ರಾಜ್ಯ ಸರ್ಕಾರದ ಕಡೆಯಿಂದ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಸಾರ್ವಜನಿಕರು ಈ ಎಲ್ಲ ಯೋಜನೆಗಳ ಸದುಪಯೋಗ ಪಡೆಯಲು ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ. ಬನ್ನಿ ಯಾವ ನಿಗಮದಿಂದ ಯಾವ ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ ಎಂದು ತಿಳಿಯೋಣ.
ರಾಜ್ಯ ಸರ್ಕಾರದ ಕಡೆಯಿಂದ ವೀರಶೈವ ಲಿಂಗಾಯತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ವಿವಿಧ ಯೋಜನೆಗಳಡಿ ಸಾಲ ಪಡೆಯಲಿಚ್ಚಿಸುವವ ಫಲಾನುಭವಿಗಳು ಇದೇ ತಿಂಗಳು ಅಂದರೆ ಆಗಸ್ಟ್ 31 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.
ಬಸವ ಬೆಳಗು ಯೋಜನೆ ಅರ್ಹತಾ ಮಾನದಂಡಗಳು:
ಈ ಯೋಜನೆಯಡಿ ಸಾಲಕ್ಕೆ ಅರ್ಜಿ ಸಲ್ಲಿಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ 3.5 ಲಕ್ಷ ರೂ.ಗಿಂತ ಹೆಚ್ಚಿರತಕ್ಕದ್ದಲ್ಲ. ವೃತ್ತಿಪರ ಕೋರ್ಸ್ಗಳಾದ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ 28 ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ವಾರ್ಷಿಕ 1 ಲಕ್ಷದಿಂದ ಗರಿಷ್ಟ 4 ಲಕ್ಷದಿಂದ 5 ಲಕ್ಷದವರೆಗೆ ಶೇ.2 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಿಇಟಿ/ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ ಪಡೆದಿರತಕ್ಕದ್ದು.
2022-2023ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 3ನೇ ಕಂತಿನ ನವೀಕರಣ ಸಾಲ ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ವಿದೇಶ ವಿದ್ಯಾವಿಕಾಸ ಯೋಜನೆ ಅರ್ಹತಾ ಮಾನದಂಡಗಳು:
ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕದ ಆದಾಯ ರೂ.8.00 ಲಕ್ಷಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಕಿಖ ಘಾಡಿಟಜ ಖಚಿಟಿಟಿರಿ-ನ 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್, ಪಿಹೆಚ್ಡಿ, ಸ್ನಾತಕೋತ್ತರ ಪದವಿ ಪ್ರವೇಶ ಹೊಂದಿರಬೇಕು. ಪದವಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.10.00 ಲಕ್ಷಗಳಂತೆ 3ವರ್ಷದವರೆಗೆ ಒಟ್ಟು ರೂ.20.00 ಲಕ್ಷಗಳನ್ನು ಶೂನ್ಯಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.
ಜೀವಜಲ ಯೋಜನೆ: ಅರ್ಹತಾ ಮಾನದಂಡಗಳು:
ವಿದ್ಯಾರ್ಥಿಗಳು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು. ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಘಟಕ ವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ, ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ, ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ. ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣಪತ್ರವನ್ನು ಹೊಂದಿರತಕ್ಕದ್ದು.
ಕಾಯಕ ಕಿರಣ ಯೋಜನೆ ಅರ್ಹತಾ ಮಾನದಂಡಗಳು:
ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/- ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಘಟಕವೆಚ್ಚ ರೂ.2,00.000/- ಗಳಿಗೆ ಶೇ.15ರಷ್ಟು ಗ- ರಿಷ್ಠ ರೂ.30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಭೋಜನಾಲಯ ಕೇಂದ್ರ ಅರ್ಹತಾ ಮಾನದಂಡಗಳು:
ವೀರಶೈವ-ಲಿಂಗಾಯತ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4.60,000/- ಬ್ಯಾಂಕ್ ಸಾಲ ಪಡೆದಿದ್ದಲ್ಲಿ ರೂ. 40,000/- ಸಹಾಯಧನ ನೆರವು ನೀಡಲಾಗುವುದು. ಲಾನುಭವಿಗಳು ತಮ ಸ್ವಂತ ಹೆಸರಿನಲ್ಲಿ ಕನಿಷ್ಠ 20ರಿಂದ30 ಅಳತೆಯುಳ್ಳ ನಿವೇಶನ ಹೊಂದಿರಬೇಕು.
ವಿಭೂತಿ ನಿರ್ಮಾಣ ಘಟಕ ಅರ್ಹತಾ ಮಾನದಂಡಗಳು:
ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚರೂ. 4.00 ಲಕ್ಷ ಇದರಲ್ಲಿ ರೂ.3,60,000/- ನಿಗಮದಿಂದ ಸಾಲ ಮತ್ತುರೂ. 40,000/- ಸಹಾಯಧನ ವಾರ್ಷಿಕ ಶೇ.3 ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಅರ್ಹತಾ ಮಾನದಂಡಗಳು
ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು?ಸ್ವಾವಲಂಬಿ ಸಾರಥಿ? ಯೋಜನೆಯಡಿ ನಾಲ್ಕು ಚಕ್ರವಾಹನ (ಹಳದಿಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರುಮಾಡಲಾಗುತ್ತದೆ.
ಉಳಿದ ಮೊತ್ತವನ್ನು ಬ್ಯಾಂಕ್ / ಹಣಕಾಸು ಸಂಸ್ಥೆಗಳ ಮೂಲಕ ಅವರು ವಿತರಿಸುವ ಚಾಲ್ತಿ ಬಡ್ಡಿ ದರದಲ್ಲಿ ಸಾಲ ಪಡೆಯುವುದು. ವಯೋಮಿತಿ 21 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ):
ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಠ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುತ್ತದೆ.
ವಿಶೇಷ ಸೂಚನೆ :
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಫೀಡ್ ಮಾಡಿರಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ. https://kvidcl.karnataka.gov.in. ನಿಗಮದ ದೂರವಾಣಿ ಸಂಖ್ಯೆ: 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ವಿಜಯಾನಂದ ಕಾಶಪ್ಪನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.