Bele parihar: ಬೆಳೆ ಪರಿಹಾರ ಬಿಡುಗಡೆ | ಈ ರೈತರ ಖಾತೆಗೆ ಹಣ ಜಮಾ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ(NDRF) ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ತಲುಪಿಸುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಯಾವ ಯಾವ ರೈತರಿಗೆ ಈ ಬಾರಿ ಪರಿಹಾರ ಹಣ ಬರುತ್ತೆ. ಹಣ ಬರದೆ ಇದ್ದವರು ಏನು ಮಾಡಬೇಕು? ಎಂದು ಇಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದೇವೆ. ರೈತರು ಕೂಡಲೇ ಈ ಕೆಲಸ ಮಾಡಿ ಹಣ ಪಡೆಯಿರಿ.

ಹೌದು ರೈತರೇ ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಠ ಎರಡು ಹೆಕ್ಟರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿಪಡಿಸಲಾಗಿದೆ. ಮಳೆಯಾಶ್ರಿತ (rainfed)ಬೆಳೆಗೆ 8,500 ರೂ., ನೀರಾವರಿ (irrigation)ಪ್ರದೇಶದ ಬೆಳೆಗೆ 17,000 ರೂ., ತೋಟಗಾರಿಕೆ (Horticulture)ಬೆಳೆಗೆ 22,500 ರೂ. ಪರಿಹಾರ ನಿಗದಿಪಡಿಸಲಾಗಿದೆ. ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಘೋಷಣೆ ಎಂದರೆ ಬಾಕಿ ಉಳಿದ ಬರ ಪರಿಹಾರ ಹಣ ಬಿಡುಗಡೆ ಮಾಡುತ್ತೇವೆ ಎಂದು ಕೋರ್ಟ್ ಮೂಲಕ ಹೇಳಿತ್ತು ಅದೇ ರೀತಿ ಈಗ ಕೇಂದ್ರ ಸರ್ಕಾರ 3454 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಕೂಡಲೇ ನೀವು ಸಹ ನಿಮ್ಮ ಖಾತೆ ಚೆಕ್ ಮಾಡಿ ಹಣ ಬಂದಿದೆ ಅಥವಾ ಇಲ್ಲಾ ಎಂದು ಪರಿಶೀಲಿಸಿ ಕೊಳ್ಳಬೇಕು.

ಯಾವ ಬೆಳೆಗೆ ಎಷ್ಟು ಬರ ಪರಿಹಾರ ಹಣ?
ರಾಜ್ಯದಲ್ಲಿ ಈಗಾಗಲೇ ಬರ ತಾಂಡವಾಡುತ್ತಿದೆ. ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ ಮಳೆಯಾಶ್ರೀತ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 17,000 ರೂ.ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 22,500 ರೂ.ಗಳು ನಿಗಧಿಪಡಿಸಲಾಗಿರುತ್ತದೆ.
ಬೆಳೆ ಹಾನಿ ಪರಿಹಾರಕ್ಕೆ 3,454 ಕೋಟಿ ರೂ. ನೆರವು ಗಮನ ಸೆಳೆಯುವಂತಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು 223 ತಾಲೂಕುಗಳು ಬರಪೀಡಿತವಾಗಿವೆ.

ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಬರ ಪರಿಹಾರ(drought fund)ಹಣ ಪಡೆಯಲು ಎಫ್ ಐಡಿ (FID) ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಆದರೆ ರೈತರು ಇನ್ನೂ ಹಲವಾರು ಯೋಜನೆಗಳಿಗೆ ಸದುಪಯೋಗ ಪಡೆದುಕೊಳ್ಳದೆ ಇರುವುದಕ್ಕೆ ಈ ಐಡಿ ಮುಖ್ಯ ಕಾರಣವಾಗಿದೆ. ಅದಕ್ಕೆ ರೈತರು ಕೂಡಲೇ ಅರ್ಜಿ ಸಲ್ಲಿಸಿ ಎಫ್ ಐಡಿ (FID) ಪಡೆಯಿರಿ. ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿ.

ಎನ್ ಡಿಆರ್‌ಎಫ್(NDRF) ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನು ಮೇ 2 ರಂದು ಒಟ್ಟು 40810 ರೈತರಿಗೆ 2038.91 ಲಕ್ಷ ರೂ.ಗಳ ಇನ್ಪುಟ್ (infut) ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಿರುತ್ತಾರೆ. ಯಾವ ರೈತರು ಆಧಾರ್ ಕಾರ್ಡ್ ಲಿಂಕ್ ಇರುತ್ತದೆ ಅವರಿಗೆ ಮಾತ್ರ ಬರ ಪರಿಹಾರ ಹಣ ಬರುತ್ತದೆ.

ಇನ್ನೂ ನಿಮಗೆ ಈ ಬಗ್ಗೆ ಗೊಂದಲಗಳಿದ್ದರೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ದೂರುಗಳನ್ನು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಕೃಷಿ ಅಧಿಕಾರಿ/ತಹಶೀಲ್ದಾರ್ ರವರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Spread positive news

Leave a Reply

Your email address will not be published. Required fields are marked *