ರೈತರೇ ನಿಮ್ಮೂರಲ್ಲಿ ಮಳೆ ಯಾವಾಗ ಬರುತ್ತೆ? ಒಂದೇ ಒಂದು ಫೋನ್ ಕರೆಯಲ್ಲಿ ಹೀಗೆ ತಿಳಿಯಿರಿ.
ವರುಣ ಮಿತ್ರ ಕರ್ನಾಟಕ ಸರ್ಕಾರ ರೂಪಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 9243345433 ಮಳೆಯ ಕುರಿತ ಮಾಹಿತಿ ಪಡೆಯಬಹುದಾಗಿದೆ.
ಐಎಂಡಿ ಹೇಳಿದ್ದೇನು?
ಜೂನ್‌ನಿಂದಸೆಪ್ಟೆಂಬರ್‌ವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಉತ್ತಮ ಮುಂಗಾರು ಮಳೆಯಾಗಲಿದೆ. ಒಟ್ಟಾರೆ ದೀರ್ಘಕಾಲೀನ ಸರಾಸರಿಯ ಶೇ.105 ರಷ್ಟು ಮಳೆಯಾಗಲಿದೆ. ಈ ಬಾರಿ ಎಲ್‌ನೋ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿಯ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ.
ಈ ಹವಾಮಾನ ಬದಲಾವಣೆಯು ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ತಗ್ಗು ಒತ್ತಡದ ಪರಿಣಾಮವಾಗಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ಮತ್ತು ದಕ್ಷಿಣ ಒಳನಾಡು. ಜಿಲ್ಲೆಗಳಿಗೆ ವಿಭಿನ್ನ ಎಚ್ಚರಿಕೆಗಳನ್ನು ಘೋಷಿಸಲಾಗಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ. ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಏತನ್ಮಧ್ಯೆ, ಕಲಬುರಗಿಯ ಕೋಡ್ಲಿ ಹೋಬಳಿ ಮತ್ತು ರಾಯಚೂರು. ಜಿಲ್ಲೆಗಳ ಕಲ್ಲೂರು ಹೋಬಳಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು. ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ರಾಜ್ಯದ ಹಲವೆಡೆ. ಭಾನುವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ.
ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆಲಿಕಲ್ಲು ಮಳೆ –
ಕಲ್ಯಾಣ ಕರ್ನಾಟಕದ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ.ಗುಡದಿನ್ನಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಸಾಯಣ್ಣ ಯಾದವ (52) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉತ್ತರ ಒಳನಾಡು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ: ಉತ್ತರ ಒಳನಾಡು ಪ್ರದೇಶದ ಜಿಲ್ಲೆಗಳಾದ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಮತ್ತು ಕೊಪ್ಪಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು. ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯಬಹುದು.
ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಇದು ತೀವ್ರ ಹವಾಮಾನ ಪರಿಸ್ಥಿತಿಗೆ ತಲುಪಲಿದೆ. ರೈತರು, ಸಾರ್ವಜನಿಕರು, ಮತ್ತು ಸ್ಥಳೀಯ ಆಡಳಿತವು ಪ್ರವಾಹ ಸಾಧ್ಯತೆ, ರಸ್ತೆಗಳಲ್ಲಿ ನೀರು ನಿಲ್ಲುವಿಕೆ ಮತ್ತು ಸಂಚಾರ ಸಮಸ್ಯೆಗಳಿಗೆ ಮುಂಜಾಗ್ರತೆ ವಹಿಸಬೇಕು ಎನ್ನಲಾಗಿದೆ.