2024- 25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ/ ಅತೀವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಯಾದಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಶೀಲ್ದಾರ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ದಿನಾಂಕ:02-09-2024 ರಂದು ಪ್ರಕಟಿಸಲಾಗಿರುತ್ತದೆ. ಬೆಳೆ ಹಾನಿ ಸಮೀಕ್ಷೆ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ರೈತರು ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 07 ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಮಾಹಿತಿ ನೀಡದ ಅಧಿಕಾರಿ
ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಆಗಿರುವ ಪ್ರಯೋಜನಗಳ ಬಗ್ಗೆ ನಿಖರ ಮಾಹಿತಿ ನೀಡಲು ತಡವರಿಸಿದ ಹಿರಿಯ ಸಹಾಯಕ ನಿರ್ದೇಶಕ (ಪ್ರಭಾರ) ಪರಶುರಾಮ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕ ರುದ್ರಪ್ಪ ಲಮಾಣಿ, ‘ರೈತರ ವಿಚಾರದಲ್ಲಿ ಬೇಜವಾಬ್ದಾರಿ ವರ್ತನೆ ಸಹಿಸುವುದಿಲ್ಲ. ನಿಮಗೆ ನೋಟಿಸ್ ನೀಡಿ ಅಮಾನತುಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ‘ಸಾಮಾನ್ಯ ಸಭೆ’ಯಲ್ಲಿ ಪಾಲ್ಗೊಂಡಿದ್ದ ರುದ್ರಪ್ಪ ಲಮಾಣಿ, ಅಧಿಕಾರಿಗಳ ವರ್ತನೆಗೆ ಕಿಡಿಕಾರಿದರು. ರೈತರು ಹಾಗೂ ಜನಪರವಾಗಿ ಕೆಲಸ ಮಾಡಿ. ರೈತರ ಬಳಿ ಹೋಗದೇ, ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಬೇಡಿ’ ಎಂದು ತಾಕೀತು ಮಾಡಿದರು. ತೋಟಗಾರಿಕೆ ಇಲಾಖೆಯ ಅಂಕಿ-ಅಂಶ ಆಲಿಸಿದ ಶಾಸಕ, ‘ಯೋಜನೆ ಲಾಭ ಪಡೆದು ತೋಟ ಮಾಡಿರುವ ಒಬ್ಬ ರೈತರ ಹೆಸರು ಹೇಳಿ. ನಾನೇ ತೋಟಕ್ಕೆ ಹೋಗಿ ಬರುತ್ತೇನೆ’ ಎಂದರು.
ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಕೆಲವು ತಪ್ಪುಗಳ ಆಧಾರದ ಮೇಲೆ ಪರಿಹಾರ ಪಡೆಯುವ ರೈತರ ಪೈಕಿ ಆಧಾರ್ ಕಾರ್ಡ್ ಲಿಂಕ್ ಆಗದವರು ಹೆಚ್ಚಿದ್ದಾರೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್ ಸಂಖ್ಯೆ ಬೆಳೆಪರಿಹಾರ ಲಿಂಕ್ ಆಗಿದೆ ಇಲ್ಲವೆಂದು ಪರಿಶೀಲಿಸಿಕೊಳ್ಳಬೇಕು. ಆದರೆ ಇನ್ನಿತರ ತಿದ್ದುಪಡಿ ಇದ್ದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನಕ್ಕೆ ತರಬೇಕು ಜೊತೆಗೆ ಸಲ್ಲಿಸಲಾದ ದಾಖಲೆಗಳು ಪಾಲಿಸಬೇಕಾದ ನಿಯಮಗಳು ಸರಿಯಾಗಿದೆಯೇ ಎಂದು ರೈತರು ಗಮನವಹಿಸಬೇಕು ಎಂದರು.
ಬೆಳೆ ಹಾನಿ ಪರಿಹಾರ ಎಂದರೇನು? ಅದರ ಬಗ್ಗೆ ತಿಳಿಯೋಣ –
ಬೆಳೆಹಾನಿ ಪರಿಹಾರ ಎಂದರೆ ಪ್ರಕೃತಿಯಲ್ಲಿ ಹೆಚ್ಚಿನ ಮಳೆ, ಅತೀವೃಷ್ಟಿ, ಭಾರಿ ಪ್ರವಾಹ, ಹಾಗೂ ಬರಗಾಲ ಉಂಟಾಗಿ ಬೆಳೆ ಹಾನಿಯಾಗಿದ್ದರೆ ಪ್ರತಿ ಎಕರೆಗೆ ಬೆಳೆಗಳ ಆಧಾರದ ಮೇಲೆ ಬೆಳೆ ಹಾನಿ ಪರಿಹಾರವನ್ನು ರಾಜ್ಯ ಸರ್ಕಾರವು ಪ್ರತಿ ವರ್ಷ ಘೋಷಿಸುತ್ತದೆ. ಹಾಗೂ ಅದು ಬೆಳೆಗಳ ಆಧಾರದ ಮೇಲೆ ವಿಭಜಿಸಿ ಪರಿಹಾರ ನೀಡಲಾಗುವುದು. ರೈತರಿಗೆ ಸಹಾಯ ಮಾಡಬೇಕು ಎಂಬ ಹಿತದೃಷ್ಟಿಯಿಂದ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.
ಮುಖ್ಯವಾಗಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ರೈತರು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಆಧಾರ್ ಕಾರ್ಡ್ ಆಯ್ಕೆ ಮಾಡಿಕೊಂಡು, ಫ್ಲಡ್ ಆಯ್ಕೆ ಮಾಡಿ ಯಾವ ವರ್ಷದ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದಾರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ನಂಬರ್ ಹಾಗೂ ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಅದೇ ರೀತಿ ಕೃಷಿ ಸಚಿವರು ವಿಮಾ ಕಂಪೆನಿಗೆ ತಾಕಿತ್ತು ಮಾಡಿದ್ದಾರೆ. ಸಚಿವರು ಸ್ಪಷ್ಟನೆ ನೀಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ವಿವರಿಸಿದರು. ಈಗಾಗಲೇ ಬೆಳೆ ವಿಮೆ ಮಾಡಿಸಿರುವ ರೈತರು ಪೂರ್ವ ಮುಂಗಾರು ಹೊಂಗಮಿನ ಪರಿಹಾರಕ್ಕಾಗಿ ಕಾದು ಕುಳಿತಿದ್ದಾರೆ ಪರಿಹಾರ ಕ್ರಮದ ಸಲುವಾಗಿ ವಿಮಾ ಕಂಪನಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿರಿ ಎಂದು ಸಚಿವರು ತಾಕಿತ್ತು ಮಾಡಿದರು.