ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.
ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕಗೊಳಿಸಲು ನೂತನ ತಂತ್ರಾಂಶ ಜಾರಿಯಾಗಲಿದೆ. ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದಿದ್ದಾರೆ.
ಏನಿದು ಫ್ರೂಟ್ಸ್ ನಂಬರ್? ಇದರಿಂದ ರೈತರಿಗೆ ಏನು ಲಾಭ?
ಫ್ರೂಟ್ಸ್ ಐಡಿ (ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್) ಎಂಬುದು ಪ್ರತಿಯೊಬ್ಬ ರೈತರೂ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಎಫ್ಐಡಿ ಎಂಬುದು ರೈತರಿಗೆ ಗುರುತಿನ ಚೀಟಿ ಇದ್ದಂತೆ. ಇದರಲ್ಲಿ ರೈತರು ತಾವು ಹೊಂದಿರುವ ಭೂಮಿ ವಿವರ, ಬೆಳೆ, ಸಬ್ಸಿಡಿ, ಹೀಗೆ ರೈತನು ತನ್ನ ಜಮೀನಿನ ಬಗ್ಗೆ ಸಂಪೂರ್ಣ ಮಾಹಿತಿಯು ಇಲ್ಲಿ ನೊಂದಣಿ ಆಗಿರುತ್ತದೆ. ಇದರಲ್ಲಿ ರೈತನು ತನಗೆ ಬೇಕಾದ ಸರ್ಕಾರಿ ಸೌಲಭ್ಯಗಳನ್ನು ಪಡೆಯಬಹುದು.
ಎಫ್.ಐ.ಡಿ ಮಾಡಿಸಿಕೊಳ್ಳಲು ಬೇಕಾದ ದಾಖಲಾತಿಗಳು:-
1. ಆಧಾರ ಕಾರ್ಡ
2. ಬ್ಯಾಂಕ ಪಾಸ್ ಪುಸ್ತಕ
3. ತಮ್ಮ ಹೆಸರಿನಲ್ಲಿ ಇರುವ ಎಲ್ಲ ಜಮೀನುಗಳ ಪಹಣಿ
4. ಮೊಬೈಲ್ ನಂ:-
5. ಅಗತ್ಯ ಬಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿ.
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
• ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.in/OnlineUserLogin.aspx
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.
“Citizen Registration” ಮೇಲೆ ಕ್ಲಿಕ್ ಮಾಡಿ
• ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
• ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ.
• ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ.
• ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
• ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು. ಈ FID ಯನ್ನು ರೈತಶಕ್ತಿ ಯೋಜನೆಯ ಡಿಸೇಲ್ ಸಬ್ಸಿಡಿ,ಪಿಎಂ ಕಿಸಾನ್,ರೈತವಿದ್ಯಾನಿಧಿ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು.
Survey number linked FID status check :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ., (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ ದಾಖಲೆಯಾಗಿ ನೋಡಿ👇🏻) FRUIT ತಂತ್ರಾಂಶದಲ್ಲಿ ಆಗಿದೆ.
ಎಫ್ಐಡಿ ನೊಂದಣಿ ಎಲ್ಲಿ ಮಾಡಿಸಬೇಕು? ಹೆಚ್ಚಿನ ಮಾಹಿತಿಗಾಗಿ ಎಲ್ಲಿ ಸಂಪರ್ಕಿಸಬೇಕು?
ರೈತರೇ ನೀವು ಇನ್ನೂ ಎಫ್ಐಡಿ ನೊಂದಣಿ ಆಗದೆ ಇದ್ದರೆ ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಒಟ್ಟಾರೆ ಕೃಷಿಗೆ ಸಂಬಂಧಿಸಿದ ಇಲಾಖೆ ಭೇಟಿ ನೀಡಿ ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್, ಪಾಸ್ ಪೋರ್ಟ್ ಸೈಜ್ ಪೋಟೋ ತೆಗೆದುಕೊಂಡು ನೊಂದಣಿ ಮಾಡಿಸಿಕೊಳ್ಳಿ.