ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ.
ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು ನೋಂದಣಿಯಾಗಿರುವುದು ಕಂಡು ಬಂದಿರುತ್ತದೆ.
ಆದ್ದರಿಂದ, ಎರಡಕ್ಕಿಂತ ಹೆಚ್ಚು ಫಲಾನುಭವಿಗಳು ಒಂದೇ ಮಾನ್ಯ Mobile Number ಉಪಯೋಗಿಸಿಕೊಂಡು ಅಥವಾ ಅಮಾನ್ಯ Mobile Number ಉಪಯೋಗಿಸಿಕೊಂಡು ಯೋಜನೆಯಡಿ ನೋಂದಣಿಯಾಗಿದ್ದಲ್ಲಿ, ಅಂತಹ ಫಲಾನುಭವಿಗಳಿಗೆ ಮುಂದಿನ ಕಂತುಗಳ ಆರ್ಥಿಕ ನೆರವು ವರ್ಗಾವಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿರುತ್ತಾರೆ. ರಾಜ್ಯದ ಒಟ್ಟು 30154 ಫಲಾನುಭವಿಗಳ ಪಟ್ಟಿಯನ್ನು ನೀಡಿ, ದಿನಾಂಕ: 31.08.2024 ರೊಳಗೆ ತಿದ್ದುಪಡಿಮಾಡಲು ತಿಳಿಸಿರುತ್ತಾರೆ.
ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ Mobile Number ಅನ್ನು ತಿದ್ದುಪಡಿಮಾಡಲು ಈಗಾಗಲೇ ಭಾತರ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್‌ನ ಮುಖಪುಟದಲ್ಲಿ Update Mobile Number” (https://pmkisan.gov.in/MobileUpdation_Pub.aspx) 2 ಆಯ್ಕೆಯನ್ನು ನೀಡಲಾಗಿದ್ದು, ಸದರಿ ಫಲಾನುಭವಿಗಳ ಮಾಹಿತಿಯನ್ನು ದಿನಾಂಕ: 31.08.2024 ರೊಳಗೆ ತಿದ್ದುಪಡಿಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ನಿರ್ದೇಶಿಸಿದೆ.
ಮುಂದುವರೆದು, ಉಲ್ಲೇಖ-2 ರಲ್ಲಿಪಿ. ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ Untraceable ಎಂದು ವರದಿ ಮಾಡಿದ ನಂತರ e- KYC ಮಾಡಿಸಿಕೊಂಡಂತಹ ಫಲಾನುಭವಿಗಳ ಅರ್ಹತೆಯನ್ನು ಯೋಜನೆಯ ಮಾರ್ಗಸೂಚಿಯನ್ವಯ ಪರಿಶೀಲಿಸಿ ದಿನಾಂಕ: 10.08.2024 ರೊಳಗೆ ಕೇಂದ್ರ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದ್ದು, ಅದಾಗ್ಯೂ, ಇಲ್ಲಿಯವರೆಗೆ ಯಾವುದೇ ಜಿಲ್ಲೆಯಿಂದ ವರದಿ ಕೇಂದ್ರ ಕಚೇರಿಗೆ ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ ಸದರಿ ಪರಿಶೀಲನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ವರದಿಯನ್ನು ಸಲ್ಲಿಸಬೇಕೆಂದು ಮತ್ತೊಮ್ಮೆ ತಿಳಿಸಿದೆ.
18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??
ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು
https://pmkisan.gov.in/Rpt_BeneficiaryStatus_pub.aspx
2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ.
ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..
ಈ ಕೆಳಗೆ ತೋರಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮಗೆ ಮಧ್ಯಂತರ ಬೆಳೆವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂಬ ಮಾಹಿತಿಯನ್ನು ಪಡೆಯಿರಿ.
➡️ ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ.
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ.
https://samrakshane.karnataka.gov.in/Premium/CheckStatusMain_aadhaar.aspx
ಈ ಮೇಲೆ ಕಾಣುವ ಮುಖಪುಟದಲ್ಲಿ ನಿಮ್ಮ ಪ್ರೊಪೋಸಲ್ ಸಂಖ್ಯೆ ಮೊಬೈಲ್ ನಂಬರ್ ಇಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ಸೀಸನ್ ಕ್ಲಿಕ್ ಮಾಡಿರಿ.