ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು.
ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ.
ನಾವು ನೀಡಿದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.
ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ₹439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ, ಬಳಿಕ ಸಾವಿರಾರು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿ, ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ ₹100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ.
ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆಅಟಾರಿ ವಲಯ ೧೧ ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ರಜತ ಸಂಭ್ರಮ ಸ್ಮರಣಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಕೃಷಿ, ಹಣ್ಣು ಮೇಳಗಳ ಆಯೋಜನೆಯು ಕೃಷಿಕ್ಷೇತ್ರ ಸಬಲೀಕರಣಗೊಳಿಸುವಲ್ಲಿ ಉತ್ತಮ ಕಾರ್ಯವಾಗಿದ್ದು, ಇದನ್ನು ಉತ್ತೇಜಿಸುತ್ತಿರುವ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಅಭ್ಯಾಸ ನಂದನೆಗಳು. ಕೃಷಿ ಕ್ಷೇತ್ರದಲ್ಲಿನ ಕ್ರಾಂತಿಕಾರಿಕ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಅತ್ಯುತ್ತಮ ಕೆಲಸ ಮಾಡುತ್ತಿವೆ.
ಕಿಸಾನ್ ಸಮೃದ್ದಿ ಯೋಜನೆಯಿಂದ ರೈತರಿಗೆ ಅನೇಕ ಲಾಭಗಳು ದೊರೆಯುತ್ತಿದ್ದು ದೇಶದಾದ್ಯಂತ ರೈತರ ಉತ್ಪನ್ನಗಳಿಗೆ ಬ್ರಾಂಡಿಂಗ್ ಲಭಿಸುತ್ತಿದ್ದಯ, ಆನ್ ಲೈನ್ ಮಾರುಕಟ್ಟೆಗೂ ಉತ್ತೇಜನ ದೊರೆಯುತ್ತಿದೆ.
ಸ್ವಾತಂತ್ರ್ಯದ ವೇಳೆ ದೇಶ ಆಹಾರ ಕೊರತೆಯಲ್ಲಿತ್ತು, ಇದೀಗ ಆಹಾರ ಉತ್ಪನ್ನಗಳಲ್ಲಿ ಸಮೃದ್ದಿ ಸಾಧಿಸಿದ್ದು ಆಹಾರ ಉತ್ಪನ್ನಗಳ ರಫ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಕೃಷಿ ಸಮೃದ್ದಿ ಆಗುತ್ತಿದೆ.ಎಲ್ಲೆಡೆ ಕಿಸಾನ್ ಸಮೃದ್ದಿ ಕೇಂದ್ರಗಳಿವೆ .ರೈತರು ಆಹಾರ, ಪೋಷಕಾಂಶಗಳ ಭದ್ರತೆ ನೀಡುತ್ತಿದ್ದಾರೆ. ವಿಶ್ವಕ್ಕೇ ಆಹಾರ ನೀಡುತ್ತಿರುವ ನಾವು ಸೂಪರ್ ಪವರ್ ಆಗಿ ಹೊರಹೊಮ್ಮುತ್ತಿದ್ದೇವೆ.
ತರೀಕೆರೆ ಶಾಸಕರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಜಿ.ಹೆಚ್. ಶ್ರೀನಿವಾಸ
ಮಾತನಾಡಿ, ಕೆವಿಕೆ ೨ ಲಕ್ಷ ಜನರಿಗೆ ನೇರ ತರಬೇತಿ ನೀಡಿತ್ತಿದಗದು, ಪರೋಕ್ಷವಾಗಿ ೩೫ ಲಕ್ಷ ಜನರಿಗೆ ಸಹಕಾರಿಯಾಗಿದೆ. ಬೀಜ ಉತ್ಪಾದನೆ , ತಾಂತ್ರಿಕತೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ರೈತರಿಗೆ ಬಹು ಉಪಯೋಗವಾಗುವ ಕೆಲಸ ಕೆವಿಕೆ ಮಾಡುತ್ತದೆ ಇದೆ. ಚಿಕ್ಕಮಗಳೂರು ಕೆವಿಕೆ ಸಂಸ್ಥೆಗಳಲ್ಲಿ ಸಹ ಉತ್ತಮ ಕೆಲಸ ಆಗುತ್ತದೆ.ಕೃಷಿ ವಿದ್ಯಾರ್ಥಿಗಳು ೩ ತಿಂಗಳು ರೈತರೊಂದಿಗೆ ಬೆರೆತು ಮಾಹಿತಿ ನೀಡುತ್ತಾ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜೇನು, ಮೀನುಗಾರಿಕೆ ಹೀಗೆ ಸಮಗ್ರ ಕೃಷಿ ಮೂಲಕ ರೈತರಿಗೆ ಸಹಕಾರಿಯಾದ ಕೆವಿಕೆ ಅಭಿವೃದ್ಧಿ ಆಗಲಿ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಕ್ರಾಂತಿಕಾರಿ ಬದಲಾವಣೆಗೆ ಕೃಷಿ ವಿವಿ ಬೇಕೆಂಬ ಉದ್ದೇಶದಿಂದ ವಿವಿ ಸ್ಥಾಪನೆಯಾಗಿದ್ದು ರೈತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹಾಗೂ ಯುವಜನತೆಗೆ ತರಬೇತಿ, ಮಾಹಿತಿ ನೀಡುವಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತಿದೆ. ಕೃಷಿಯಿಂದ ಉದ್ಯೋಗಾವಕಾಶ ಕೂಡ ಹೆಚ್ಚಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್, ಕೃಷಿ ಸಮಾಜದ ಅಧ್ಯಕ್ಷ ನಾಗರಾಜ್ ಹೆಚ್ ಎನ್ , ಡಾ.ಪಿ.ಕೆ.ಬಸವರಾಜ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ , ರಾಯಚೂರು ವಿಶ್ವವಿದ್ಯಾಲಯದ ಡಾ.ಎನ್ ಹನುಮಂತಪ್ಪ,ವಿಶ್ರಾಂತ ಕುಲಪತಿ ಡಾ.ಪಿ.ನಾರಾಯಣಸ್ವಾಮಿ, ಡಾ.ದಿನಕರ್, ಡಾ.ರವಿ ಭಟ್, ಇತರೆ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ರೈತರು ಪಾಲ್ಗೊಂಡಿದ್ದರು.
ಕೆವಿಕೆ ಮುಖ್ಯಸ್ಥ ಡಾ. ಸುನೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಸ್ತರಣಾಧಿಕಾರಿ ಡಾ.ಜಿ.ಕೆ ಗಿರಿಜೇಶ್ ಸ್ವಾಗತಿಸಿದರು.
Agricultural Science Centre ಹಣ್ಣು ಪ್ರಿಯರಿಗಾಗಿ ಹಣ್ಣುಗಳ ರಾಜನೆಂದೇ ಕರೆಯಲ್ಪಡುವ ಮಾವಿನ ಹಣ್ಣಿನ 30 ವಿಶಿಷ್ಟ ಮಾವಿನ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟವಿದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು, ಶಂಕರ, ಸರ್ವಋತು, ರುದ್ರಾಕ್ಷಿ. ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿವಿಧ ತಳಿಯ ಬಾಳೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ.
ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಮ್ಸನ್ ಸೀಡ್‌ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು ಆಗಮಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಬರಲಿದೆ. ಹೀಗಾಗಿ ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ಹಣ್ಣುಗಳು ಲಭಿಸಲಿವೆ. ಅಲ್ಲದೆ, ಗೆಡ್ಡೆ-ಗೆಣಸು ತಳಿಗಳ ಪ್ರದರ್ಶನ ಹಾಗೂ ಬೇಲದ ಹಣ್ಣು, ಅಂಜೂರ ಹಣ್ಣು, ಬಿಜಾಪುರದ ನಿಂಬೆ ಹಣ್ಣು, ಮತ್ತು ಇವುಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಮತ್ತು ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.
ವಿಶಿಷ್ಟ ಖಾದ್ಯಗಳು : ಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಇತ್ಯಾದಿಗಳ ಮೌಲ್ಯವರ್ಧಿತ ಉತ್ಪನ್ನಗಳೊಂದಿಗೆ ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು, ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನಗಳು ಮತ್ತು ಈ ಮೇಳದ ಅಂಗವಾಗಿ ಬೇಸಿಗೆಯ ಸವಿರುಚಿಗಳಾದ ದಾವಣಗೆರೆ ಬೆಣ್ಣೆದೋಸೆ, ಹುಬ್ಬಳ್ಳಿ ಮಿರ್ಚಿ ಮಂಡಕ್ಕಿ, ಆಲೂ ಟ್ವಿಸ್ಟರ್ ಇತ್ಯಾದಿ ಖಾದ್ಯಗಳು ಈ ಮೇಳದ ಪ್ರಮುಖ
ಆಕರ್ಷಣೆಗಳಾಗಿವೆ.
8 ಲಕ್ಷ ಸಸಿಗಳು ಲಭ್ಯ : ಕರಿಮೆಣಸು, ಕೋಕಂ, ಏಲಕ್ಕಿ, ದಾಲ್ಚಿನಿ, ಬಿದಿರು, ಕಾಫಿ, ಪುನರ್ಪುಳಿ, ಗೋಡಂಬಿ ಸೇರಿದಂತೆ ವಿವಿಧ ತಳಿಯ 8 ಲಕ್ಷ ಸಸಿಗಳು ರಿಯಾಯ್ತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ. ಹಣ್ಣುಗಳ ಉತ್ಪನ್ನಗಳಾದ ಜ್ಯೂಸ್, ಜ್ಯಾಮ್, ಜೇನು, ಇತರೆ ಉತ್ಪನ್ನಗಳು, ಸಿರಿಧಾನ್ಯದ ತೊಡೆದೇವು ಈ ರೀತಿಯ ಖಾದ್ಯಗಳು ಲಭ್ಯವಿದ್ದು, ಸಾರ್ವಜನಿಕರು ಕೊಂಡುಕೊಳ್ಳುತ್ತಿದ್ದರು.
ಈ ಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಅಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ / ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಅಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಸ್ವಸಹಾಯ ಸಂಘಗಳ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟವಿದೆ
150 ಮಳಿಗೆ ಸ್ಥಾಪನೆ : 150 ಕ್ಕೂ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ, ರುಚಿಕರ ಹಣ್ಣು ಹಾಗೂ ರೈತರಿಗೆ, ಸ್ವಸಹಾಯ ಗುಂಪುಗಳಿಗೆ, ಉದ್ದಿಮೆದಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಮುಖ್ಯವಾಗಿ ಈ ಮೇಳವು ರೈತರು, ವ್ಯಾಪಾರಿಗಳು, ರಫ್ತುದಾರರು, ಸರ್ಕಾರಿ ಅಧಿಕಾರಿಗಳು ಮತ್ತು ಇನ್ನಿತರ ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿ ಆಗಲು, ಸಂಪರ್ಕ ಹೊಂದಲು ಒಳ್ಳೆಯ ವೇದಿಕೆಯಾಗಿದೆ.
ಅಲ್ಲದೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಆವರಣದ ಪ್ರಾತ್ಯಕ್ಷಿಕೆಯ ತಾಕುಗಳಾದ ಸಮಗ್ರ ಕೃಷಿ ಪದ್ಧತಿ. ಜೇನು ಸಾಕಾಣಿಕೆ ಘಟಕ, ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ, ಜಲ ಕೃಷಿ (ಹೈಡೋಫೋನಿಕ್ಸ್), ಎರೆಹುಳು ಗೊಬ್ಬರ ತಯಾರಿಕೆ ಘಟಕ, ಕೊಳವೆ ಬಾವಿ ಜಲ ಮರುಪೂರಣ ಮಾದರಿ, ತಾರಸಿ ತೋಟ, ಅಲಂಕಾರಿಕ ಮೀನು ಘಟಕಗಳನ್ನು ಜನರು ಸಂದರ್ಶಿಸುತ್ತಿದ್ದರು.