ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮೋಡ ಮುಸುಕಿದ ವಾತಾವರಣ ಹಾಗೂ ತುಂತುರು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದೇಶದ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ್ದು, ಕೆಲವೇ ರಾಜ್ಯಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಅಕ್ಟೋಬರ್ 8ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 3ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಕ್ಟೋಬರ್ 4ರಂದು ಗಂಗಾ ಪಶ್ಚಿಮ ಬಂಗಾಳ, ಅಕ್ಟೋಬರ್ 4 & 5ರಂದು ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಅಕ್ಟೋಬರ್ 6-8ರ ವರೆಗೆ ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಮಳೆ ಆರ್ಭಟಿಸುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ನಾಲ್ಕು ತಿಂಗಳಲ್ಲಿ ಅಂದರೆ ಮುಂಗಾರು ಅವಧಿಯಲ್ಲಿ ಜೂನ್ ನಿಂದ ಸೆಪ್ಟಂಬರ್ ವರೆಗೆ ವಾಡಿಕೆಗಿಂತ ಶೇ.15ರಷ್ಟು ಅಧಿಕ ಮಳೆ ಆಗಿದೆ. ಮುಂದಿನ ದಿನಗಳಲ್ಲಿ ಸಹಿತ ಗುಡಗು ಮಿಂಚು ಸಹಿತ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.
ರಾಜ್ಯದಲ್ಲಿ ಹಲವಾರು ಕಡೆ ಇನ್ನೂ ಮಳೆ ನಿರಂತರವಾಗಿ ಇದ್ದು ದಕ್ಷಿಣ ಕರ್ನಾಟಕದ ಭಾಗ ಜಲಾವೃತ ವಾಗಿದೆ.
ಉತ್ತರ ಕನ್ನಡದ ಕರಾವಳಿಯಲ್ಲೂ ಭಾರೀ ಮಳೆ ಸುರಿಯುತ್ತಿದೆ. ಅಘನಾಶಿನಿ, ವಾಲಗಳ್ಳಿ-ಅರೋಡಿ ರಸ್ತೆಗಳು ಜಲಾವೃತವಾಗಿವೆ. ಅಂಕೋಲಾದ ಹಾರವಾಡದಲ್ಲಿ ಕಡಲ್ಕೊರೆತವಾಗಿದೆ. ಕಾರವಾರದ ಚೆಂಡಿಯಾ, ಇಡೂರು ಬಳಿ ಮನೆಗಳಿಗೆ ಮಳೆ ನೀರು ನುಗ್ಗಿದ ಕಾರಣ ಜಲದಿಗ್ಬಂಧನ ಉಂಟಾಗಿತ್ತು. ಸುಪಾ ಹಿನ್ನೀರು, ಕೊಡಸಳ್ಳಿ, ಕದ್ರಾದಲ್ಲಿ ಭಾರೀ ಮಳೆ ಸುರಿದಿದೆ.
ಈಗಾಗಲೇ ಆಯಾ ಜಿಲ್ಲೆಯ ಸಚಿವರು ಶಾಸಕರು ಜನರ ಸಂಕಷ್ಟಕ್ಕೆ ನಿಂತಿದ್ದು ರಾಜ್ಯದಲ್ಲಿ ಮುಖ್ಯಮಂತ್ರಿಗಳು ಸಹ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದೆ. ಅಂಕೋಲಾ-ಶಿರೂರು ನಡುವಿನ ಹೆದ್ದಾರಿ ಕುಸಿತದಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಲು ಮುಂದಾಗಿದ್ದಾರೆ. ಅದೇ ರೀತಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಡಿಸಿ ಗಳಿಗೆ ರಾಜ್ಯದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ಸಭೆ ಕರೆದಿದ್ದು ನೆರೆ ಪ್ರದೇಶದಲ್ಲಿ ಜನರ ಹಿತ ಕಾಪಾಡಲು ಸರ್ಕಾರವು ಮುಂದಾಗಿದೆ.