
ಬೆಳೆಹಾನಿ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ.
2024- 25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ/ ಅತೀವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಯಾದಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಶೀಲ್ದಾರ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ದಿನಾಂಕ:02-09-2024 ರಂದು ಪ್ರಕಟಿಸಲಾಗಿರುತ್ತದೆ. ಬೆಳೆ ಹಾನಿ ಸಮೀಕ್ಷೆ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ರೈತರು ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 07 ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರ ಮಾಹಿತಿ…