ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ರೈತರು ಬರ ಪರಿಹಾರ ಹಣ ಬರದೇ ಇದ್ದರೆ ಏನು ಮಾಡಬೇಕು? ಎಲ್ಲಿ ಸಂಪರ್ಕಿಸಬೇಕು? ಹಾಗೂ ಕೆವೈಸಿ ಎಲ್ಲಿ ಮಾಡಿಸಬೇಕು ಎಂದು ಕೂಡಲೇ ನೋಡಿ.
ಯಾವ ಬೆಳೆಗೆ ಎಷ್ಟು ಬರ ಪರಿಹಾರ ಹಣ?
ರಾಜ್ಯದಲ್ಲಿ ಈಗಾಗಲೇ ಬರ ತಾಂಡವಾಡುತ್ತಿದೆ. ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ ಮಳೆಯಾಶ್ರೀತ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 17,000 ರೂ.ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 22,500 ರೂ.ಗಳು ನಿಗಧಿಪಡಿಸಲಾಗಿರುತ್ತದೆ.
ಬೆಳೆ ಹಾನಿ ಪರಿಹಾರಕ್ಕೆ 3,454 ಕೋಟಿ ರೂ. ನೆರವು ಗಮನ ಸೆಳೆಯುವಂತಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು 223 ತಾಲೂಕುಗಳು ಬರಪೀಡಿತವಾಗಿವೆ.
ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಬರ ಪರಿಹಾರ(drought fund)ಹಣ ಪಡೆಯಲು ಎಫ್ ಐಡಿ (FID) ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಆದರೆ ರೈತರು ಇನ್ನೂ ಹಲವಾರು ಯೋಜನೆಗಳಿಗೆ ಸದುಪಯೋಗ ಪಡೆದುಕೊಳ್ಳದೆ ಇರುವುದಕ್ಕೆ ಈ ಐಡಿ ಮುಖ್ಯ ಕಾರಣವಾಗಿದೆ. ಅದಕ್ಕೆ ರೈತರು ಕೂಡಲೇ ಅರ್ಜಿ ಸಲ್ಲಿಸಿ ಎಫ್ ಐಡಿ (FID) ಪಡೆಯಿರಿ. ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿ.
FID(ಎಫ್ ಐಡಿ) ಇರದೆ ಇದ್ದವರು ಈ ಕೆಲಸ ಮಾಡಿ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx
* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.
* ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಹಾಗೂ ಇಲ್ಲಿ ಆಧಾರ್ ಕಾರ್ಡ್ ನಂಬರ್ ಹಾಕಿ ಚೆಕ್ ಮಾಡಿ.
https://parihara.karnataka.gov.in/service87/