ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಈಗಾಗಲೇ ಬೇಸಿಗೆ ಬಿಸಿಲಿನ ತಾಪದಲ್ಲಿ ಜನರು ತತ್ತರಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ರಾಜ್ಯಕ್ಕೆ ಜೂನ್ 1 ಬಳಿಕ ಮುಂಗಾರು ಪ್ರವೇಶ ಉತ್ತಮ ಮಳೆಯಾಗುವ ಮುನ್ಸೂಚನೆ ಆಗಸ್ಟ್- ಸೆಪ್ಟೆಂಬರ್ ಬಳಿಕವೂ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಸಲ್ಲಿಸಿದೆ. ನಂತರ ಮೂರು ದಿನಗಳ ಕಾಲ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ 30-40 6.2. ತಲುಪುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳ ಗಳಲ್ಲಿ ಐದು ದಿನಗಳ ಕಾಲ ಪ್ರತೀ 24 ತಾಸಿ ನಲ್ಲಿ 65 ಮಿ.ಮೀ.ಗಿಂತ ಅಧಿಕ ಮಳೆಯಾಗ ಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳ ಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಜೋರಾದ ಗಾಳಿ ಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.