
ಪಿಎಂ ಕಿಸಾನ್ (Pm kisan) ಕೆವೈಸಿ ಅಪ್ಡೇಟ್ ಲಿಸ್ಟ್ .
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಗೆ ಹೊಸದಾಗಿ ಸೇರುವವರು, ಫಲಾನುಭವಿಯಾಗಲು ಬಯಸುವವರು ‘ಕೃಷಿಕರ ಗುರುತಿನ ಚೀಟಿ’ ಹೊಂದುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಪಿಎಂ-ಕಿಸಾನ್ ರೈತರ ವಿಶಿಷ್ಟ ಗುರುತಿನ ಚೀಟಿಗಳು ಅರ್ಜಿದಾರರು ಕೃಷಿ ಭೂಮಿ ಹೊಂದಿದ್ದಾರೆ ಎಂಬುದನ್ನು ರೈತರ ಗುರು ತಿನ ಚೀಟಿ ದೃಢಪಡಿಸುತ್ತದೆ. ಆದ ಕಾರಣ, ಹೊಸದಾಗಿ ಅರ್ಜಿ ಸಲ್ಲಿಸುವವರು ಕೃಷಿಕರ ಗುರುತಿನ ಚೀಟಿ ಹೊಂದಬೇಕಿದೆ. ಗುರುತಿನ ಚೀಟಿ ಇದ್ದಲ್ಲಿ ನೋಂದಣಿ ಪ್ರಕ್ರಿಯೆ ಸುಲಭ. ಹಾಗಾಗಿ,…