ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ವಿಮಾ) ನೋಂದಣಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ…