ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ.
ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದು ಅವರು ಬೆಳದ ರೈತರ ಹಿತಕ್ಕಾಗಿ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ,ಹಾಲಿಗೆ ಪ್ರತಿ ಲೀ 5 ರೂ ಗೆ ಸಬ್ಸಿಡಿ ನೀಡಲಾಗುತ್ತಿದೆ. ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳೆಲ್ಲವನ್ನು 1 ವರ್ಷದೊಳಗೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಚಲುವರಾಯಸ್ವಾಮಿ ಹೇಳಿದರು. ಈ ವರ್ಷವೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೃಷಿ ಭಾಗ್ಯ ಬೀದರ್ ಸೇರಿದಂತೆ ರಾಜ್ಯಾದ್ಯಂತ ವಿಸ್ತಾರಣೆಯಾಗಲಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಬಿತ್ತನೆ ಬೀಜ ರಸಗೊಬ್ಬರ ಕೈ ಯಾವುದೇ ಕೊರತೆ ಇಲ್ಲದಂತೆ ವೇ ನಿಭಾಯಿಸಲಾಗುತ್ತಿದೆ ಎಂದರು.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯ ಜೊತೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಹಲವೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
ಮುಂಗಾರು ಆರಂಭವಾದ ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ಜನರು ಕಂಗೆಟ್ಟಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಸಹ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್ ನೀಡಿದೆ. ಜೊತೆಗೆ ಜನರಿಗೆ ಎಚ್ಚರಿಕೆ ವಹಿಸಲಾಗಿದೆ.
ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ನೀಡಲು ಸರ್ಕಾರ ಪ್ರವಾಹದ ಆಧಾರದ ಮೇಲೆ ನೀಡುತ್ತದೆ. ಅದೇ ರೀತಿ ಈಗ ರೈತರು ಸಹ ತಮ್ಮ ಸುತ್ತ ಆಗುವ ಮಳೆ, ಗಾಳಿ, ಹವಾಮಾನ ಬದಲಾವಣೆ ಇವೆಲ್ಲವುಗಳನ್ನು ತಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಲು ಒಂದು ಮೌಸಮ್ ಎಂಬ ಆ್ಯಪ್ ಬಂದಿದೆ. ಕೂಡಲೇ ರೈತರು ಇದನ್ನು ಬಳಸಿಕೊಂಡು ಕೃಷಿಯಲ್ಲಿ ಹವಾಮಾನದ ಬಗ್ಗೆ ಮಾಹಿತಿ ಪಡೆಯಬೇಕು.
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ (Heavy rain alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Karnataka Rain) ನಿರೀಕ್ಷೆಯಿದೆ.ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೀದರ್‌ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಗಾಳಿ ಜತೆಗೆ ಮಳೆಯ ಸಿಂಚನ
ರಾಜಧಾನಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ನಿರಂತರವಾಗಿ ಇರಲಿದ್ದು, 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲಿಯಸ್ ಇರಲಿದೆ.
ಕರಾವಳಿ-ಮಲೆನಾಡಿಗೆ ರೆಡ್ ಅಲರ್ಟ್ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿಯಲ್ಲೂ ಮಳೆಯು ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ಬೀದರ್, ಗದಗ, ಕೊಪ್ಪಳ ಸೇರಿ ರಾಯಚೂರು, ಬಳ್ಳಾರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.