ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.

ಪ್ರೀಯ ಸಾರ್ವಜನಿಕರಿಗೆ ಗುಡ್ ನ್ಯೂಸ್ ತಂದಿದ್ದೇವೆ ಏನೆಂದರೆ 2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ.

1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ.

2) ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

3) ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಈ ವಿಧಾನದ ಮೂಲಕ ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯಾ..ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಬಹುದು.

ಚೆಕ್ ಮಾಡುವ ವಿಧಾನ

1) ಮೊದಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿಕೊಡಬೇಕು. https://ahara.kar.nic.in/WebForms/Show_Village_List.aspx

2) ಮೆನು ಬಾರ್ ಅಲ್ಲಿ ‘E service’ ಎನ್ನುವ ಆಯ್ಕೆ ಕಾಣುತ್ತದೆ, ಅದನ್ನು ಕ್ಲಿಕ್ ಮಾಡಿ

3) ನಂತರ ಪೇಜ್ ನ ಎಡಭಾಗದಲ್ಲಿ ಎಲ್ಲಾ ಸೇವೆಗಳ ಲಿಸ್ಟ್ ಬರುತ್ತದೆ. ಅದರಲ್ಲಿ ಇ-ರೇಷನ್ ಕಾರ್ಡ್ ಎನ್ನುವುದನ್ನು ಸೆಲೆಕ್ಟ್ ಮಾಡಿ ಮತ್ತಷ್ಟು ಸೇವೆಗಳ ವಿವರ ಬರುತ್ತದೆ ಅದರಲ್ಲಿ ವಿಲೇಜ್ ಲಿಸ್ಟ್ ಎನ್ನುವುದನ್ನು ಕ್ಲಿಕ್ ಮಾಡಿ. ಅಲ್ಲಿ ಜಿಲ್ಲಾವಾರು ಲಿಂಕ್ ಇರುತ್ತದೆ, ಅದರಲ್ಲಿ ನಿಮ್ಮ ಜಿಲ್ಲೆ ಇರುವ ಲಿಂಕ್ ಸೆಲೆಕ್ಟ್ ಮಾಡಿ. ನಂತರ ತಾಲೂಕು, ಗ್ರಾಮ ಪಂಚಾಯತ್, ವಿಲೇಜ್ ಸೆಲೆಕ್ಟ್ ಮಾಡಿ ನಂತರ GO ಆಪ್ಶನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಊರಿನ ಫಲಾನುಭವಿಗಳ ಪಟ್ಟಿ ಬರುತ್ತದೆ. ಅಲ್ಲಿ ನಿಮ್ಮ ಹೆಸರನ್ನು ಸರ್ಚ್ ಮಾಡಬಹುದು. ಒಂದು ವೇಳೆ ಪಟ್ಟಿ ಓಪನ್ ಆಗಿದ್ದರೆ ಸರ್ವರ್ ತೊಂದರೆ ಇರುತ್ತದೆ. ಸ್ವಲ್ಪ ಸಮಯದ ಬಳಿಕ ಸರ್ಚ್ ಮಾಡಿ.

ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಸ್ಟೇಟಸ್ ಚೆಕ್ ಮಾಡಿ

ಹಂತ 1: ಅಧಿಕೃತ ಸೇವಾ ಸಿಂಧು ವೆಬ್‌ಸೈಟ್‌ಗೆ ಭೇಟಿ ನೀಡಿ: sevasindhuservices.karnataka.gov.in.

ಹಂತ 2: Check Application/Beneficiary Status ಆಯ್ಕೆಯ ಮೇಲೆ ಕ್ಲಿಕ್ ಮಾಡಿ

ಹಂತ 3: ನಿಮ್ಮ ಅಪ್ಲಿಕೇಶನ್‌ನ ರೆಫೆರೆನ್ಸ್ ನಂಬರ್ ಅಥವಾ ಇತರ ಸಂಬಂಧಿತ ಮಾಹಿತಿಯಂತಹ ಅಗತ್ಯವಿರುವ ವಿವರಗಳನ್ನು ನಮೂದಿಸಿ.

ಹಂತ 4: ನಿಮ್ಮ ಅರ್ಜಿಯ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸಲು ವಿವರಗಳನ್ನು ಸಬ್‌ಮಿಟ್ ಮಾಡಿ, ನೀವು ಯೋಜನೆಯ ಫಲಾನುಭವಿಗಳ ಲೀಸ್ಟ್‌ನಲ್ಲಿ ಇದ್ದೀರಾ ಎಂದು ಚೆಕ್ ಮಾಡಿಕೊಳ್ಳಿ.

ಈ ಮಹಿಳೆಯರಿಗೆ 2000 ರೂ ಹಣ ಪಡೆಯುವ ಭಾಗ್ಯ ಇರಲ್ಲ :

1) ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಸಹಾಯಧನ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.
2) ನಾಲ್ಕು ಚಕ್ರದ ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಮಹಿಳೆಯರಿಗೆ 2000 ಹಣ ಸಿಗಲ್ಲ.
3) ಸರ್ಕಾರಿ ಹುದ್ದೆ ಹೊಂದಿರುವ ಮತ್ತು ಪೆನ್ಷನ್ ಪಡೆಯುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ.
4) ಆದಾಯ ತೆರಿಗೆ, ಪ್ರೊಫೆಷನಲ್ ಟ್ಯಾಕ್ಸ್ , GST ರಿಟರ್ನ್ಸ್ ಪಾವತಿಸುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ
5) ಏಳು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ.


ಗೃಹ ಲಕ್ಷ್ಮೀ ಹಣ ಡಿಬಿಟಿ ಮೂಲಕ ಯಾವಾಗ ಬರುತ್ತದೆ?

ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಹೇಳಿದರು. ಕರ್ನಾಟಕದಲ್ಲಿರುವ ಕುಟುಂಬಗಳ ಪೈಕಿ ಶೇ.98 ರಷ್ಟು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.ಬಾಕಿ ಇರುವ 11 ನೇ ಕಂತಿನ ಹಣ ಜುಲೈ 15 ರೊಳಗೆ ಪಾವತಿಯಾಗಲಿದೆ. ಅಷ್ಟೇ ಅಲ್ಲದೇ ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.

ವಾಟ್ಸಾಪ್‌ ಚಾಟ್‌ಬಾಟ್ ಬಳಸಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ವಾಟ್ಸಾಪ್ ಚಾಟ್‌ಬಾಟ್ ಸೇವೆಯನ್ನು ಪರಿಚಯಿಸಿದೆ. ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಲ್ಲಿಸಬೇಕಾದರೆ ಫಲಾನುಭವಿಗಳು ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಇಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ನಡುವೆ ಸರ್ಕಾರವು ಜನರಿಗೆ ಸಹಾಯವಾಗುವಂತೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗಗೊಳಿಸಿದೆ. ನಾವು ಸಾಮಾನ್ಯವಾಗಿಯೇ ವಾಟ್ಸಾಪ್ ಅನ್ನು ಬಳಕೆ ಮಾಡುತ್ತಾ ಇರುತ್ತೇವೆ. ಪ್ರತಿ ದಿನ ಬೆಳಗಾದರೆ, ರಾತ್ರಿಯಾದರೆ ನಾವು ವಾಟ್ಸಾಪ್ ನೋಡಿಯೇ ಏಳುತ್ತೇವೆ, ಮಲಗುತ್ತೇವೆ. ಈಗ ಈ ತಂತ್ರಜ್ಞಾನವನ್ನೇ ಬಳಸಿಕೊಂಡು ನಾವು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಚಾಟ್‌ಬಾಟ್ ಲಿಂಕ್ ಆಗಿರುವ ವಾಟ್ಸಾಪ್ ಸಂಖ್ಯೆ 8147500500 ಅನ್ನು ಸರ್ಕಾರ ಒದಗಿಸಿದೆ. ವಾಟ್ಸಾಪ್ ಬಳಕೆದಾರರು ತಮ್ಮ ವಿವರಗಳನ್ನು ಈ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಚಾಟ್‌ಬಾಟ್ ಅರ್ಜಿ ಸಲ್ಲಿಸಲು ಬಳಕೆದಾರರಿಗೆ ಸಹಾಯ ಮಾಡಲಿದೆ ಮತ್ತು ಮಾರ್ಗದರ್ಶನ ನೀಡಲಿದೆ.

ಚಾಟ್‌ಬಾಟ್ ಈ ಅರ್ಜಿಯನ್ನು ಬೆಂಗಳೂರುಒನ್, ಕರ್ನಾಟಕ ಒನ್ ಮತ್ತು ಗ್ರಾಮಒನ್ ಕಚೇರಿಗಳಿಗೆ ವರ್ಗಾಯಿಸುತ್ತದೆ. ಅಲ್ಲಿ ಎಲ್ಲ ಪರಿಶೀಲನೆ ನಡೆಯಲಿದೆ. ಮಾಧ್ಯಮ ವರದಿಗಳ ಪ್ರಕಾರ, ವಾಟ್ಸಾಪ್ ಚಾಟ್‌ಬಾಟ್ ಸೇವೆಗಳಿಂದ ಏಳು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಈಗಾಗಲೇ ಸ್ವೀಕರಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಜೊತೆಗೆ ತಮ್ಮ ಪಡಿತರ ಚೀಟಿಯಾದ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಅನ್ನು ಒದಗಿಸಬೇಕಾಗುತ್ತದೆ. ಇನ್ನು ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಲ್ಲದಿದ್ದರೆ, ಆಧಾರ್ ಕಾರ್ಡ್ ಮಾಹಿತಿ ಜೊತೆಗೆ ಪಾಸ್‌ಬುಕ್ ಅನ್ನು ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಕ್ತಿ ಯೋಜನೆಯಲ್ಲಿಯೂ ಚಾಟ್‌ಬಾಟ್ ಸೇವೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಪ್ರಯಾಣಿಕರಿಗೆ ಈಗಾಗಲೇ ಸರ್ಕಾರವು ತಿಳಿಸಿದೆ. ಈ ಯೋಜನೆಗಾಗಿ ಶೀಘ್ರದಲ್ಲೇ ವಾಟ್ಸಾಪ್ ಚಾಟ್‌ಬಾಟ್ ಅನ್ನು ಪರಿಚಯಿಸುವ ಸಾಧ್ಯತೆಯಿದೆ.

ಏನಿದು ಗೃಹ ಲಕ್ಷ್ಮೀ ಯೋಜನೆ ತಿಳಿಯಿರಿ

ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.

ಈ ಯೋಜನೆಯ ಮಾರ್ಗಸೂಚಿ, ಮಾನದಂಡಗಳು

* ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 16 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

* ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದರ, ಬಿಪಿಎಲ್, ಎಪಿಎಲ್ ಪಡಿತ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿದ್ದಾರೆ.

* ಒಂದು ಕುಟುಂಬದಲ್ಲಿ ಒಂದಕ್ಕಿಂತ ಅಧಿಕ ಮಹಿಳೆಯರು ಇದ್ದರೆ ಎಲ್ಲರಿಗೂ ಈ ಯೋಜನೆಯ ಲಾಭ ಲಭ್ಯವಾಗುವುದಿಲ್ಲ. ಮನೆಯ ಯಜಮಾನಿ ಎಂದು ಗುರುತಿಸಲ್ಪಟ್ಟ ಒಬ್ಬರಿಗೆ ಮಾತ್ರ ಈ ಯೋಜನೆಯ ಮೂಲಕ ಎರಡು ಸಾವಿರ ರೂಪಾಯಿ ಲಭ್ಯವಾಗುತ್ತದೆ.

* ಆನ್‌ಲೈನ್ ಆಪ್, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸ್ಥಳೀಯವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ಅರ್ಜಿ ಸಲ್ಲಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಸಹಾಯ ಪಡೆಯಬಹುದಾಗಿದೆ.

* ಆರಂಭದಲ್ಲಿ ಯೋಜನೆಯ ಲಾಭ ಪಡೆಯಬೇಕಾದರೆ ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯ ಎಂದು ಹೇಳಲಾಗಿತ್ತು. ಆದರೆ ಈಗ ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ.

* ನೀವು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಅನುಮೋದನೆಯಾಗಿ ನಿಮಗೆ ಆಗಸ್ಟ್‌ನಲ್ಲಿ ಹಣ ಲಭ್ಯವಾಗಬಹುದು. ಆದರೆ ಬಳಿಕ ನೀವು ಸಲ್ಲಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ ನೀವು ನಕಲಿ ದಾಖಲೆ ಸಲ್ಲಿಸಿರುವುದು ಖಚಿತವಾದರೆ, ಅಥವಾ ನೀವು ತಪ್ಪು ಮಾಹಿತಿ ನೀಡಿದ್ದರೆ, ನಿಮಗೆ ನೀಡಿದ ಹಣವನ್ನು ಹಿಂಪಡೆಯಲಾಗುತ್ತದೆ. ಹಾಗೆಯೇ ನಿಮ್ಮ ವಿರುದ್ಧ ಸೂಕ್ತವಾದ ಕ್ರಮವನ್ನು ಕೈಗೊಳ್ಳಲಾಗುತ್ತದೆ.

Spread positive news

Leave a Reply

Your email address will not be published. Required fields are marked *