ಮೆಣಸಿನಕಾಯಿ & ದಾಳಿಂಬೆ ಬೆಳೆ ವಿಮಾ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ
ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ ಸಪ್ಪಂಡಿ ತಿಳಿಸಿದ್ದಾರೆ.ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯಾಗಬಹುದು. ಈ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ…