ರಾಜ್ಯಾದ್ಯಂತ ಮೇ 15ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಸಂಜೆಯಾಗುತ್ತಿದ್ದಂತೆಯೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕೂಡ ಆರಂಭವಾಗಿದೆ. ಮೈಸೂರು ರೋಡ್, ಉತ್ತರಹಳ್ಳಿ, ಆರ್.ಆರ್ ನಗರ, ಗೊಟ್ಟಿಗೆರೆ ಸುತ್ತಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಮೇ 12, 13, 14, 15 ನಾಲ್ಕು ದಿನಗಳ ಕಾಲ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಎಲ್ಲಾ ಕಡೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಲಘು ಪ್ರವಾಹ, ನೈಸರ್ಗಿಕ ಸಮಸ್ಯೆಗಳು ಎದುರಾಗುವ ಮುನ್ಸೂಚನೆ ಕೂಡ ನೀಡಿದೆ. ಇಂದಿನಿಂದ ಮೇ‌ 15ರ ವರೆಗೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಹೇಳಿಕೆ ನೀಡಿ, ರಾಜ್ಯದಲ್ಲಿ ಹಲವು ಕಡೆ ಮಳೆ ಆಗಿದೆ. ಧಾರವಾಡದಲ್ಲಿ 8cm ಮಳೆ, ದಕ್ಷಿಣ ಕನ್ನಡದಲ್ಲಿ 6 cm ಮಳೆ, ಬೆಳಗಾವಿ, ಚಿಕ್ಕಮಗಳೂರು 5 cm ಮಳೆ ಆಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 16ವರೆಗೂ ಬಿರುಗಾಳಿ, ಗುಡುಗು, ಮಿಂಚು ಸಮೇತ ಮಳೆ ಆಗುವ ಸಾಧ್ಯತೆ. ಬೆಂಗಳೂರಿನಲ್ಲಿ ಮುಂದಿನ 5 ದಿನ ಬಿರುಗಾಳಿ ಸಮೇತ ಮಳೆ ಆಗುವ ಸಾಧ್ಯತೆ ಇದೆ ಎಂದಿದ್ಧಾರೆ.

ಮುಂದಿನ 24 ಗಂಟೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಮೇ. 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯ ನೀಡಲಾಗಿದೆ.

ಇನ್ನು ಯಾವಾಗ ಮಳೆ ಬರುತ್ತೋ ಅಂತ ಕಾಯ್ತಿದ್ದ ಬೆಂಗಳೂರಿಗರು ಕಳೆದ ಕೆಲ ದಿನಗಳಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ ಇದೀಗ ಸುರಿಯುತ್ತಿರುವ ಮಳೆಗೆ ನಗರದ ಹಲವೆಡೆ ಧರೆಗುರುಳುತ್ತಿರುವ ಮರ ಹಾಗೂ ರೆಂಬೆ ಕೊಂಬೆಗಳಿಂದ ಬೇಸರಗೊಂಡಿದ್ದಾರೆ. ಮರಗಳಿಗೆ ಆಸಿಡ್ ಇಂಜೆಕ್ಷನ್ ನೀಡಿ ಮರಗಳ ಮಾರಣ ಹೋಮಕ್ಕೆ ಸಂಚು ಮಾಡಿದ್ದಾರೆಂದು ಕೆಲವರು ಆರೋಪಿಸಿದ್ದಾರೆ. ಕೆಲವರು ನಿವೇಶನ, ಮನೆಗಳಿಗೆ ತೊಂದರೆಯಾಗುತ್ತದೆ ಎಂದು ಮರಗಳನ್ನು ಕತ್ತರಿಸುತ್ತಿದ್ದಾರೆ. ಇತ್ತೀಚಿಗೆ ಮಲ್ಲೇಶ್ವರಂನಲ್ಲಿರುವ ಮರಗಳಿಗೆ ಆಸಿಡ್ ಇಂಜೆಕ್ಷನ್ ಹಾಕಲಾಗಿದೆ ಅಂತ ಮಾಹಿತಿ ಇದೆ. ಆದ್ರೆ ಈಗಾಗಲೇ ಸಿಟಿಯಲ್ಲಿ ಕೆಲವು ಕಡೆ ಮರಗಳ ಮಾರಣ ಹೋಮ ಆಗಿವೆ. ದಾಖಲೆಯ ತಾಪಮಾನ, ಮಳೆ ಕೊರತೆ, ನೀರಿನ ಅಭಾವ ಎದುರಾಗಿದೆ ಎಂದು ಪರಿಸರವಾದಿಗಳೂ ದೂರಿದ್ದಾರೆ.

Spread positive news

Leave a Reply

Your email address will not be published. Required fields are marked *