ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ.
ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಕಂತಿಯ ಹಣ ಯಾವಾಗ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಪ್ಡೇಟ್‌ ಕೊಟ್ಟಿದ್ದಾರೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾನುವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ನಮ್ಮ ಸರ್ಕಾರವು ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ನಾವು 2 ಸಾವಿರ ರೂಪಾಯಿ ಹೆಚ್ಚಿಸಿದ್ದೇವೆ. ಇದಾದ ಮೇಲೆ ಇಲ್ಲಿಯ ವರೆಗೆ ಯಾವುದೇ ಸರ್ಕಾರಗಳೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಿಲ್ಲ.

ಇನ್ನು ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂಪಾಯಿ ಹಾಗೂ ಸಹಾಯಕಿಯರ ಗೌರವಧನವನ್ನು 750 ರೂಪಾಯಿ ಹೆಚ್ಚಳ ಮಾಡುವುದಾಗಿ ಹೇಳಲಾಗಿದೆ. ಇದನ್ನು ಸಹ ನಾವು ಮುಂದಿನ ದಿನಗಳಲ್ಲಿ ಜಾರಿಗೆ ತರುಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಯಾವಾಗ ಬರಲಿದೆ ಗೃಹಲಕ್ಷ್ಮಿ ಹಣ ?

ಇನ್ನು ರಾಜ್ಯದಲ್ಲಿ ಗೃಹಲಕ್ಷ್ಮಿ ಹಣದ ಬಾಕಿ ಎರಡು ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ. ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

2023ರ ವಿಧಾನಸಭೆ ಚುನಾವಣೆ ಗೆದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಆಗಿದ್ದೇ ಪಂಚ ಗ್ಯಾರಂಟಿ ಯೋಜನೆಗಳು. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯಿಂದ ರ ಪ್ರತಿ ಕುಟುಂಬದಲ್ಲಿ ಮಹಿಳೆಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ನೀಡುವ ಮಾತು ಕೊಟ್ಟಿದ್ದ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಗೆದ್ದು ಬೀಗಿತ್ತು.ಇನ್ನೂ, ಕೆಲ ತಿಂಗಳಯಿಂದ ಗೃಹ ಲಕ್ಷ್ಮಿ ಹಣ ಜಮಾ ಆಗದಿರುವ ಹಿನ್ನೆಲೆ ಮಹಿಳೆಯರು ಆಕ್ರೋಶವನ್ನು ಹೊರ ಹಾಕಿದ್ರು.

ಇದೀಗ 16 ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇದೀಗ ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್‌ ಸಿಗಲಿದೆ.

ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಜಾಗತಿಕವಾಗಿ ಕೂಡ ಸದ್ದು ಮಾಡುತ್ತಿದ್ದು, ಗೃಹಲಕ್ಷ್ಮೀ ಯೋಜನೆಯಿಂದ ಕರ್ನಾಟಕ ದಿವಾಳಿ ಆಗಲಿದೆ ಅಂತಾ ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಈ ಸಮಯದಲ್ಲೇ, ಗೃಹಲಕ್ಷ್ಮೀ ಹಣ 4,000 ರೂಪಾಯಿ ಹೆಚ್ಚಳ ಮಾಡುವ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆ ಕುರಿತು ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರು ಮಾತನಾಡಿ, ನಾನು ಡಿಕೆ ಶಿವಕುಮಾರ್ ಪದಗ್ರಹಣದಂದೇ ಬಡವರಿಗೆ ಹೇಗಾದರೂ ಸಹಾಯ ಮಾಡಬೇಕು ಅಂತ ಹೇಳಿದ್ದೆ. ರಾಜ್ಯದಲ್ಲಿ ಯಜಮಾನಿ ಮಹಿಳೆಯರಿಗೆ ಜಾರಿಗೊಳಿಸಿರುವಂತ ಗೃಹ ಲಕ್ಷ್ಮೀ ಯೋಜನೆಯೂ ವಿಶೇಷವಾದಂತ ಹಣಕಾಸು ಯೋಜನೆಯಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರವು 2028ರಲ್ಲಿ ಬಂದ್ರೆ ಈಗ ಗೃಹ ಲಕ್ಷ್ಮೀ ಯೋಜನೆಯಡಿ ಯಜಮಾನಿ ಮಹಿಳೆಯರಿ ನೀಡಲಾಗುತ್ತಿರುವಂತ 2000 ಹಣವನ್ನು 4000ಕ್ಕೆ ಏರಿಕೆ ಮಾಡುವುದಾಗಿ ಸದನದಲ್ಲೇ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಘೋಷಿಸಿದರು.ಇಂದು ಗೃಹ ಲಕ್ಷ್ಮೀ ಯೋಜನೆಯಿಂದಾಗಿ ಲಕ್ಷಾಂತರ ಮಹಿಳೆಯ ನೆಮ್ಮದಿಯ ಜೀವನ ನಡೆಸುವಂತೆ ಆಗಿದೆ. ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಆರಂಭದಲ್ಲಿ ಬಹಳಷ್ಟು ಜನರು 2000 ಬರುತ್ತಾ? ಕೊಡುತ್ತಾ ಈ ಸರ್ಕಾರ ಅಂತ ಟೀಕೆ ಮಾಡಿದ್ರು. ಆದರೇ 2000 ಕೊಟ್ಟಿದ್ದು ಕಣ್ಣಾರೆಯೇ ನೋಡುತ್ತಿದ್ದೇವೆ ಎಂದು ಹೇಳಿದರು.

ಯಾರಾದರೂ ಗೃಹ ಲಕ್ಷ್ಮೀ ಯೋಜನೆಯ ಬಗ್ಗೆ ವಿರೋಧ ಮಾಡಿದರೇ ಅವರಿಗೆ ರಾಜ್ಯದ ಯಜಮಾನಿ ಮಹಿಳೆಯರ ಶಾಪ ತಟ್ಟುತ್ತೆ. ಮುಂದಿನ ಬಾರಿಗೆ ನಮ್ಮ ಕಾಂಗ್ರೆಸ್ ಸರ್ಕಾರವೇ ಬಂದ್ರೇ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದ್ರೆ 2000 ಗೃಹ ಲಕ್ಷ್ಮೀ ಹಣವನ್ನು 4000ಕ್ಕೆ ಏರಿಕೆ ಮಾಡಲು ನಾವು ತಯಾರಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರು ತಿಳಿಸಿದರು.

ಹಳ್ಳಿಯಲ್ಲಿ ಇರುವವರಿಗೆ ಇನ್ನೂ 5,000 ಮನೆಗಳನ್ನು ಕೊಡಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಕೆಲವು ಕುಟುಂಬಗಳು ಗುಡಿಸಲಲ್ಲಿ ವಾಸಮಾಡುತ್ತಿದ್ದಾರೆ. 24,000 ಸಾವಿರ ರೂ. ಪ್ರತಿ ವರ್ಷ ಕೊಟ್ಟರೇ ಆ ಬದುಕಿನ ಬದಲಾವಣೆಯ ಬೆಳಕನ್ನು ನೋಡಬೇಕು ಅಂದರೆ ಬೆಂಗಳೂರಲ್ಲಿ ಇರೋರು ಬಂದು ನೋಡಬೇಕು. ದಯವಿಟ್ಟು ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಬಗ್ಗೆ ಯಾರಾದರು ವಿರೋಧ ಮಾಡಿದರೆ ಆ ಶಾಪ ತಟ್ಟುತ್ತದೆ ಎಂದು ಹೇಳಲು ಇಚ್ಛೆ ಪಡುತ್ತೇನೆ. ಇವತ್ತು ನಾನು ಚಾಲೆಂಜ್ ಹಾಕುತ್ತಿದ್ದೇನೆ. ಮುಂದಿನ ಸರ್ಕಾರ ಯಾವುದೇ ಬದಲಾವಣೆ ಆದರೂ ಯಾರೂ ಗ್ಯಾರೆಂಟಿ ಸ್ಕೀಂ ನಿಲ್ಲಸಲು ಆಗುವುದಿಲ್ಲ. ಮುಂದಿನ ಸಾಲಿನ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಾಪಾಸ್ ಅಧಿಕಾರಕ್ಕೆ ಬಂದರೆ 2000 ರೂ. ಅನ್ನು 4000 ರೂ.ಗೆ ಏರಿಕೆ ಮಾಡಲು ನಾವು ತಯರಾಗುತ್ತೇವೆ ಎಂದರು.

ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮಾರ್ಚ್.31ರ ನಂತ್ರ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.‌

ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Spread positive news

Leave a Reply

Your email address will not be published. Required fields are marked *