ಕೇಂದ್ರ ಸರ್ಕಾರ ಕೊಟ್ಟ ಬರ ಪರಿಹಾರ ನಿಮಗೆ ಜಮಾ ಆಗುತ್ತೋ ಇಲ್ವೋ! ಚೆಕ್ ಮಾಡಿ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. (Check your FID status in mobile) ನಿಮ್ಮ ಮೊಬೈಲಿನಲ್ಲಿ ಎಫ್ ಐಡಿ ಹೇಗೆ ಚೆಕ್ ಮಾಡಬೇಕು ಹಾಗೂ ನಾವು ಇಲ್ಲಿ ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ ದಾಖಲೆಯಾಗಿ ನೋಡಿ👇🏻).

ಎನ್.ಡಿ.ಆರ್.ಎಫ್.ನಿಂದ(NDRF) ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ತಲುಪಿಸುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಆದರೆ ರೈತರೇ ಬಹುಮುಖ್ಯವಾದ ಮಾಹಿತಿ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿ ಜೋಡಣೆಯಾಗುವುದು ಕಡ್ಡಾಯ. ಒಂದು ವೇಳೆ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿ ಜೋಡಣೆಯಾಗದಿದ್ದರೆ ನಿಮಗೆ ಪರಿಹಾರ ಹಣ ಸಿಗುವುದಿಲ್ಲ ತಿಳಿಯಿರಿ ರೈತರೇ, ನಿಮ್ಮ ಹೊಲದ ಇಷ್ಟು ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿದ್ದೀರಾ ಇಲ್ಲವಾ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ.

ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳ್ಳಲು
FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು*
ಈ ಕೂಡಲೇ ಹತ್ತಿರದ *ರೈತ ಸಂಪರ್ಕ ಕೇಂದ್ರ ಅಥವಾ ನಿಮ್ಮ ಗ್ರಾಮ ಲೆಕ್ಕಿಗ (ತಲಾಟಿ) ಕಚೇರಿಗೆ ಭೇಟಿ ನೀಡಿ* ನಿಮ್ಮ ಎಲ್ಲಾ ಪಹಣಿ/RTC (ಉತಾರಿ) ನಿಮ್ಮ FID ಗೇ ಲಿಂಕ್ ಆಗಿದಿಯೋ ಇಲ್ಲವೋ ಎಂದ ಖಚಿತ ಪಡಿಸಿಕೊಳ್ಳಿ.

ಎನ್ ಡಿಆರ್‌ಎಫ್(NDRF) ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನು ಮೇ 2 ರಂದು ಒಟ್ಟು 40810 ರೈತರಿಗೆ 2038.91 ಲಕ್ಷ ರೂ.ಗಳ ಇನ್ಪುಟ್ (infut) ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಿರುತ್ತಾರೆ. ಯಾವ ರೈತರು ಆಧಾರ್ ಕಾರ್ಡ್ ಲಿಂಕ್ ಇರುತ್ತದೆ ಅವರಿಗೆ ಮಾತ್ರ ಬರ ಪರಿಹಾರ ಹಣ ಬರುತ್ತದೆ.

ಇನ್ನೂ ನಿಮಗೆ ಈ ಬಗ್ಗೆ ಗೊಂದಲಗಳಿದ್ದರೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ದೂರುಗಳನ್ನು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಹಾಗೂ ಸಂಬಂಧಪಟ್ಟ ತಾಲ್ಲೂಕು ಕೃಷಿ ಅಧಿಕಾರಿ/ತಹಶೀಲ್ದಾರ್ ರವರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna ByreGowda) ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 2 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ (Fruits Data) ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx
* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.
* ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

ಅದೇ ರೀತಿ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ರೈತರು ಸಂಬಂಧಿ ಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸ ಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು.

Spread positive news

Leave a Reply

Your email address will not be published. Required fields are marked *