿಸಿ.
* OTP ಯನ್ನು ನಮೂದಿಸಿ ಮತ್ತು “ಸಲ್ಲಿಸಿ” ಕ್ಲಿಕ್ ಮಾಡಿ.
* ಪಾಸ್‌ವರ್ಡ್ ರಚಿಸಿ (Create password) ಮತ್ತು ಲಾಗಿನ್ ಮಾಡಿ.
ಇಷ್ಟು ಮಾಡಿದರೆ ನಿಮ್ಮ ಆರ್.ಟಿ.ಸಿ ಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿ ಯಲ್ಲಿರುವ ಹೆಸರು ಒಂದೇ ಆಗಿರಬೇಕು.
ಈ ಮೂಲಕ ಎಲ್ಲಾ ರೈತ ಬಾಂದವರಿಗೆ ತಿಳಿಸುವುದೇನೆಂದರೆ, ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು, ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ ಕಾರ್ಡ ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಕಾರಣ ಎಲ್ಲ ರೈತ ಬಾಂದವರು ತಮ್ಮ ಜಮೀನಿನ ಉತಾರ ಮತ್ತು ಆಧಾರ ಕಾರ್ಡ ತೆಗೆದುಕೊಂಡು ನಿಮ್ಮ ಗ್ರಾಮದ ಗ್ರಾಮ ಒನ್ ಕೇಂದ್ರ, ಆನಲೈನ ಕೇಂದ್ರ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ (ತಲಾಟಿ ಆಫೀಸ) ಗೆ ಬೇಟಿ ನೀಡಬೇಕೆಂದು ಈ ಮೂಲಕ ಎಲ್ಲಾ ರೈತ ಬಾಂದವರಿಗೆ ತಿಳಿಸಿದೆ.
ಒಂದೇ ಸರ್ವೆ ನಂಬರ್ ಭೂಮಿಯನ್ನು ಸೋದರ- ಸೋದರಿಯರು ಹಂಚಿಕೊಂಡಿದ್ದು, ಡ ಹೊಂದಿದ್ದರೆ ಎಷ್ಟು ಜನರು ವಾರಸುದಾರರಿರುವದೋ ಅಷ್ಟೂ ಜನರು ಪ್ರತ್ಯೇಕವಾಗಿಯೇ ಆಧಾ ಖುದ್ದು ಫೋಟೊ ನೀಡುವುದು ಕಡ್ಡಾಯ. ಆದರೆ, ದೂರದ ಊರುಗಳಿಂದ ಒಮ್ಮೆಲೆ ಗ್ರಾಪಂಗಳಿಗೆ ಹೋದರೆ, ಸರ್ವರ್ ಸಮಸ್ಯೆಯಿಂದ ರೈತರಿಗೆ ತೊಂದರೆಯಾಗುತ್ತಿದೆ. ಈಗಾಗಲೇ (FRUITS)ವಿಭಾಗದ ಇ-ಕೆವೈಸಿ ಮಾಡಲಾಗಿದೆ.
ಈ ರೀತಿ ಎಲ್ಲಾ ಜಿಲ್ಲೆಗಳ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಕೂಡಲೇ ಸಂಬಂಧಪಟ್ಟ ಬ್ಯಾಂಕ್ಗಳಿಗೆ ಭೇಟಿ ನೀಡಿ. ಆಧಾರ್ ಲಿಂಕ್ ಮಾಡಿಸಿ. ನಿಮ್ಮ ಆಧಾರ್ ಲಿಂಕ್ ಆದ ನಂತರ, ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ. ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ) https://landrecords.karnataka.gov.in/s ervice4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಕಂದಾಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.