ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಹಾಗಾದರೆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಹೊಸ ಯೋಜನೆಗಳ ಜಾರಿಗೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ಮಾಡಿದ್ದಾರೆ.
ಈಗಾಗಲೇ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಆದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಬಾಕಿಯಿರುವ ಘೋಷಣೆಗಳಿಗೆ ವಾರದೊಳಗೆ ಆದೇಶ ಹೊರಡಿಸಿ ಕಾರ್ಯಕ್ರಮ ಜಾರಿಗೊಳಿಸುವಂತೆ ಮಾಹಿತಿ ನೀಡಿದ್ದಾರೆ. ಇನ್ನು ಕೃಷಿ ಕ್ಷೇತ್ರವನ್ನು ಸುಸ್ಥಿರ ಮತ್ತು ಲಾಭದಾಯಕವಾಗಿ ಮಾಡಲು ರೈತ ಸಮೃದ್ಧಿ ಯೋಜನೆ ರೂಪಿಸಿದ್ದು, ಸಮರ್ಪಕವಾಗಿ ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬೆಳೆವಿಮೆ ಹಣ ಬರಬೇಕಾದರೆ ಬೆಳೆ ಸಮೀಕ್ಷೆ ಕಡ್ಡಾಯ. ಸಮೀಕ್ಷೆ ಮಾಡುವುದು ಹೇಗೆ?
ರೈತರ ಮುಖದಲ್ಲಿ ಮಂದಹಾಸ:ಇದೀಗ ರಾಜ್ಯಾದ್ಯಂತ ಮುಂಗಾರು ಪಡೆದಿದ್ದು, ಈ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಗಾಜನೂರಿನಲ್ಲಿರುವ ತುಂಬಾ ಜಲಾಶಯ ಭರ್ತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ನೀರಿನ ಸಂಗ್ರಹದ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಮುಂಗಾರು ಮಳೆ ದಿನದಿಂದ ದಿನಕ್ಕೆ ಚುರುಕು ಪಡೆಯುತ್ತಿರುವ ಹಿನ್ನೆಲೆ ರಾಜ್ಯದ ಬಹುತೇಕ ಕಡೆ ಬತ್ತಹೋಗುವ ಹಂತವನ್ನು ತಲುಪಿದ್ದ ಜಲಮೂಲಗಳಿಗೆ ಜೀವ ಬಂದಂತಾಗಿದೆ. ಅಲ್ಲದೆ, ಪ್ರಮುಖ ಜಲಾಶಯಗಳಿಗೂ ನೀರು ಹರಿದುಬರುತ್ತಿದ್ದು, ಅನ್ನದಾತನರ ಮುಖದಲ್ಲಿ ಮತ್ತಷ್ಟು ಮಂದಹಾಶ ಹೆಚ್ಚುವಂತೆ ಮಾಡಿದೆ.
9.3ಕೋಟಿ ರೈತರ 17 ನೇ ಪಿಎಂ ಕಿಸಾನ್ ಕಂತಿಗೆ ಮೋದಿ ಸಹಿ
ಇನ್ನು ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ಮಳೆರಾಯ ಅಬ್ಬರಿಸಿದ ಪರಿಣಾಮ, ಒಳಹರಿವಿನ ಪ್ರಮಾಣ ಏರಿಕೆ ಆಗಿದೆ. ಆದ್ದರಿಂದ ಯಾವುದೇ ಸಂದರ್ಭದಲ್ಲಾದರೂ ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರ ಹರಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್ ಆಗಿದೆ. ಈಗಾಗಲೇ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದು, ಹಿನ್ನೀರು ಭಾಗದಲ್ಲಿ ಸ್ವಲ್ಪ ಮಳೆಯಾದರೂ ಜಲಾಶಯ ಭರ್ತಿ ಆಗಲಿದೆ ಎಂದು ತಿಳಿದುಬಂದಿದೆ.
ಇನ್ನು ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧರಾವಾಗಿದೆ. ಅಲ್ಲದೆ, ಅಚ್ಚುಕಟ್ಟು ಭಾಗದ ಜಮೀನುಗಳಿಗೆ ಕೃಷಿ ಚಟುವಟಿಕೆಗೂ ಇದೇ ಜಲಾಶಯದಿಂದ ನೀರು ಬಿಡಲಾಗುತ್ತದೆ. ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ.
ಬೆಳೆವಿಮೆ ಅರ್ಜಿ ಚಾಲ್ತಿ. ಅಪ್ಲಿಕೇಶನ್ ಹಾಕುವ ಲಿಂಕ್ ಇಲ್ಲಿದೆ.
ಖರೀದಿಸಿದ ನಂತರ ಮಾರಾಟಗಾರರಿಂದ ಕಡ್ಡಾಯವಾಗಿ ರಸೀದಿ ಕೇಳಿ ಪಡೆಯಬೇಕು ಎಂದು ಹೇಳಿದ್ದಾರೆ.
ಬಿತ್ತನೆ ಬೀಜ ಖರೀದಿ ರಸೀದಿಯಲ್ಲಿ ತಳಿಹೆಸರು, ಲಾಟ್ ಸಂಖ್ಯೆ, ಮಾರಾಟಗಾರರ ಮತ್ತು ಉತ್ಪಾದಕರ ವಿಳಾಸ ಗಮನಿಸಬೇಕು. ಬಿತ್ತನೆ ಬೀಜದ ಚೀಲದಲ್ಲಿ ಸ್ವಲ್ಪ ಪ್ರಮಾಣದ ಬೀಜ ಮತ್ತು ಬಿತ್ತನೆ ಬೀಜದ ದೃಢೀಕರಣದ ಬಗ್ಗೆ ಲಗತ್ತಿಸಿದ ಟ್ಯಾಗ್ನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿರಿಸಿಕೊಳ್ಳಬೇಕು ಎಂದಿದ್ದಾರೆ.
ರಸಗೊಬ್ಬರದ ಚೀಲವನ್ನು ಖರೀದಿಸುವಾಗ ಚೀಲವು ಯಂತ್ರದಿಂದ ಹೊಲಿದಿರಬೇಕು ಮತ್ತು ನಮೂದಿಸಿದಂತೆ ತೂಕ ಸರಿಯಾಗಿದೆಯೇ? ಎಂಬುದರ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಸಂಶಯವಾದಲ್ಲಿ ತೂಕ ಮಾಡಿಸಿ ಖರೀದಿಸಬೇಕು. ರಸಗೊಬ್ಬರದ ಚೀಲದ ಮೇಲೆ ನಮೂದಿಸಿರುವ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿಗೆ ಹಣವನ್ನು ನೀಡಬಾರದು. ರಸಗೊಬ್ಬರ ಖರೀದಿ ರಸೀದಿಯಲ್ಲಿ ರಸಗೊಬ್ಬರದ ಹೆಸರು, ಬ್ರಾಂಡ್ ಹೆಸರು ಮತ್ತು ಬ್ಯಾಚ್ ಸಂಖ್ಯೆ ನಮೂದಿಸಿರಬೇಕು. ರಸಗೊಬ್ಬರವನ್ನು ಖರೀದಿಸಬೇಕಾದರೆ ರೈತರು ತಪ್ಪದೇ ಆಧಾರ್ ಸಂಖ್ಯೆಯನ್ನು ನೀಡಿ ಪಿ.ಓ.ಎಸ್ ಮಷಿನ್ ಬಿಲ್ ತಪ್ಪದೇ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
1791 ಕೋಟಿ ಬೆಳೆವಿಮೆ ಹಣ ಬಿಡುಗಡೆ ಕೃಷಿ ಸಚಿವರ ಸ್ಪಷ್ಟನೆ
ರೈತರೇ ಗಮನಿಸಿ ಬೀಜ, ರಸಗೊಬ್ಬರ, ಕೀಟನಾಶಕ ಖರೀದಿಸುವಾಗ ಇರಲಿ ಈ ಎಚ್ಚರ:
ಕೀಟನಾಶಕಗಳನ್ನು ಖರೀದಿಸುವಾಗ ಬಾಟಲಿ, ಟಿನ್, ಪಾಲಿಥೀನ್ ಪೌಚ್ ಮೇಲೆ ತಯಾರಕರ ಹೆಸರು, ತಯಾರಿಸಿದ ದಿನಾಂಕ, ಕೊನೆಗೊಳ್ಳುವ ದಿನಾಂಕ, ಬ್ಯಾಚ್ ಸಂಖ್ಯೆ ಹಾಗು ಎರಡು ತ್ರಿಕೋನಗಳ ಚಿನ್ಹೆಯನ್ನು ತಪ್ಪದೇ ಗಮನಿಸಬೇಕು. ಕೀಟನಾಶಕ ಕಾಯ್ದೆ 1968 ಮತ್ತು ಕೀಟನಾಶಕ (ತಿದ್ದುಪಡಿ) ನಿಯಮ 2015 ಪ್ರಕಾರ ಪ್ರತಿಯೊಂದು ಕೀಟನಾಶಕದ ಧಾರಕಗಳ ಮೇಲೆ ಅವುಗಳಲ್ಲಿರುವ ವಿಷದ ಪ್ರಮಾಣಕ್ಕೆ ಅನುಗುಣವಾಗಿ ನಾಲ್ಕು ತರಹದ ಕೀಟನಾಶಕಗಳೆÉಂದು ಪರಿಗಣಿಸಲಾಗಿದೆ. ಅವುಗಳನ್ನು ಗುರುತಿಸಲು ಎರಡು ತ್ರಿಕೋನಗಳಲ್ಲಿ ಪದ ಹಾಗು ಚಿಹ್ನೆಗಳ ಮೂಲಕ ತಿಳಿಯಪಡಿಸಲಾಗುತ್ತದೆ.
ಮೊದಲನೆಯದಾಗಿ, ಮೇಲಿನ ತ್ರಿಕೋನದಲ್ಲಿ ವಿಷ ಎಂಬ ಪದದ ಜೊತೆಗೆ ಎಲಬು ಮತ್ತು ಬುರುಡೆ ಚಿಹ್ನೆ ಮತ್ತು ಕೆಳಗಿನ ತ್ರಿಕೋನದಲ್ಲಿ ಕೆಂಪು ಬಣ್ಣ, ಎರಡನೆಯದಾಗಿ ಮೇಲಿನ ತ್ರಿಕೋನದಲ್ಲಿ ವಿಷ ಎಂಬ ಪದ ಮತ್ತು ಕೆಳಗಿನ ತ್ರಿಕೋನದಲ್ಲಿ ಹಳದಿ ಬಣ್ಣ, ಮೂರನೇಯದಾಗಿ ಮೇಲಿನ ತ್ರಿಕೋನದಲ್ಲಿ ಅಪಾಯ ಎಂಬ ಪದ ಮತ್ತು ಕೆಳಗಿನ ತ್ರಿಕೋನದಲ್ಲಿ ನೀಳಿ ಬಣ್ಣ ಮತ್ತು ನಾಲ್ಕನೇಯದಾಗಿ ಮೇಲಿನ ತ್ರಿಕೋನದಲ್ಲಿ ಎಚ್ಚರಿಕೆ ಎಂಬ ಪದ ಮತ್ತು ಕೆಳಗಿನ ತ್ರಿಕೋನದಲ್ಲಿ ಹಸಿರು ಬಣ್ಣದ ಗುರುತು ಕಡ್ಡಾಯವಾಗಿ ಇರಬೇಕು. ಹಾಗಾಗಿ ರೈತರು ಅಧಿಕೃತ ಕೀಟನಾಶಕಗಳನ್ನೇ ಮಾತ್ರ ಖರೀದಿಸಬೇಕು ಮತ್ತು ವಿವಿಧ ಬೆಳೆಗಳಿಗೆ ಕೀಟಗಳ ಹತೋಟಿಗಾಗಿ ಶಿಫಾರಸ್ಸು ಮಾಡಿದ ಕೀಟನಾಶಕಗಳನ್ನು ನಿಗಧಿತ ಪ್ರಮಾಣದಲ್ಲಿ ಮಾತ್ರ ಬಳಸಬೇಕು ಎಂದಿದ್ದಾರೆ.
ಕೇವಲ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಹಣ ಚೆಕ್ ಮಾಡಿ
ರೈತರು ಎಲ್ಲಿಯಾದರೂ ನಕಲಿ ಬೀಜ, ರಸಗೊಬ್ಬರ, ಕೀಟನಾಶಕ ತಯಾರಿಕೆ ಮತ್ತು ಮಾರಾಟ ಮಾಡುವುದು ಕಂಡುಬಂದಲ್ಲಿ ಆಯಾ ರೈತ ಸಂಪರ್ಕ ಕೇಂದ್ರದ ಅಥವಾ ತಾಲ್ಲೂಕಿನ ಪರಿವೀಕ್ಷಕರಿಗೆ ದೂರವಾಣಿ ಮೂಲಕ ಇಲ್ಲವೇ ಲಿಖಿತ ದೂರು ನೀಡಿದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ದೂರುದಾರನ ಹೆಸರು ಗೌಪ್ಯವಾಗಿ ಇಡಲಾಗುವುದು. ನಕಲಿ ಪರಿಕರಗಳ ಮಾರಾಟ ತಡೆಹಿಡಿಯಲು ರೈತರು ಕೃಷಿ ಇಲಾಖೆಗೆ ಸಹಕರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೀಜ ಮತ್ತು ರಸಗೊಬ್ಬರ ಕೊರತೆಯಾಗಬಾರದು. ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಅಗತ್ಯ. ಜಿಲ್ಲೆಯಲ್ಲಿ ಈಗಾಗಲೇ ಶೇ. 76 ರಷ್ಟು ರೈತರು ಪ್ರೂಟ್ ಐಡಿ ಹೊಂದಿದ್ದಾರೆ. ಉಳಿದ ರೈತರು ಪ್ರೂಟ್ ಐಡಿ ಹೊಂದುವಂತೆ ಜಾಗೃತಿ ಮೂಡಿಸಿ, ಪ್ರಗತಿ ಸಾಧಿಸಲು ರೈತರ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೇವಲ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಹಣ ಚೆಕ್ ಮಾಡಿ
ಮುಂಗಾರು ಹಂಗಾಮು 2024ರ ಬಿತ್ತನೆ ಆರಂಭಗೊಂಡಿದ್ದು, ಸಾಕಷ್ಟು ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿರುತ್ತದೆ.ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರವನ್ನು ವಿತರಿಸಬೇಕು, ಕೃತಕ ಅಭಾವ ಸೃಷ್ಟಿಸುವ ಅಥವಾ ನಿಗದಿತ ದರಕ್ಕಿಂತ ಹೆಚ್ವಿನ ದರ ಪಡೆಯುವ ವರ್ತಕರು ಮತ್ತು ವಿತರಕರ ಲೈಸೆನ್ಸ್ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ದರಪಟ್ಟಿ ಪ್ರಕಟಿಸಲು ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ ಬಳಿಕ ಮುಂಗಾರು ಹಂಗಾಮು ಬಿತ್ತನೆ ಆರಂಭಗೊಂಡಿರುತ್ತದೆ. ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೆ ಅಂಗಡಿಗಳಿಗೆ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಬರಗಾಲದಿಂದ ರೈತರು ತತ್ತರಿಸಿದ್ದರು. ಈ ಬಾರಿ ಉತ್ತಮ ಮಳೆಯ ಮುನ್ಸೂಚನೆಯಿದೆ. ಆದ್ದರಿಂದ ರೈತರು ಉತ್ಸಾಹದಲ್ಲಿಯೇ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರಿಗೆ ಉತ್ತಮ ಗುಣಮಟ್ಟದ ಬೀಜ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ವರ್ತಕರಿಗೆ ಎಚ್ಚರಿಕೆ ನೀಡಲಾಗಿದೆ.
ಬೀಜ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆದುಕೊಂಡರೆ ವರ್ತಕರ ನೋಂದಣಿಯನ್ನು ರದ್ದುಗೊಳಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಸರ್ಕಾರದ ಗ್ಯಾರಂಟಿಗಳ ಎಲ್ಲ ಮಾಹಿತಿ ʼಯುವ ಕಣಜʼ ವೆಬ್ ಸೈಟ್ ನಲ್ಲಿ.
ಹಾಗೆಯೇ ರಸಗೊಬ್ಬರ ಲಭ್ಯತೆ ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಹೆಚ್ಚುವರಿ ಹಣ ಪಡೆದರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಸಾರಿಗೆ ವೆಚ್ಚ ಮತ್ತಿತರ ವೆಚ್ಚಗಳ ನೆಪವೊಡ್ಡಿ ರೈತರಿಂದ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಈಗಾಗಲೇ ಸಾಕಷ್ಟು ರಸಗೊಬ್ಬರ ಅಥವಾ ಬೀಜ ದಾಸ್ತಾನು ಮಾಡಲಾಗಿದೆ. ಆದರೆ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ರೈತರು ಏಕಕಾಲಕ್ಕೆ ಬೀಜ ವಿತರಣಾ ಕೇಂದ್ರಗಳಿಗೆ ಆಗಮಿಸಿದರೆ ಗೊಂದಲ ಉಂಟಾಗಬಹುದು. ಆದ್ದರಿಂದ ಟೋಕನ್ ವ್ಯವಸ್ಥೆ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಅಗತ್ಯಕ್ಕೆ ಅನುಸಾರ ಬೀಜ, ರಸಗೊಬ್ಬರವನ್ನು ಪೂರೈಸಬೇಕು ಎಂದು ಸೂಚನೆ ನೀಡಲಾಗಿದೆ.
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಾಷ್ಟು ದಾಸ್ತಾನು ಇರುತ್ತದೆ. ಸರ್ಕಾರದಿಂದ ವಿವಿಧ ಬಗೆಯ ಬಿತ್ತನೆ ಬೀಜಗಳಿಗೆ ನಿಗದಿಪಡಿಸಲಾಗಿರುವ ದರಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.