ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.
ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.
ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.
ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕಬ್ಬು ಕಟಾವು ಯಂತ್ರಗಳು ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ 40 ಲಕ್ಷ ರೂ.ಮತ್ತು ಪರಿಶಿಷ್ಟ ರೈತರಿಗೆ ಗರಿಷ್ಠ 50 ಲಕ್ಷ ರೂ. ರಿಯಾಯಿತಿ ಸಿಗುತ್ತಿದೆ. ಇದು ದೇಶದಲ್ಲೇ ಮೊದಲು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಯಂತ್ರೋಪಕರಣ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ.
ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.
ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.
ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.
ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.
ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ನೀಡಲಾಗುತ್ತಿದೆ. ಕಬ್ಬು ಕಟಾವು ಯಂತ್ರಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ₹40 ಲಕ್ಷ ಮತ್ತು ಪರಿಶಿಷ್ಟ ರೈತರಿಗೆ ಗರಿಷ್ಠ ₹50 ಲಕ್ಷ ರಿಯಾಯಿತಿ ಸಿಗುತ್ತಿದೆ.
ಇಷ್ಟು ದೊಡ್ಡ ಮೊತ್ತದ ಅನುಕೂಲ ಮಾಡಿದ್ದು ದೇಶದಲ್ಲೇ ಮೊದಲು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಭಾನುವಾರ ಬೆಳಗಾವಿ ವಿಭಾಗ ಮಟ್ಟದ ಸಮಾರಂಭದಲ್ಲಿ ಕೃಷಿ ಇಲಾಖೆಯ ಸಹಾಯಧನದಡಿ ರೈತರಿಗೆ ವಿವಿಧ ಯಂತ್ರೋಪಕರಣ, ಸೌಲಭ್ಯಗಳನ್ನು ವಿತರಿಸಿ ಮಾತನಾಡಿದ ಅವರು, ‘1970ರ ದಶಕದಲ್ಲಿ ನಮ್ಮ ದೇಶ ಆಹಾರ ಸ್ವಾವಲಂಬನೆ ಸಾಧಿಸಿತು. ಆಗ 70 ಲಕ್ಷ ಟನ್ ಆಹಾರ ಉತ್ಪಾದಿಸಲಾಗುತ್ತಿತ್ತು. ಈಗ 150 ಲಕ್ಷ ಟನ್ ಉತ್ಪಾದನೆ ಆಗುತ್ತಿದೆ. ಅದಕ್ಕೆ ತಕ್ಕಂತೆ ಜನಸಂಖ್ಯೆಯೂ ಹೆಚ್ಚಾಗಿದೆ’ ಎಂದರು.
‘ಅರಣ್ಯ ಇಲಾಖೆಯ ಅನುಮತಿ ಸಿಗದ ಕಾರಣ ಮಹದಾಯಿ ಯೋಜನೆ ವಿಳಂಬವಾಗುತ್ತಿದೆ. ಕೇಂದ್ರ ಸರ್ಕಾರ ಇಂದೇ ಅನುಮತಿ ನೀಡಿದರೆ ನಾಳೆಯೇ ಕಾಮಗಾರಿ ಆರಂಭಿಸುತ್ತೇವೆ’ ಎಂದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ‘ಈ ರಿಯಾಯಿತಿ ಯೋಜನೆಯು ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಬಜೆಟ್‌ನಲ್ಲಿ ₹50 ಕೋಟಿ, ಕೃಷಿ ಇಲಾಖೆಗೆ ಪ್ರತ್ಯೇಕವಾಗಿ ₹45 ಕೋಟಿ ಸೇರಿ ಒಟ್ಟು ₹95 ಕೋಟಿ ಹಣ ಇದಕ್ಕಾಗಿಯೇ ನೀಡಲಾಗಿದೆ. ಪ್ರತಿ ಐದು ವರ್ಷಕ್ಕೆ ಮರುವಿತರಣೆಗೂ ಅವಕಾಶ ಕಲ್ಪಿಸಲಾಗುವುದು’ ಎಂದರು.
‘ರಾಜ್ಯದಲ್ಲಿ ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿಹೊಂಡ ನಿರ್ಮಿಸಲಾಗಿದೆ. ನೀರಾವರಿಗೆ ₹25 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಒಣಬೇಸಾಯ ಮಾಡುವವರಿಗೆ ಕೃಷಿ ಯಂತ್ರ ವಿತರಿಸಲಾಗುತ್ತಿದೆ’ ಎಂದರು.
₹400 ಕೋಟಿಯ ಯಂತ್ರೋಪಕರಣ ವಿತರಣೆ
2000ಕ್ಕೂ ಹೆಚ್ಚು ಫಲಾನುಭವಿ ರೈತರಿಗೆ ಒಟ್ಟು ₹400 ಕೋಟಿ ಮೌಲ್ಯದ ಕೃಷಿ ಯಂತ್ರೋಕರಣಗಳನ್ನು ವಿತರಿಸಲಾಯಿತು. 78 ರೈತರಿಗೆ ಕಬ್ಬು ಕಟಾವು ಯಂತ್ರ 100 ಪವರ್ ಟಿಲ್ಲರ್ 165 ರೋಟೊವೇಟರ್ 120 ಕಬ್ಬಿಣದ ನೇಗಿಲು 100 ಮೇವು ಕತ್ತರಿಸುವ ಯಂತ್ರ 64 ಬಿತ್ತನೆ ಕೂರಿಗೆ 26 ರಾಶಿ ಯಂತ್ರ 5 ಕೋಲಿ ಕತ್ತರಿಸುವ ಯಂತ್ರ 12 ಭೂಮ್ ಸ್ಪ್ರೇಯರ್ ಯಂತ್ರ 1480 ಸ್ಪ್ರಿಂಕ್ಲರ್ ಸೇರಿ ಒಟ್ಟು 2150 ಕೃಷಿ ಯಂತ್ರೋಪಕರಣ ವಿತರಿಸಲಾಯಿತು.